Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 12,2026

ಕೈಯಲ್ಲಿ ಕುಣಿವ ಆ ಹೊನ್ನ ಬಳೆಯ ಘಲ್ ಘಲ್ ತಾಳಕೆ

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೀರಿನ ಬಾಟಲ್ ವಿತರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಚನ ಸಾಹಿತ್ಯ ಕನ್ನಡ ಸಾಹಿತ್ಯದ ಮೂಲ :ಅಪ್ಪುಗೌಡ
(ರಾಜ್ಯ ) ಜಿಲ್ಲೆ

ವಚನ ಸಾಹಿತ್ಯ ಕನ್ನಡ ಸಾಹಿತ್ಯದ ಮೂಲ :ಅಪ್ಪುಗೌಡ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವರದಾನಿ ಲಕ್ಕಮ್ಮದೇವಿ ಪ್ರದಾನ ವೇದಿಕೆ
ಇವಣಗಿ(ಬಸವನಬಾಗೇವಾಡಿ): ಕನ್ನಡ ಸಾಹಿತ್ಯಕ್ಕೆ ೨೫೦೦ ವಷ೯ಗಳ ಗಟ್ಟಿಯಾದ ಇತಿಹಾಸವಿದೆ. ವಚನ ಸಾಹಿತ್ಯದ ಮೂಲ ಕನ್ನಡ ಸಾಹಿತ್ಯ ಎಂದು ಜೆ.ಡಿ.ಎಸ್ ರಾಜ್ಯ ಉಪಾಧ್ಯಕ್ಷ ಮನಗೂಳಿಯ ಅಪ್ಪುಗೌಡ ಪಾಟೀಲ ಅಭಿಪ್ರಾಯಪಟ್ಟರು.
ಸುಕ್ಷೇತ್ರ ಇವಣಗಿಯ ವರದಾನಿ ಲಕ್ಕಮ್ಮದೇವಿ ದೇವಸ್ಥಾನದ ಆವರಣದಲ್ಲಿ ಜರುಗಿದ ಬಸವನ ಬಾಗೇವಾಡಿ ೧೦ನೇ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನದ ಮೊದಲ ಶರಣ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾವೆಲ್ಲರೂ ಸೇರಿ ಕನ್ನಡ ನಾಡು-ನುಡಿಯನ್ನು ಉಳಿಸುವ ಕಾಯಕವನ್ನು ಪ್ರಾಮಾಣಿಕವಾಗಿ ಮಾಡೋಣ ಎಂದರು.
ಸಾನಿದ್ಯ ವಹಿಸಿದ್ದ ಹೂವಿನ ಹಿಪ್ಪರಗಿ ಪತ್ರಿವನ ಮಠದ ಪೂಜ್ಯ ದ್ರಾಕ್ಷಾಯಣಿ ಮಾತಾಜಿ ಆಶೀರ್ವಚನ ನೀಡುತ್ತಾ ಬಸವಣ್ಣನವರು ನಡೆದಾಡಿದ ಪುಣ್ಯ ಪಾವನ ನೆಲವಿದು. ಈ ನೆಲದಲ್ಲಿ ಬದುಕಿದ ನಾವೇ ಧನ್ಯರು. ನುಡಿದಂತೆ ನಡೆದು ಹೋದ ಶರಣರು ನಮಗೆಲ್ಲ ಆದಶ೯ಪ್ರಾಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಶರಣ ಸಾಹಿತ್ಯ ಪರಿಷತ್ತಿ ತಾಲೂಕಾಧ್ಯಕ್ಷ ವಿ.ಬಿ.ಮತೂ೯ರ ಮಾತನಾಡಿ, ಶರಣರ ಆದಶ೯ವಿಚಾರಗಳು ನಮ್ಮೆಲ್ಲರ ಬದುಕಿಗೆ ಸ್ಪೂರ್ತಿಯಾಗಿದ್ದು. ಶರಣರ ವಿಚಾರಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಬಸವಾದಿ ಶರಣರ ಚಿಂತನೆಗಳು ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಜಿಲ್ಲಾ ಕಸಾಪ ಸಂಘಟನಾ ಕಾರ್ಯದರ್ಶಿ ಮಹಮ್ಮದ್ ಗೌಸ ಹವಾಲ್ದಾರ ಮಾತನಾಡಿ, ಎಲ್ಲರಿಗೂ ಅಥ೯ವಾಗುವ ರೀತಿಯಲ್ಲಿ ಅತ್ಯಂತ ಸರಳವಾಗಿ, ಸುಲಭವಾಗಿ ವಚನಗಳನ್ನು ರಚಿಸಿ ಸಮಾಜದ ಮೌಢ್ಯಗಳನ್ನು ಕಿತ್ತೊಗೆದು ವೈಚಾರಿಕ ಪ್ರಜ್ಞೆ ಮೂಡಿಸಿದ ಸಾಹಿತ್ಯವೆಂದರೆ ಅದು ವಚನ ಸಾಹಿತ್ಯ ಎಂದರು.
ವಚನ ಸಾಹಿತ್ಯದಲ್ಲಿ ಶರಣೆಯರ ಕೊಡುಗೆ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಸಾಹಿತಿ ಶೋಭಾ ಮೇಡೆಗಾರ ಮಾತನಾಡುತ್ತಾ, ವಚನ ಸಾಹಿತ್ಯದ ಮೂಲಕ ಶರಣೆಯರು ಸಮಾಜದಲ್ಲಿ ಸ್ತ್ರೀ-ಪುರುಷ ಎಂಬ ಬೇಧ ಭಾವವನ್ನು ಅಳಿಸಿಹಾಕಿ ಅನುಭವ ಮಂಟಪದಲ್ಲಿಯ ಚರ್ಚಾಗೋಷ್ಠಿಯಲ್ಲಿ ಭಾಗವಹಿಸುವ ಮೂಲಕ ಮಹಿಳೆಯರಲ್ಲಿ ಜಾಗೃತಿ ಮೂಡಿಸುವಲ್ಲಿ ಶರಣೆಯರು ಮಹತ್ವದ ಪಾತ್ರ ವಹಿಸಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ಶಿವನಗೌಡ ಎಸ್. ಬಿರಾದಾರ, ಬಲ್ಲಪ್ಪ ನಂದಗಾವಿ, ವಿಶ್ವನಾಥ ಪಾಟೀಲ, ರಮೇಶ ಸೂಳೀಭಾವಿ, ಆರ್.ಜಿ.ಅಳ್ಳಗಿ, ಸಂಗಮೇಶ ಪೂಜಾರಿ, ಉಮೇಶ ಕೌಲಗಿ, ಶೇಖರ ಗೊಳಸಂಗಿ, ಅರವಿಂದ ಸಾಲವಾಡಗಿ, ಸುಭಾಸ ಚಕ್ರಮನಿ, ಹಾಗೂ ಗಿರಿಜಾ ಪಾಟೀಲ ಮಾತನಾಡಿದರು.
ಪಿ.ಎಸ್ ಬಾಗೇವಾಡಿ ಹಾಗೂ ಲಕ್ಷ್ಮೀ ಕಳ್ಳಿಗುಡ್ಡ ಕಾಯ೯ಕ್ರಮ ನಿರೂಪಿಸಿದರು. ಬಸವರಾಜ ಚಿಂಚೊಳ್ಳಿ ಸ್ವಾಗತಿಸಿದರು. ಎಸ್.ಆರ್.ಮಠ ಹಾಗೂ ಡಿ.ಕೆ.ಪಾಟೀಲ ನಿವ೯ಹಿಸಿದರು. ಗಿರಿಜಾ ಸಜ್ಜನ ವಂದಿಸಿದರು.

