ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕೇಂದ್ರ ಪುರಸ್ಕೃತ ಶಿಷ್ಯವೇತನ ಕಾರ್ಯಕ್ರಮದಡಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಇ-ಕೆವೈಸಿ ಬಯೋ ಮೆಟ್ರಿಕ್ ಮಾಡುವುದು ಕಡ್ಡಾಯವಾಗಿರುತ್ತದೆ.
ಈಗಾಗಲೇ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಬಯೋಮೆಟ್ರಿಕ್ ಇ-ದೃಢೀಕರಣ ಮಾಡಲು ನಾಗರಿಕ ಸೇವಾ ಕೇಂದ್ರಗಳಾದ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಇತರೆ ಸೇವಾ ಕೇಂದ್ರಗಳಲ್ಲಿ ಮತ್ತು ಸಹಾಯಕ ನಿರ್ದೇಶಕರು (ಗ್ರೇಡ್-೧) ಸಮಾಜ ಕಲ್ಯಾಣ ಇಲಾಖೆ ವಿಜಯಪುರ ಕಚೇರಿಯಲ್ಲಿ ವಿದ್ಯಾರ್ಥಿಗಳು ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಿದ ಪ್ರತಿ ಮತ್ತು ಆಧಾರ ಕಾರ್ಡ ಪ್ರತಿಯೊಂದಿಗೆ ಬಯೋಮೆಟ್ರಿಕ್ ಇ-ದೃಢೀಕರಣವನ್ನು ಉಚಿತವಾಗಿ ಮಾಡಿಕೊಂಡು ಶಿಷ್ಯವೇತನ ಪಡೆಯಲು ಸೂಚಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
