ಉದಯರಶ್ಮಿ ದಿನಪತ್ರಿಕೆ
ಕಲಕೇರಿ: ಗ್ರಾಮದ ಜ್ಞಾನ ಜ್ಯೋತಿ ಶ್ರೀ ಸಿದ್ಧೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಿವಾನಂದ ಗಣೇಶಮಠ ಇವರು ಜಿಲ್ಲಾ ಪಂಚಾಯತ್ ವಿಜಯಪುರ, ಶಾಲಾ ಶಿಕ್ಷಣ ಇಲಾಖೆ, ಶಿಕ್ಷಕರ ಕಲ್ಯಾಣ ನಿಧಿ, ಶಿಕ್ಷಕರ ಸದನ ಬೆಂಗಳೂರು ಇವರ ಸಹಯೋಗದಲ್ಲಿ ಇತ್ತೀಚೆಗೆ ವಿಜಯಪುರದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದರು.
ಈ ವೇಳೆ ಅಧಿಕಾರಿಗಳು ಶಿಕ್ಷಕ ಶಿವಾನಂದ ಗಣೇಶಮಠ ಅವರಿಗೆ ಪ್ರಶಸ್ತಿ ಪತ್ರವನ್ನು ನೀಡಿ ಅಭಿನಂದನೆ ಸಲ್ಲಿಸಿದರು.