ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ೦೧ ರಿಂದ ೦೮ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ಪೋರ್ಟಲ್ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ: ೩೧-೧೨-೨೦೨೪ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ ಸೈಟ್ https://dom.karnataka.gov.inಅಥವಾ ಅಲ್ಪ ಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
