ವಿಜಯಪುರ: ಸತತ ಪ್ರಯತ್ನ, ನಿರಂತರ ತಪಸ್ಸು, ಪಡೆಯುವ ಛಲದಿಂದ ಶಿವನ ಮುಡಿಯಲ್ಲಿರುವ ಗಂಗೆಯನ್ನು ವರಿಸಿಕೊಂಡು ಗಂಗೆಯನ್ನೇ ಭೂಮಿಗಿಳಿಸಿ ಮಾನವ ಜಗಉದ್ಧರಿಸಿದ ತಪಸ್ವಿ ಶ್ರೀ ಭಗೀರಥ ಮಹರ್ಷಿ ಎಂದು ಅಪರ ಜಿಲ್ಲಾಧಿಕಾರಿ ಮಹದೇವ ಮುರಗಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ
ಶ್ರೀ ಭಗೀರಥ ಮಹರ್ಷಿ ಅವರಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಸರಕಾರವು ದಾರ್ಶನಿಕರ ಜಯಂತಿಗಳ ಆಚರಣೆಯ ಮೂಲಕ ತತ್ವಾದರ್ಶಗಳನ್ನು ಇಂದಿನ ಯುವಪೀಳಿಗೆಗೆ ಪರಿಚಯಿಸುವುದಾಗಿದೆ.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಾಹುಸಾಹೇಬ ವೈ.ಸುರಕೋಡ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಬಿ. ನಾಗರಾಜ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ ಸೇರಿದಂತೆ,ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment