ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಜಾನಪದ ಕಲಾ ಪ್ರಕಾರಗಳ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಯುವಜನ ಮೇಳ ಹಾಗೂ ಯುವಜನೋತ್ಸವ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಉತ್ತೇಜಿಸುವ ನಿಟ್ಟಿನಲ್ಲಿ ಯುವಜನರಿಗೆ ಕಲಾ ಪ್ರಕಾರಗಳ ತರಬೇತಿ ಶಿಬಿರವನ್ನು 50 ಶಿಬಿರಾರ್ಥಿಗಳಿಗೆ ಡಿ.10ರಿಂದ 17ರವರೆಗೆ 8 ದಿನಗಳ ಆಯೋಜಿಸಲಾಗಿದೆ.
ಆಸಕ್ತ ಯುವಕ-ಯುವತಿಯರು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯಪುರ ಕಚೇರಿ ಅರ್ಜಿ ಪಡೆದು, ದಿನಾಂಕ : 08-12-2024ರೊಳಗೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ: 08352-251085, ಮೊ: 8792185141 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.