BIJAPUR NEWS public public news udaya rashmi Udayarashmi today newspaper
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 12,2026

ಕೈಯಲ್ಲಿ ಕುಣಿವ ಆ ಹೊನ್ನ ಬಳೆಯ ಘಲ್ ಘಲ್ ತಾಳಕೆ

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೀರಿನ ಬಾಟಲ್ ವಿತರಣೆ

ಜು.೧೪ ರಂದು ನೈಕಾನ್ ಮಿರರ್‌ಲೆಸ್ ತಂತ್ರಜ್ಞಾನ ಕಾರ್ಯಾಗಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 12,2026
    In ದಿನಪತ್ರಿಕೆ
  • ಕೈಯಲ್ಲಿ ಕುಣಿವ ಆ ಹೊನ್ನ ಬಳೆಯ ಘಲ್ ಘಲ್ ತಾಳಕೆ
    In ವಿಶೇಷ ಲೇಖನ
  • ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೀರಿನ ಬಾಟಲ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಜು.೧೪ ರಂದು ನೈಕಾನ್ ಮಿರರ್‌ಲೆಸ್ ತಂತ್ರಜ್ಞಾನ ಕಾರ್ಯಾಗಾರ
    In (ರಾಜ್ಯ ) ಜಿಲ್ಲೆ
  • ಕಾರ್ಯಕರ್ತರು ಸಕ್ರೀಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ಘಟನೆ ಮತ್ತು ಪ್ರತಿಕ್ರಿಯೆಯ ನಡುವಿನ ಆ ಕ್ಷಣ..
    In ವಿಶೇಷ ಲೇಖನ
  • ಡಿವೈಡರ್‌ಗೆ ಕಾರು ಡಿಕ್ಕಿ; ತಾಯಿ-ಇಬ್ಬರು ಪುತ್ರರ ದುರ್ಮರಣ!
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ನಿಂದ ಎಸ್‌ಐಆರ್ ಪ್ರಕ್ರಿಯೆ ನಿಷ್ಕ್ರೀಯಗೊಳಿಸುವ ಷಡ್ಯಂತ್ರ
    In (ರಾಜ್ಯ ) ಜಿಲ್ಲೆ
  • ಸಮ್ಮೇಳನಾಧ್ಯಕ್ಷಕರಾಗಿ ಹ.ಮಾ.ಪೂಜಾರ ಆಯ್ಕೆಗೆ ಮೌಲಾಲಿ ಹರ್ಷ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದ ವಿದ್ಯಾಸ್ಪೂರ್ತಿ ಶಾಲೆಯ ಅನುಮತಿ ರದ್ದು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.