ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ, ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನಕ್ಕಾಗಿ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಸೇವಾಸಿಂಧು ಪೋರ್ಟಲ್ ನಲ್ಲಿ https://dom.karnataka.gov.inಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ: ೨೫-೧೨-೨೦೨೪ ಆಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ ಸೈಟ್ ಹಾಗೂ ಸಹಾಯವಾಣಿ ಸಂಖ್ಯೆ: ೮೨೭೭೭೯೯೯೯೦ ಅಥವಾ ಅಲ್ಪ ಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
