ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪಟ್ಟಣದ ಸರಕಾರಿ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಮತದಾರರ ದಿನಾಚರಣೆ ನಿಮಿತ್ಯ ಜರುಗಿದ ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಪೂಜಾ ಸಾರಂಗಮಠ ಹಾಗೂ ಈರಮ್ಮ ಅಗಸರ ಪ್ರಥಮ ಸ್ಥಾನ ಮತ್ತು ರೀಲ್ಸ್ ಸ್ಪರ್ಧೆಯಲ್ಲಿ ಪೂಜಾ ಸಾರಂಗಮಠ ಪ್ರಥಮ ಸ್ಥಾನ ಪಡೆದು ಮಹಾವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಕಾಲೇಜಿನ ಪ್ರಾಚಾರ್ಯ ಎಸ್.ಎಮ್.ಪೂಜಾರಿ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು, ಮಹಾವಿದ್ಯಾಲಯದ ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.