Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತೊಗರಿ ಬೆಳೆಹಾನಿಯಾದ ರೈತರಿಗೆ ಸೂಕ್ತ ಪರಿಹಾರ ಅಗತ್ಯ :ನಡಹಳ್ಳಿ
(ರಾಜ್ಯ ) ಜಿಲ್ಲೆ

ತೊಗರಿ ಬೆಳೆಹಾನಿಯಾದ ರೈತರಿಗೆ ಸೂಕ್ತ ಪರಿಹಾರ ಅಗತ್ಯ :ನಡಹಳ್ಳಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿಯಲ್ಲಿ ಭಾರತೀಯ ಜನತಾ ಪಕ್ಷದಿಂದ ಎತ್ತಿನ ಬಂಡಿಯ ಮೂಲಕ ಪ್ರತಿಭಟನೆ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಈ ಭಾಗದ ಬಹುತೇಕ ರೈತರು ಕೃಷಿ ಇಲಾಖೆಯಲ್ಲಿ ೨೦೨೪-೨೪ನೇ ಸಾಲಿನಲ್ಲಿ ವಿತರಿಸಿದ ತೊಗರಿ ಬೀಜಗಳನ್ನು ಖರೀದಿಸಿ ಬೆಳೆದಿದ್ದಾರೆ. ಎತ್ತರಕ್ಕೆ ಬೆಳೆದ ಬೆಳೆ ಹೂವುಗಳು ಉದುರಿ ಕಾಯಿ ಕಟ್ಟದೆ ಶೇ.೫೦ರಷ್ಟು ಬೆಳೆಗಳು ಹಾಳಾಗಿವೆ ಎಂದು ಮಾಜಿ ಶಾಸಕ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.
ಸಿಂದಗಿ ಮತ್ತು ಆಲಮೇಲ ತಾಲೂಕಿನ ರೈತರು ಬೆಳೆದ ತೊಗರಿ ಬೆಳೆ ಈ ಬಾರಿ ನಷ್ಟದಲ್ಲಿದ್ದು ಕೂಡಲೇ ಸಂಭಂಧಿಸಿದ ಅಧಿಕಾರಿಗಳು ಸರ್ವೆಮಾಡಿಸಿ ಸರಕಾರಕ್ಕೆ ವಾಸ್ತವಿಕ ವರದಿಯನ್ನು ಸಲ್ಲಿಸಿ ಸೂಕ್ತ ಪರಿಹಾರ ನೀಡುವಲ್ಲಿ ಮುಂದಾಗಬೇಕು ಎಂದು ಒತ್ತಾಯಿಸಿ ಪಟ್ಟಣದಲ್ಲಿ ಭಾರತೀಯ ಜನತಾ ಪಕ್ಷದ ಸಿಂದಗಿ ಮಂಡಲದ ವತಿಯಿಂದ ಎತ್ತಿನ ಬಂಡಿಯ ಮೂಲಕ ಪ್ರತಿಭಟನೆ ನಡೆಸಿ ತಹಶೀಲ್ದಾರ ಮತ್ತು ತಾಲೂಕು ಕೃಷಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಅನ್ನದಾತ ತೀವ್ರ ಸಂಕಷ್ಟದ ಬದುಕನ್ನು ಎದುರಿಸುತಿದ್ದಾನೆ. ಇದಕ್ಕೆ ಸಂಬಂದಿಸಿದಂತೆ ಈ ಭಾಗದ ಅನೇಕ ರೈತರು ಅಧಿಕಾರಿಗಳೇ ಹಾಳಾಗುತ್ತಿರುವ ಬೆಳೆಗಳ ಬಗ್ಗೆ ವಿವಿರಿಸಿದರೂ ಅಧಿಕಾರಿಗಳು ಸರ್ವೇ ಕಾರ್ಯ ಮಾಡಿಲ್ಲ ಮತ್ತು ಹೊಲಗಳಿಗೆ ಭೇಟಿ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾಜಿ ಶಾಸಕ ರಮೆಶ ಭೂಸನೂರ ಹಾಗೂ ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ, ರೈತ ಮೋರ್ಚಾ ತಾಲೂಕಾಧ್ಯಕ್ಷ ಪೀರು ಕೆರೂರ ಮಾತನಾಡಿ, ರೈತರ ವಿಷಯದಲ್ಲಿ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ. ರೈತರಿಗೆ ಅನ್ಯಾಯವಾದಾಗ ನಾವು ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯ. ಕೂಡಲೇ ಜಿಲ್ಲಾಧಿಕಾರಿಗಳು ಸರ್ವೇ ಕಾರ್ಯ ಆರಂಬಿಸುವಂತೆ ಆದೇಶ ಮಾಡಿ ಸರಕಾರಕ್ಕೆ ವರದಿ ಸಲ್ಲಿಸಲು ಮುಂದಾಗುವಲ್ಲಿ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಸಾವಿರಾರು ರೈತರೊಂದಿಗೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದ ಅವರು ಪ್ರತಿಭಟನಾ ಕಾರರ ಬೇಡಿಕೆಗಳಾದ ಹಾನಿ ಒಳಗಾದ ತೊಗರಿ ಬೆಳೆಯನ್ನು ಡ್ರೊಣದ ಮೂಲಕ ಸರ್ವೆ ಕಾರ್ಯ ಮಾಡುವುದು, ರೈತ ಸಂಪರ್ಕ ಕೆಂದ್ರದಲ್ಲಿ ರೈತರಿಗೆ ವಿತರಿಸಿದ ತೊಗರಿ ಬೀಜಗಳ ನೈಜತೆ ಮತ್ತು ಗುಣಮಟ್ಟದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು, ಕಳಪೆ ಬೀಜ ವಿತರಿಸಿದ ಖಾಸಗಿ ಎಜೆನ್ಸಿಗಳ ವಿರುದ್ದ ಕಠಿಣ ಕ್ರಮ ಜರುಗಿಸಬೇಕು, ವಿಮೆ ಮಾಡದೆ ಇರುವ ತೊಗರಿ ಬೆಳೆದ ನಷ್ಟಕ್ಕೆ ಒಳಗಾದ ರೈತರಿಗೂ ಸರಕಾರವೇ ಪರಿಹಾರ ನೀಡಬೇಕು ಎಂಬ ಅನೇಕ ಬೇಡಿಕೆಗಳ ಈಡೇರಿಕೆಗೆ ರೈತರು ಮತ್ತು ಬಿಜೆಪಿ ಮುಂಖಂಡರು ಮನವಿ ಸಲ್ಲಿಸಿದರು.
ಪ್ರತಿಭಟನಾ ಮೆರವಣಿಗೆಯು ಡಾ.ಅಂಬೇಡ್ಕರ ವೃತ್ತದಿಂದ ಎತ್ತಿನ ಗಾಡಿಗಳ ಮೂಲಕ ಪ್ರಾರಂಭವಾಗಿ ಟಿಪ್ಪು ವೃತ್ತ ಮಾರ್ಗವಾಗಿ ಗಾಂಧಿ ವೃತ್ತದವರೆಗೆ ಸಾಗಿ ಕೃಷಿ ಇಲಾಖೆಗೆ ಸಾಗಿ ಕೆಲ ಕಾಲ ಪ್ರತಿಭಟಿಸಿ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ಸಿದ್ದು ಬುಳ್ಳಾ, ಈರಣ್ಣ ರಾವೂರ, ಗೋಲ್ಳಾಳಪ್ಪಗೌಡ ಪಾಟೀಲ, ಶ್ರೀಶೈಲ ಚಳ್ಳಗಿ, ಶಿವುಕುಮಾರ ಬಿರಾದಾರ, ಗುರುಲಿಂಗಪ್ಪ ಅಂಗಡಿ, ಗುರು ತಳವಾರ, ಪ್ರಶಾಂತ ಕದ್ದರಕಿ, ವಿಠ್ಠಲ ಪೂಜಾರಿ, ಸಮಿ ಬಿಜಾಪೂರ, ನೀಲಮ್ಮ ಯಡ್ರಾಮಿ ಅನುಸುಬಾಯಿ ಪಾರಗೊಂಡ, ಚೇತನ ರಾಂಪೂರ, ಅಶೋಕ ನಾರಾಯಣಪೂರ, ವೀರುಪಾಕ್ಷಿ ಗಂಗನಳ್ಳಿ, ಮಂಜುನಾಥ ನಾಯ್ಕೋಡಿ, ಸತೀಶ ಬಿರಾದಾರ, ಶಿವರಾಜ ಕೆಂಗನಾಳ, ಸಲೀಂ ಬಾಗವಾನ, ಮಲ್ಲನಗೌಡ ಬಗಲಿ ಸೇರಿದಂತೆ ಅನೇಕ ರೈತರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!
    In (ರಾಜ್ಯ ) ಜಿಲ್ಲೆ
  • ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.