ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-೧ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಹಾಗೂ ವೃತ್ತಿಪರ ಸ್ನಾತಕೋತ್ತರ ಪದವಿಗಳ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ-ನಂತರದ ಶುಲ್ಕ ಮರುಪಾವತಿ ಹಾಗೂ ವಿದ್ಯಾರ್ಥಿ ವೇತನ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಡಿಸೆಂಬರ ೨೦, ೨೦೨೪ ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: ೮೦೫೦೭೭೦೦೦೫ ಅಥವಾ bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ವೆಬ್ಸೈಟ್‌ಗೆ ಭೇಟಿ ನೀಡಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
