ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸಂಘಟನೆ, ಶಿಸ್ತು, ಸಮಯ ಪಾಲನೆ, ದೇಶ ಸೇವೆಗೆ ಸದಾ ಸಿದ್ದವಾಗಿದ್ದು, ಸೇವೆಯೇ ತನ್ನ ಉಸಿರಾಗಿಸಿಕೊಂಡು ಸೇವೆ ಗೈಯುತ್ತಿರುವ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಪ್ರಾಚಾರ್ಯೆ ಡಾ. ಆರ್ ಎಂ ಮಿರ್ದೆ ಹೇಳಿದರು.
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್. ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದ ಐಕ್ಯೂಎಸಿ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಹಯೋಗದಲ್ಲಿ ಜರುಗಿದ ೨೦೨೪-೨೫ ಪ್ರಸಕ್ತ ವರ್ಷದ ರೋವರ್ಸ್ ಮತ್ತು ರೆಂಜರ್ಸ ವಿದ್ಯಾರ್ಥಿಗಳಿಗೆ ದೀಕ್ಷಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಇದರ ಉದ್ದೇಶಗಳು ಸಿದ್ದಾಂತಗಳನ್ನು ಅಳವಡಿಸಿಕೊಂಡು ದೇಶದ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕು. ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಇದು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ದಾರಿದೀಪ. ಅದರಂತೆ ವಿದ್ಯಾರ್ಥಿಗಳು ತಮ್ಮ ಕಲಿಕಾ ಹಂತದಲ್ಲಿ ಇಂತಹ ಬೃಹತ್ ಸಂಘಟನೆಯಲ್ಲಿ ಪಾಲ್ಗೊಂಡು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಂಘಟನಾ ಕಾರ್ಯದರ್ಶಿ ರಾಜಶೇಖರ ಖೇಡಗಿ ಅವರು ಮಾತನಾಡಿ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ, ವ್ಯಕ್ತಿತ್ವ ವಿಕಸನಕ್ಕೆ, ದೇಶಸೇವೆಗೆ ಈ ಸಂಸ್ಥೆಯ ಕೊಡುಗೆ ಅನನ್ಯವಾದುದು. ಹಾಗೂ ವಿಶ್ವ ಮಟ್ಟದ ಸಾಧನೆಗೆ ವಿದ್ಯಾರ್ಥಿಗಳನ್ನು ಸಿದ್ದಗೊಳಿಸುವಲ್ಲಿ, ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವಲ್ಲಿ, ಸಮಾಜ ಸೇವೆ ಮಾಡುವಲ್ಲಿ ಸೇವೆ ಗುರುತರವಾದುದು ಎಂದು ಹೇಳಿದರು.
ಈ ಸಂದರ್ಭದಲ್ಲಿ, ಐಕ್ಯೂಎಸಿ ನಿರ್ದೇಶಕ ಡಾ.ಪಿ.ಎಸ್.ಪಾಟೀಲ, ದೈಹಿಕ ನಿರ್ದೇಶಕ ಎಸ್.ಕೆ.ಪಾಟೀಲ, ರೇಂಜರ್ಸ ವಿಭಾಗದ ನೋಡಲ್ ಅಧಿಕಾರಿ ಡಾ. ಉಷಾದೇವಿ ಹಿರೇಮಠ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ನುಡಿದರು. ಉಪ ಪ್ರಾಚಾರ್ಯ ಮತ್ತು ರೋವರ್ಸ್ ವಿಭಾಗ ದ ನೋಡಲ್ ಅಧಿಕಾರಿಗಳಾದ ಡಾ. ಅನೀಲ ಭೀ. ನಾಯಕ ದೇಶಭಕ್ತಿ ಗೀತೆಯನ್ನು ಹಾಡಿ ವಂದಿಸಿದರು. ಕುಮಾರಿ. ವಿಜಯಲಕ್ಸ್ಮಿ ಪಾಚಾ ಪ್ರಾರ್ಥಿಸಿದರು.
ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ವಯಂ ಸೇವಕ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.