Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

“ನಿರ್ಲಕ್ಷ್ಯಕ್ಕೊಳಗಾದ ಆಲಮೇಲ ತಾಲೂಕು :ಹೋರಾಟದ ಎಚ್ಚರಿಕೆ

ಡಿ.೨೨ ರಂದು ಜಿಲ್ಲಾ ಮಟ್ಟದ ಕೆಡಿಪಿ ಸಭೆ

ವಿಜಯಪುರ: ಏಕತಾ ನಗರದಲ್ಲಿ ಮಣಿಕಂಠ ಮಹಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನೂರಾರು ಮಹಿಳೆಯರಿಂದ ಸಾಗಿದ ಭದ್ರಕಾಳಿ ಅಮ್ಮನವರ ಬೆಳ್ಳಿ ರಥ
(ರಾಜ್ಯ ) ಜಿಲ್ಲೆ

ನೂರಾರು ಮಹಿಳೆಯರಿಂದ ಸಾಗಿದ ಭದ್ರಕಾಳಿ ಅಮ್ಮನವರ ಬೆಳ್ಳಿ ರಥ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪಟ್ಟಣದಲ್ಲಿ ಮಂಗಳವಾರ ಶ್ರೀ ವೀರಭದ್ರದೇವರು ಹಾಗೂ ಭದ್ರಕಾಳಿ ಅಮ್ಮನವರ ಬೆಳ್ಳಿ ರಥವನ್ನು ನೂರಾರು ಮಹಿಳೆಯರು ಎಳೆಯುವುದರ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು. ಉತ್ತರ ಕರ್ನಾಟಕದಲ್ಲಿಯೇ ಅತ್ಯಂತ ವಿಶೇಷವಾಗಿ ಮಹಿಳೆಯರೆ ರಥವನ್ನು ಎಳೆಯುವುದು ಸಿಂದಗಿ ಪಟ್ಟಣದಲ್ಲಿ ಇರುವುದು ಈ ಭಾಗದ ಪುಣ್ಯವೇ ಸರಿ.
ಸಾರಂಗಮಠದ ಪೂಜ್ಯ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಇಲ್ಲಿನ ವೀರಭದ್ರೇಶ್ವರ ಹಾಗೂ ಭದ್ರಕಾಳಿ ಅಮ್ಮನವರ ಭಕ್ತರ ಇಚ್ಚೇಷ್ಟೇಗಳ ಈಡೇರಿಕೆಗಾಗಿ ಕಳೆದ ಏಳು ವರ್ಷಗಳಿಂದ ಮಹಿಳೆಯರೇ ಈ ರಥವನ್ನು ಎಳೆಯುವ ಸಂಪ್ರದಾಯಕ್ಕೆ ವಿಶೇಷ ಮನ್ನಣೆ ಕೊಟ್ಟಿರುವುದು ಇತಿಹಾಸ. ರಥದ ಬೆಳ್ಳಿ ಪೀಠದಲ್ಲಿ ರಾರಾಜಿಸುತ್ತಿದ್ದ ವೀರಭದ್ರದೇವರು ಮತ್ತು ಭದ್ರಕಾಳಿ ಅಮ್ಮನವರ ಉತ್ಸವ ಮೂರ್ತಿಗಳೊಂದಿಗೆ ಸಾಗಿದ ರಥ ಮತ್ತು ಬೆಳ್ಳಿ ಪಲ್ಲಕ್ಕಿ, ನಗರದ ಸಾರಂಗಮಠದಿಂದ ಪ್ರಾರಂಭಗೊಂಡು ಸ್ವಾಮಿ ವಿವೇಕಾನಂದ ವೃತ್ತ, ತೋಂಟದ ಡಾ.ಸಿದ್ಧಲಿಂಗ ಮಹಾಸ್ವಾಮಿಗಳ ರಸ್ತೆಯ ಮಾರ್ಗವಾಗಿ, ಕಾಯಿಪಲ್ಲೆ ಮಾರ್ಕೆಟ್ ಬಳಿ ಇರುವ ಗಚ್ಚಿನಮಠದ ಚೆನ್ನವೀರ ಸ್ವಾಮೀಜಿ ಪ್ರೌಢಶಾಲೆಯ ಅವರಣದಲ್ಲಿರುವ ವೀರಭದ್ರೇಶ್ವರ ಹಾಗೂ ಭದ್ರಕಾಳಿ ಅಮ್ಮನವರ ದೇವಸ್ಥಾನಕ್ಕೆ ತೆರಳಿತು.
ನಗರದುದ್ದಕ್ಕೂ ಉಡಪಿಯ ಸ್ಕಂದ ಚೆಂಡೆ ಬಳಗದವರಿಂದ ನಡೆದ ಕುಣಿತ ಜನಮನಸೆಳೆಯಿತು. ಪುರವಂತಿಕೆ, ಜಯ ಘೋಷಗಳೊಂದಿಗೆ ಬೆಳ್ಳಿ ರಥ ಹಾಗೂ ಪಲ್ಲಕ್ಕಿ ವಿಜೃಂಭಣೆಯಿಂದ ಮೂಡಿ ಬಂದಿತು.
ನಂತರ ದೇವಸ್ಥಾನದ ಬೆಳ್ಳಿ ಪಲ್ಲಕ್ಕಿಯೊಂದಿಗೆ ಅಗ್ನಿ ಪ್ರವೇಶ ಮಾಡಲಾಯಿತು. ರಥೋತ್ಸವದಲ್ಲಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಕೊಣ್ಣೂರಿನ ಹೊರಗಿನಮಠದ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು, ಪಾಳ ಮಠದ ಡಾ. ಗುರುಮೂರ್ತಿ ಶಿವಾಚಾರ್ಯರು, ಯಂಕಂಚಿ ಹಿರೇಮಠದ ಅಭಿನವ ರುದ್ರಮನಿ ಶಿವಾಚಾರ್ಯರು, ಕನ್ನೊಳ್ಳಿ ಹಿರೇಮಠದ ಸಿದ್ಧಲಿಂಗ ಶಿವಾಚಾರ್ಯರು, ಕಲಕೇರಿ ಪಂಚರಂಗ ಸಂಸ್ಥಾನಮಠದ ಶ್ರೀ ಮಡಿವಾಳೇಶ್ವರ ಶಿವಾಚಾರ್ಯರು, ಶಾಸಕ ಅಶೋಕ ಮನಗೂಳಿ ಸೇರಿದಂತೆ ತಾಲೂಕಿನ ವಿವಿಧ ಮಠದ ಶ್ರೀಗಳು, ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ, ಅಶೋಕ ವಾರದ, ಸೋಮನಗೌಡ ಬಿರಾದಾರ, ದಯಾನಂದಗೌಡ ಬಿರಾದಾರ, ಡಾ.ರವಿ ಗೋಲಾ, ಎಸ್.ಎಂ.ಬಿರಾದಾರ, ಡಾ.ಶರಣಬಸವ ಜೋಗುರ, ಚನ್ನು ಕತ್ತಿ, ಚನ್ನು ವಾರದ, ಮುತ್ತು ಪಟ್ಟಣಶೆಟ್ಟಿ, ವಿರೇಶ ಜೋಗುರ, ಶಿವಕುಮಾರ ಜೋಗುರ, ಮುತ್ತು ಮುಂಡೇವಾಡಗಿ, ಶ್ರೀಶೈಲ ನಂದಿಕೋಲ, ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಸಂಸ್ಥೆಯ ಅಂಗ ಸಂಸ್ಥೆಗಳ ಪ್ರಾಚಾರ್ಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಹಾಗೂ ಮಹಿಳಾ ಭಕ್ತ ವರ್ಗ, ತಾಲೂಕಿನ ಶ್ರೀಮಠದ ಭಕ್ತರು ಜಿ.ಪಿ.ಪೋರವಾಲ್ ಮತ್ತು ಆರ್.ಡಿ. ಪಾಟೀಲ ಕಾಲೇಜಿನ ಎನ್.ಸಿ.ಸಿ, ಎನ್‌ಎಸ್‌ಎಸ್ ಹಾಗೂ ಸ್ಕೌರ್ಟ್ಸ ಮತ್ತರು ಗೈಡ್ಸ್ ವಿದ್ಯಾರ್ಥಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

“ನಿರ್ಲಕ್ಷ್ಯಕ್ಕೊಳಗಾದ ಆಲಮೇಲ ತಾಲೂಕು :ಹೋರಾಟದ ಎಚ್ಚರಿಕೆ

ಡಿ.೨೨ ರಂದು ಜಿಲ್ಲಾ ಮಟ್ಟದ ಕೆಡಿಪಿ ಸಭೆ

ವಿಜಯಪುರ: ಏಕತಾ ನಗರದಲ್ಲಿ ಮಣಿಕಂಠ ಮಹಪೂಜೆ

ಇಂಗಳೇಶ್ವರ ವಚನಶಿಲಾ ಮಂಟಪದ ರೂವಾರಿ ಚನ್ನಬಸವ ಶ್ರೀ ಲಿಂಗೈಕ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • “ನಿರ್ಲಕ್ಷ್ಯಕ್ಕೊಳಗಾದ ಆಲಮೇಲ ತಾಲೂಕು :ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಡಿ.೨೨ ರಂದು ಜಿಲ್ಲಾ ಮಟ್ಟದ ಕೆಡಿಪಿ ಸಭೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ: ಏಕತಾ ನಗರದಲ್ಲಿ ಮಣಿಕಂಠ ಮಹಪೂಜೆ
    In (ರಾಜ್ಯ ) ಜಿಲ್ಲೆ
  • ಇಂಗಳೇಶ್ವರ ವಚನಶಿಲಾ ಮಂಟಪದ ರೂವಾರಿ ಚನ್ನಬಸವ ಶ್ರೀ ಲಿಂಗೈಕ್ಯ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ಆಲಮೇಲ ತಾಲೂಕು ಘಟಕಕ್ಕೆ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಪೋಷಕರು ಮಕ್ಕಳಿಗೆ ಕಲಿಸಬೇಕಾದ ಜೀವನ ಮೌಲ್ಯಗಳು
    In ಭಾವರಶ್ಮಿ
  • ದಡ್ಡತನ ಹಾಗೂ ಪರಿಪೂರ್ಣತೆ
    In ವಿಶೇಷ ಲೇಖನ
  • ಕೊಲ್ಹಾರ ತಾಲೂಕು ಕಾನಿಪ ಸಂಘಕ್ಕೆ ಅರುಣಕುಮಾರ ಸಾರಥ್ಯ
    In (ರಾಜ್ಯ ) ಜಿಲ್ಲೆ
  • ಮನುಷ್ಯನ ನಡೆ-ನುಡಿ ಜೀವನ ವಿಕಾಸಕ್ಕೆ ಅಡಿಪಾಯ :ರಂಭಾಪುರಿ ಶ್ರೀ
    In (ರಾಜ್ಯ ) ಜಿಲ್ಲೆ
  • ಇಂಡಿಯಲ್ಲಿ ಡಿ.೧೪ ರಿಂದ ಆಧ್ಯಾತ್ಮಿಕ ಪ್ರವಚನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.