ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರತಿಯೊಬ್ಬರು ಸಹಕಾರ ನೀಡುವ ಮೂಲಕ ಯಶಸ್ವಿಗೆ ಶ್ರಮಿಸಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸಿಂದಗಿ ಸಾರಂಗಮಠದ ಆವರಣದಲ್ಲಿ ಆಲಮೇಲ ತಾಲೂಕಾ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಬಿಡುಗಡೆಗೊಳಿಸಿ ಮಾತನಾಡಿದರ ಅವರು, ಅಕ್ಷರ ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಆಗಮಿಸಬೇಕು. ಕನ್ನಡ ಸಾಹಿತ್ಯ ಸಮ್ಮೇಳನವು ಅತ್ಯಂತ ಯಶಸ್ವಿಯಾಗಿ ಜರುಗಲು ಎಲ್ಲ ಸೌಲಭ್ಯಗಳನ್ನು ಒದಗುಸಲು ನಾನು ಸಿದ್ದನಿದ್ದೇನೆ. ಸಂಘಟಕರು ಎಲ್ಲರನ್ನು ತೊಡಗಿಸಿಕೊಂಡು ಕಾರ್ಯಚಟುವಟಿಕೆಗಳನ್ನು ಮಾಡಬೇಕು ಎಂದು ಸಲಹೆ ನೀಡಿದರು.
ಈ ವೇಳೆ ಯಂಕಂಚಿ ಹಿರೇಮಠದ ಅಭಿನವ ರುದ್ರಮುನಿ ಶಿವಾಚಾರ್ಯರು, ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ, ಆಲಮೇಲ ತಾಲೂಕಾಧ್ಯಕ್ಷ ಶಿವಶರಣ ಗುಂದಗಿ, ಸಿಂದಗಿ ತಾಲೂಕಾಧ್ಯಕ್ಷ ಶಿವಾನಂದ ಬಡಾನೂರ, ಗಿರೀಶ ಗತಾಟೆ, ರಮೇಶ ಭಂಟನೂರ, ಡಾ.ರವಿ ಗೋಲಾ, ಅಪ್ಪುಗೌಡ ಪಾಟೀಲ, ರವಿರಾಜ ದೇವರಮನಿ, ಸಿದ್ದಲಿಂಗ ಕಿಣಗಿ ಸೇರಿದಂತೆ ಅನೇಕರಿದ್ದರು