ಜಿಲ್ಲಾಧಿಕಾರಿ ಟಿ ಭೂಬಾಲನ್ ಅಭಿನಂದನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಜ್ಯದ ಅತ್ಯುತ್ತಮ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕವೆಂದು ವಿಜಯಪುರದ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕವು ಪ್ರಶಸ್ತಿಯನ್ನು ಪಡೆದುಕೊಂಡಿದೆ. ಆರೋಗ್ಯ ಸಚಿವರಾದ ದಿನೇಶ್ ಗುಂಡುರಾವ ಅವರು ಬೆಂಗಳೂರಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲೆಯ ಈ ಕಾರ್ಯಕ್ರಮದ ಅಧಿಕಾರಿಗಳಾದ ಡಾ. ಮಲ್ಲನಗೌಡ ಬಿ ಬಿರಾದಾರ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು.
ಜಿಲ್ಲೆಯ ಏಡ್ಸ್ ನಿಯಂತ್ರಣ ಘಟಕವು ಹೆಚ್‌ಐವಿ/ಏಡ್ಸ್ ನಿಯಂತ್ರಣದಲ್ಲಿ ಹಾಗೂ ವಿವಿಧ ಸಮುದಾಯಗಳಿಗೆ ನಿರಂತರ ಕಾರ್ಯಕ್ರಮಗಳನ್ನು ಮತ್ತು ಅತಿ ಹೆಚ್ಚು ರಕ್ತದಾನ ಶಿಬಿರ ಸೇರಿದಂತೆ ಇನ್ನೀತರ ಗುರಿಗಳನ್ನು ಸಮರ್ಪಕವಾಗಿ ನಿರ್ವಹಿಸಿರುವುದಕ್ಕೆ ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆಯು ರಾಜ್ಯ ಮಟ್ಟದ ಏಡ್ಸ್ ದಿನ ಕಾರ್ಯಕ್ರಮದಲ್ಲಿ ರಾಜ್ಯದ ಅತ್ಯುತ್ತಮ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕವೆಂದು ಪ್ರಶಸ್ತಿ ನೀಡಿದ್ದಾರೆ.
ಪ್ರಶಸ್ತಿ ಪಡೆದು ಜಿಲ್ಲೆಗೆ ಕೀರ್ತಿ ತಂದಿರುವುದಕ್ಕೆ ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಹಾಗೂ ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಅಭಿನಂದಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.