Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆತ್ಮವಿಶ್ವಾಸದಿಂದ ಮುನ್ನಡೆದು ಸಾಧನೆಗೈಯ್ಯಿರಿ
(ರಾಜ್ಯ ) ಜಿಲ್ಲೆ

ಆತ್ಮವಿಶ್ವಾಸದಿಂದ ಮುನ್ನಡೆದು ಸಾಧನೆಗೈಯ್ಯಿರಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಶ್ವ ವಿಕಲಚೇತನರ ದಿನಾಚರಣೆಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಕರೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜೀವನದಲ್ಲಿ ಸಾಧನೆ ಮಾಡಲು ಮನಸ್ಸು ಮುಖ್ಯ, ಮನಸ್ಸಿದ್ದಲ್ಲಿ ಮಾರ್ಗ ಎಂಬಂತೆ ವಿಶೇಷ ಚೇತನರು ಒಂದು ವಿಶೇಷ ಸದೃಢ ಮನಸ್ಸು ಹೊಂದಿರುತ್ತಾರೆ. ಸಾಧನೆಗೆ ಯಾವುದೂ ಅಡ್ಡಿಯಾಗಲಾರದು. ಆತ್ಮವಿಶ್ವಾಸದಿಂದ ಎಂತಹ ಸನ್ನಿವೇಶ-ಸಂದರ್ಭವನ್ನು ಛಲದಿಂದ ಎದುರಿಸಿ ಸಾಧನೆಗೆ ಮುಂದಾಗುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ-2024 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾಧನೆ ಸಾಧಕನ ಸೊತ್ತು. ದೃಢ ಮನಸ್ಸು ಹೊಂದಿ, ಸಾಧಕರಾಗಿ ಸಮಾಜಕ್ಕೆ ಕೊಡುಗೆ ನೀಡಲು ಮುಂದಾಗಬೇಕು ಎಂದು ಹೇಳಿದರು.
ಜೀವನದಲ್ಲಿ ಆಶಾಭಾವನೆ ಹೊಂದಿರಬೇಕು. ಸದಾ ಪ್ರಯತ್ನವಾದಿಯಾಗಿರಬೇಕು. ಸತತ ಪ್ರಯತ್ನ ಯಶಸ್ವಿಗೆ ಸಹಕಾರಿಯಾಗಿದೆ. ಜೀವನದಲ್ಲಿ ಸಾಧನೆ ಮಾಡಲು ಮಾನಸಿಕ ದೃಢತೆ ಹೊಂದಬೇಕು. ಮಾನಸಿಕವಾಗಿ ಸದೃಢತೆಯಿಂದ ಸಾಧನೆಯ ಶಿಖರವನ್ನೇರಬಹುದಾಗಿದೆ ಎಂದು ಅವರು ಹೇಳಿದರು.
ವಿಶೇಷಚೇತನರಿಗೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಇಂತಹ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಜಿಲ್ಲಾಡಳಿತವೂ ಸಹ ಸದಾ ವಿಶೇಷ ಚೇತನರ ಕುಂದು ಕೊರತೆಗಳಿಗೆ ಸ್ಪಂದಿಸುತ್ತದೆ. ಶಿಸ್ತುಬದ್ಧ ಜೀವನ ನಡೆಸುವ ಮೂಲಕ ಉತ್ತಮ ಬದುಕು ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ ಮಾತನಾಡಿದರು.
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಸವಿತಾ ಕಾಳೆ ಅವರು ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಸಾಧನೆ ಮಾಡಿದ ರಾಜೇಶ ಪವಾರ, ಬಂದೇನವಾಜ ಕಲ್ಲೂರ, ಮೋದಿನ ಪಾಶ, ಅಶೋಕ ವಾಲಿಕಾರ, ಶಶಿಕಲಾ ಸೋನಾರ, ಸುಮೀತ ಪಾಂಡಿಚೇರಿ, ಸಂಜೀವ ಭವನಸಿಂಗ್ ಹಜೇರಿ, ಅಂಬಣ್ಣಾ ಗುನ್ನಾಪುರ ರಶ್ಮಿ ಚಿತ್ತವಾಡಗಿ, ಮೌಲಾಲಿಕ ಮಂಟೂರ ಅವರನ್ನು ಸನ್ಮಾನಿಸಲಾಯಿತು.
ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಅಧಿಕಾರಿ ರಾಜಶೇಖರ ಧೈವಾಡಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಡಿಎಆರ್ ಡಿವೈಎಸ್‍ಪಿ ಡಿ.ವೈ.ಧನಗರ, ವಾರ್ತಾಧಿಕಾರಿ ಅಮರೇಶ ದೊಡಮನಿ, ನಿಮಿಷ ಆಚಾರ್ಯ, ವಿನೋದ ಖೇಡ, ರಶ್ಮಿ ಚಿತ್ತವಾಡಗಿ, ಉಪಾಧ್ಯಾಯ, ಫಾದರ್ ಟಿಯೋಲ್ ಮಚಾದೋ ಸೇರಿದಂತೆ ಜಿಲ್ಲೆಯ ಎಲ್ಲ ಎಂಆರ್‍ಡಬ್ಲೂ, ವಿಆರ್‍ಡಬ್ಲೂ, ಯುಆರ್‍ಡಬ್ಲೂ ಒಕ್ಕೂಟ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸ್ವಯಂ ಸೇವಾ ಸಂಸ್ಥೆಗಳು ಉಪಸ್ಥಿತರಿದ್ದರು.

ತ್ರಿ-ಚಕ್ರ ವಾಹನ ಜಾಥಾ

ಇದಕ್ಕೂ ಮೊದಲು ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ನಡೆದ ಇಂಧನ ಚಾಲಿತ ತ್ರಿ-ಚಕ್ರ ವಾಹನ ಜಾಥಾ ಜರುಗಿತು.

“ಜಿಲ್ಲೆಯಲ್ಲಿ 45,353 ಜನ ವಿಕಲಚೇತನರಿದ್ದು, ಈ ಪೈಕಿ 33,251 ಜನರಿಗೆ ಯುಡಿಐಡಿ ಕಾರ್ಡಗಳನ್ನು ವಿತರಿಸಲಾಗಿದೆ. ಯುಡಿಐಡಿ ಕಾರ್ಡ ಪಡೆದ ಎಲ್ಲ ವಿಕಲಚೇತನರಿಗೆ ವಿವಿಧ ಸಾಧನ-ಸಲಕರಣೆಗಳು, ವಿದ್ಯಾರ್ಥಿವೇತನ, ಇಂಧನ ಚಾಲಿತ ತ್ರಿಚಕ್ರ ವಾಹನ, ಲ್ಯಾಪ್‍ಟಾಪ್, ಬ್ರೈಲ್‍ಕಿಟ್ ಹಾಗೂ ಸ್ವಯಂ ಉದ್ಯೋಗ ಕೈಗೊಳ್ಳಲು ಹೊಲಿಗೆಯಂತ್ರ ಸೇರಿದಂತೆ ಇನ್ನಿತರ ಸಾಧನ ಸಲಕರಣೆಗಳನ್ನು ಒದಗಿಸಲಾಗುತ್ತಿದೆ. ವಿಕಲಚೇತನರಿಗೆ ಸರ್ಕಾರದ ಸೌಲಭ್ಯಗಳನ್ನು ಮನೆಬಾಗಿಲಿಗೆ ತಲುಪಿಸಲು ಸರ್ಕಾರ, ಜಿಲ್ಲಾಡಳಿತ, ಸ್ವಯಂ ಸೇವಾ ಸಂಸ್ಥೆಗಳು ಕಾರ್ಯೋನ್ಮುಖವಾಗಿವೆ.”

– ಸವಿತಾ ಕಾಳೆ
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು
    In (ರಾಜ್ಯ ) ಜಿಲ್ಲೆ
  • ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ
    In ವಿಶೇಷ ಲೇಖನ
  • ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ
    In (ರಾಜ್ಯ ) ಜಿಲ್ಲೆ
  • ವಿಧಾನಸಭೆಯಲ್ಲಿ ಡಿಸಿಎಂ ಡಿಕೆಶಿ ವರ್ತನೆ ಸರಿಯಲ್ಲ :ಯತ್ನಾಳ
    In (ರಾಜ್ಯ ) ಜಿಲ್ಲೆ
  • ಒಲವಿನ ಪೂಜೆಯಲಿ ಒಂದಾಗೋಣ
    In ವಿಶೇಷ ಲೇಖನ
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.