ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನೂರಾರು ಚಲನಚಿತ್ರಗಳಿಗೆ ಪೋಸ್ಟರ ಡಿಸೈನ್ ಮೂಲಕವೆ ಜೀವಕಳೆ ತುಂಬಿ ಪ್ರೇಕ್ಷಕರನ್ನು ಸೆಳೆದು ಚಿತ್ರಗಳ ಯಶಸ್ಸಿಗೆ ಕಾರಣರಾಗುತ್ತಿರುವ ತೆರೆಮರೆಯ ಚಲನಚಿತ್ರ ಪ್ರಚಾರ ಕಲಾವಿದ ‘ದೇವು’ ಅವರಿಗೆ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬೆಂಗಳೂರಿನ ಕಲಾಗ್ರಾಮ ಸಂಸ್ಕೃತಿಕ ಭವನದಲ್ಲಿ ನವಂಬರ್ ೨೯ರಂದು ಹಮ್ಮಿಕೊಂಡಿರುವ ಸಮಾರಂಭದಲ್ಲಿ ದೇವು ಅವರ ಚಲನಚಿತ್ರ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಪರಿಗಣಿಸಿ ಬೆಂಗಳೂರಿನ ಕಲಾಭೂಮಿ ಪ್ರತಿಷ್ಠಾನ, ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ವೇಳೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾರಾ ಗೋವಿಂದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಗೌರವ ಕಾರ್ಯದರ್ಶಿ ಸುಂದರ್ ರಾಜ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

