ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ಪಿಯುಸಿ, ಡಿಪ್ಲೊಮಾ, ಐಟಿಐ, ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಎಸ್ ಎಸ್ ಪಿ ಪೋರ್ಟಲ್ ನಲ್ಲಿ ಶುಲ್ಕ ಮರುಪಾವತಿ ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ: ೩೧-೧೨-೨೦೨೪ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ ಸೈಟ್ https://dom.karnataka.gov.inಅಥವಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
