Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಸಕ ಯತ್ನಾಳ ಹೊರಗಿನವರಲ್ಲ :ಬಿ.ಎಸ್.ವೈ
(ರಾಜ್ಯ ) ಜಿಲ್ಲೆ

ಶಾಸಕ ಯತ್ನಾಳ ಹೊರಗಿನವರಲ್ಲ :ಬಿ.ಎಸ್.ವೈ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಯತ್ನಾಳರೊಂದಿಗೆ ಮಾತುಕತೆ ಮೂಲಕ ಸಮಸ್ಯೆ ಇತ್ಯರ್ಥದ ಆಶಯ ವ್ಯಕ್ತಪಡಿಸಿದ ಮಾಜಿ ಸಿಎಂ ಯಡಿಯೂರಪ್ಪ

ಶಿವಮೊಗ್ಗ: ಬಿಜಾಪುರ ಶಾಸಕ ಮತ್ತು ಸದಾ ತಮ್ಮನ್ನು ಟೀಕಿಸುವ ಬಸನಗೌಡ ಪಾಟೀಲ್ ಯತ್ನಾಳ್ ಅವರು “ಹೊರಗಿನವರಲ್ಲ” ಎಂದು ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.
ಬುಧವಾರ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಬಿಜೆಪಿಯ ಎಲ್ಲಾ ಆಂತರಿಕ ಸಮಸ್ಯೆಗಳನ್ನು ಚರ್ಚೆಯ ಮೂಲಕ ಇತ್ಯರ್ಥಪಡಿಸುವ ವಿಶ್ವಾಸ ವ್ಯಕ್ತಪಡಿಸಿದರು ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥರಾಗಿರುವ ತಮ್ಮ ಪುತ್ರ ಬಿ ವೈ ವಿಜಯೇಂದ್ರ ಅವರು ಪಕ್ಷವನ್ನು ಬಲಪಡಿಸುವಲ್ಲಿ ನಿಟ್ಟಿನಲ್ಲಿ ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗಬೇಕೆಂದು ಸಲಹೆ ನೀಡಿದರು.
ಯತ್ನಾಳ್ ಅವರು ಹೊರಗಿನವರಲ್ಲ, ಕೆಲವು ಕಾರಣಗಳಿಂದ ಅವರು ಆಕ್ರೋಶಗೊಂಡಿರಬಹುದು. ಮಾತನಾಡೋಣ. ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗಬೇಕು ಎಂಬುದು ನನ್ನ ನಿರೀಕ್ಷೆ. ಇದು ವಿಜಯೇಂದ್ರ ಅವರ ನಿರೀಕ್ಷೆಯೂ ಹೌದು ಎಂದು ಮಾಜಿ ಮುಖ್ಯಮಂತ್ರಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಯಾವುದೇ ಲೋಪದೋಷಗಳಿದ್ದರೆ ಎದುರು-ಬದುರು ಕುಳಿತು ಚರ್ಚಿಸಿ, ಇತ್ಯರ್ಥಪಡಿಸಿ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬೇಕು. ಇದು ನನ್ನ ಅಭಿಪ್ರಾಯ. ಇದಕ್ಕೆ ಎಲ್ಲರೂ ಸಹಕರಿಸುತ್ತಾರೆ ಎಂದು ಆಶಿಸುತ್ತೇನೆ ಎಂದರು.
ಯತ್ನಾಳ್ ಅವರು ತಮ್ಮ ಮತ್ತು ತಮ್ಮ ಕುಟುಂಬದ ವಿರುದ್ಧ ಸಾರ್ವಜನಿಕವಾಗಿ ಹೇಳಿಕೆ ನೀಡುತ್ತಿರುವುದರಿಂದ ಪಕ್ಷಕ್ಕೆ ಹಾನಿಯಾಗುತ್ತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, “ಅವರು ಮಾತನಾಡಲಿ, ಆದರೆ ನಾವು ಎಲ್ಲವನ್ನೂ ಸರಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ” ಎಂದು ಹೇಳಿದರು.
ವಿಜಯೇಂದ್ರ ಅವರು ಆಡಳಿತಾರೂಢ ಕಾಂಗ್ರೆಸ್‌ನೊಂದಿಗೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಹಿರಂಗವಾಗಿಯೇ ಟೀಕಿಸಿದ್ದ ಯತ್ನಾಳ್ ಅವರು, ವಿಜಯೇಂದ್ರ ಮತ್ತು ಯಡಿಯೂರಪ್ಪ ಅವರು ಪಕ್ಷವನ್ನು ತಮ್ಮ ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಭ್ರಷ್ಟಾಚಾರ ಕುರಿತು ಹೈಕಮಾಂಡ್ ಗೆ ಯತ್ನಾಳ ಪತ್ರ

ರಾಜ್ಯ ಬಿಜೆಪಿಯಲ್ಲಿ ಚಾಲ್ತಿಯಲ್ಲಿರುವ ಹೊಂದಾಣಿಕೆ ರಾಜಕಾರಣ, ಬ್ರಹ್ಮಾಂಡ ಭ್ರಷ್ಟಾಚಾರ ಮತ್ತು ವಂಶಾಡಳಿತ ರಾಜಕೀಯದ ಕುರಿತು ಪಕ್ಷದ ನಾಯಕತ್ವಕ್ಕೆ ವಿವರವಾಗಿ ವಿವರಿಸಿದ್ದೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬುಧವಾರ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಪಕ್ಷದ ನಿರ್ದೇಶನಗಳನ್ನು ಧಿಕ್ಕರಿಸಿ ಬಿಜೆಪಿಯಿಂದ ಶೋಕಾಸ್ ನೋಟಿಸ್ ಸಂಬಂಧ ಪ್ರತಿಕ್ರಿಯಿಸಿರುವ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಕೇಂದ್ರ ಶಿಸ್ತು ಸಮಿತಿ (ಸಿಡಿಸಿ) ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಅವರಿಗೆ ಆರು ಪುಟಗಳ ಉತ್ತರವನ್ನು ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಉತ್ತರಪ್ರದೇಶ, ಅಸ್ಸಾಂ, ಮಹಾರಾಷ್ಟ್ರ, ಆಂಧ್ರಪ್ರದೇಶಗಳು ಈಗ ಹಿಂದುತ್ವದತ್ತ ವಾಲುತ್ತಿರುವ ಕಾರಣ ನಮ್ಮ ಪಕ್ಷವು ಹೊಂದಾಣಿಕೆ ರಾಜಕಾರಣ, ಬ್ರಹ್ಮಾಂಡ ಭ್ರಷ್ಟಾಚಾರ, ವಂಶಾಡಳಿತ ರಾಜಕಾರಣದ ಕಪಿಮುಷ್ಠಿಯಿಂದ ಹೊರಬರಬೇಕು. ಅಲ್ಲದೆ ಹಿಂದುತ್ವದ ಪರ ಧ್ವನಿ ಗಟ್ಟಿಯಾಗಬೇಕು ಎಂದು ತಮ್ಮ ಪತ್ರದಲ್ಲಿ ಬರೆದಿರುವುದಾಗಿ ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!
    In (ರಾಜ್ಯ ) ಜಿಲ್ಲೆ
  • ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.