Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಜ್ಯದ ವಿವಿಧ ವಿವಿ ತಂತ್ರಾಂಶದ ದೋಷ ಸರಿಪಡಿಸಲು ಒತ್ತಾಯ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ತಂತ್ರಾಂಶದ ದೋಷಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ವಿಜಯಪುರ ವತಿಯಿಂದ ಬಂಜಾರಾ ಕ್ರಾಸ್ ಹತ್ತಿರ, ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಮಾಡಲಾಯಿತು.
ಈ ಸಮಯದಲ್ಲಿ ಸಂಬಂಧಪಟ್ಟ ಯಾವ ಅಧಿಕಾರಿಗಳು ಮನವಿ ಸ್ವೀಕಾರ ಮಾಡದೇ ಇರುವದಕ್ಕೆ ಖಾಲಿ ಕುರ್ಚಿಗೆ ಮನವಿ ಸಲ್ಲಿಸಿ ಹೋರಾಟ ಮಾಡಲಾಯಿತು.
ಬೆಳಗಾವಿಯ ಪ್ರತಿಷ್ಠಿತ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ ಹಲವು ವಿಶ್ವವಿದ್ಯಾಲಯಗಳಲ್ಲಿ ಯು.ಯು.ಸಿ.ಎಮ್.ಎಸ್. ತಂತ್ರಾಂಶದಲ್ಲಿ ಬಹಳ ದೋಷಗಳಿಂದ ವಿಧ್ಯಾರ್ಥಿಗಳ ಪರದಾಡುವಂತಹ ಸ್ಥಿತಿಗೆ ಬಂದಿದೆ. ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ವ್ಯಾಪ್ತಿಯ ಪದವಿ ಕಾಲೇಜುಗಳ ಪ್ರಥಮ, ತೃತೀಯ ಹಾಗೂ ಐದನೇ ಸೆಮಿಸ್ಟರ ಡಿಸೆಂಬರ್ ನಲ್ಲಿ ಪರೀಕ್ಷೆ ನಡೆಯಲಿದ್ದು ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಪರೀಕ್ಷಾ ಅರ್ಜಿ ತುಂಬುತ್ತಿದ್ದಾರೆ ವಿಧ್ಯಾರ್ಥಿಗಳ ಖಾತೆಯಿಂದ ಹಣ ಪಾವತಿಯಾಗುತ್ತಿದೆ ಆದರೆ ಅರ್ಜಿ ಸಲ್ಲಿಕೆ ಆಗದೆ ವಿದ್ಯಾರ್ಥಿಗಳು ಚಿಂತೆಗೀಡಾಗುತ್ತಿದ್ದಾರೆ. ನಿಮ್ಮ ಅರ್ಜಿ ಫೇಲ್ಡ್ ಎಂಬ ಸಂದೇಶದಿಂದ ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ. ಈಗಾಗಲೇ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಪದವಿ ಕಾಲೇಜುಗಳ ಪರೀಕ್ಷಾ ಅರ್ಜಿ ಯು.ಯು.ಸಿ.ಎಮ್.ಎಸ್. ವೆಬ್ ಸೈಟ್ ನಲ್ಲಿ ಅರ್ಜಿ ತುಂಬುವ ಪ್ರಕ್ರಿಯೆ ಶುರುವಾಗಿದೆ. ಆದರೆ ಬಹುತೇಕ ವಿದ್ಯಾರ್ಥಿಗಳ ಖಾತೆಯಿಂದ ಹಣ ಜಮೆಯಾಗಿದೆ ಆದರೆ ಸರಿಯಾದ ಅರ್ಜಿ ಯಶಸ್ವಿ ಆಗಿರುವ ಸಂದೇಶ ಬರುತ್ತಿಲ್ಲ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಕೇಳಿದರೆ ವಿಶ್ವವಿದ್ಯಾಲಯದಲ್ಲಿ ಕೇಳಿ ಎಂದು ಹೇಳುತ್ತಾರೆ ವಿಜಯಪುರ, ಬಾಗಲಕೋಟೆಯಿಂದ ಬಂದ ವಿದ್ಯಾರ್ಥಿಗಳು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ಕೇಳಿದರೆ ಶುಲ್ಕ ಮತ್ತೊಮ್ಮೆ ಪಾವತಿಸಿ ಎಂದು ಇಲ್ಲವೇ ಯು.ಯು.ಸಿ.ಎಮ್.ಎಸ್. ಬಳಿ ಹೋಗಿ ಕೇಳಿ ಎಂದು ಹೇಳುತ್ತಿದ್ದಾರೆ. ಈ ಎಲ್ಲ ವ್ಯವಸ್ಥೆಯಿಂದ ವಿದ್ಯಾರ್ಥಿಗಳು ಗೊಂದಲಕ್ಕೆ ಈಡಾಗಿದ್ದಾರೆ ಆದ್ದರಿಂದ ಈ ಪರೀಕ್ಷಾ ಶುಲ್ಕ ಸೇರಿದಂತೆ ಇತರೆ ಶುಲ್ಕಗಳನ್ನು ತಮ್ಮ ಕಾಲೇಜು ಹಂತದಲ್ಲಿ ಆನ್‌ಲೈನ್ ವ್ಯವಸ್ಥೆ ರದ್ದುಗೊಳಿಸಿ ಆಫ್ ಲೈನ್ ತುಂಬುವ ವ್ಯವಸ್ಥೆ ಮಾಡಬೇಕು ಇಲ್ಲವೇ ಈ ಸಮಸ್ಯೆಯನ್ನು ವಿಶ್ವವಿದ್ಯಾಲಯ ಮತ್ತು ಸರಕಾರ ಕೂಡಲೇ ಪರಿಹರಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು. ಇಲ್ಲದೆ ಹೋದಲ್ಲಿ ವಿದ್ಯಾರ್ಥಿ ಪರಿಷತ್ ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಮಯದಲ್ಲಿ ಜಿಲ್ಲಾ ಸಂಚಾಲಕ ಮಂಜುನಾಥ ಹಳ್ಳಿ, ಶಿವನಗೌಡ ಬಿರಾದಾರ,ಶ್ರೀಕಾಂತ ಬಿರಾದಾರ, ಸುಜ್ಞಾತ ಕುಲಕರ್ಣಿ, ಪ್ರವೀಣ ಬಿರಾದಾರ, ಸಂದೀಪ ಅರಳಗುಂಡಿ, ಚೇತನ ಕೊರವಾರ, ಮಹೇಶ ಗೌಡ ಮಿರ್ಜಿ, ಸುರೇಶ ಲೋನಾರ, ಆನಂದ ಪೂಜಾರಿ, ಕಾರ್ತಿಕ ಮಾಳಿ, ದುಂಡಪ್ಪ ನೆಲೋಗಿ, ರಮೇಶ ನಾಟೀಕಾರ, ಯೋಗೇಶ ಹಾಗೂ ನೂರಾರು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!
    In (ರಾಜ್ಯ ) ಜಿಲ್ಲೆ
  • ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.