ವಿಜಯಪುರ: ದೇಶದ ನೆಚ್ಚಿನ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜಿ ಅವರು, ಚುನಾವಣೆ ಪ್ರಚಾರ ಅಂಗವಾಗಿ, ಇದೇ ಶನಿವಾರ 29 ರ ಬೆಳಿಗ್ಗೆ 11 ಗಂಟೆಗೆ ಸುಭಾಷಚಂದ್ರ ಬೋಸ್ ರಸ್ತೆ (ಅಥಣಿ ರಸ್ತೆ) ಯಲ್ಲಿರುವ ಸೈನಿಕ ಶಾಲೆ ಮೈದಾನದಲ್ಲಿ ಹಮ್ಮಿಕೊಳ್ಳಲಾದ ಬಹಿರಂಗ ಸಮಾವೇಶದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಜನಪರ ಯೋಜನೆಗಳ ಮೂಲಕ ಅಭಿವೃದ್ಧಿ ಜೊತೆಗೆ ದೇಶದ ಕೀರ್ತಿಯನ್ನು ಜಗತ್ತಿನಾದ್ಯಂತ ಹೆಚ್ಚಿಸುತ್ತಿರುವ ಹೆಮ್ಮೆಯ ಪ್ರಧಾನ ಕಾರ್ಯಕ್ರಮ ಯಶಸ್ವಿ ಗೊಳಿಸಬೇಕು. ಎಲ್ಲ ಕಡೆಯಿಂದ ಜನರಿಗೆ ಅನುಕೂಲ ಮಾಡಿಕೊಡಲು ಸಾರಿಗೆ ಇಲಾಖೆ ಹೆಚ್ಚಿನ ವ್ಯವಸ್ಥೆ ಮಾಡಿರುತ್ತದೆ.
ಜಿಲ್ಲೆಯ ಹಾಗೂ ನಗರ ಮತಕ್ಷೇತ್ರದ ಪಕ್ಷದ ಮುಖಂಡರು, ಕಾರ್ಯಕರ್ತರು, ಹಿತೈಷಿಗಳು, ಅಭಿಮಾನಿಗಳು, ಮಾತಾ ಬಗೀನಿಯರು, ವ್ಯಾಪಾರಸ್ಥರು, ವಕೀಲರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಸಾಕ್ಷಿ ಆಗಬೇಕಾಗಿ ಬಿಜೆಪಿ ಪ್ರಚಾರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.