ಉದಯರಶ್ಮಿ ದಿನಪತ್ರಿಕೆ
ಕಲಕೇರಿ: ಗ್ರಾಮದ ಮಲ್ಲಿಕಾರ್ಜುನ ವಿಧ್ಯಾವರ್ಧಕ ಸಂಘದ ಬಸವೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಧ್ಯಾರ್ಥಿನಿ ಮಲ್ಲಿಕಾ ಪಡೇಕನೂರ ಸಿಂದಗಿಯ ಎಚ್ ಜಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ೨೦೨೪-೨೫ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಚಟುವಟಿಕೆಗಳ ಇಂಗ್ಲೀಷ ಪ್ರಬಂಧ ಸ್ಪರ್ಧೆಯಲ್ಲಿ ಬಾಗವಹಿಸಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ದ್ವಿತೀಯ ಪಿಯುಸಿ ವಿಭಾಗದಿಂದ ಇಂಗ್ಲೀಷ ಪ್ರಬಂಭ ಸ್ಪರ್ಧೆಯಲ್ಲಿ ಬಸಮ್ಮ ವಾಲೀಕಾರ ದ್ವಿತೀಯ ಸ್ಥಾನ ಪಡೆದಿದ್ದು, ದ್ವಿತೀಯ ಪಿಯುಸಿ ಅಶುಭಾಷಣ ಸ್ಪರ್ಧೆಯಲ್ಲಿ ಕುಮಾರಿ ಗುರುಬಾಯಿ ಕರಗಾರ ದ್ವಿತೀಯ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದು, ವಿಧ್ಯಾರ್ಥಿಗಳ ಸಾಧನೆಗೆ ಪ್ರಾಚಾರ್ಯ ಸಿ ಎಸ್ ಹಿರೇಮಠ, ಇಎಲ್‌ಸಿ ಕ್ಲಬ್ ಸಂಚಾಲಕ ಬಸವರಾಜ್ ಕುಂಬಾರ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.