Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಸಮರ್ಪಕ ಜಾರಿಗೊಳಿಸಿ
(ರಾಜ್ಯ ) ಜಿಲ್ಲೆ

ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಸಮರ್ಪಕ ಜಾರಿಗೊಳಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪಿಸಿಪಿಎನ್‌ಡಿಟಿ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

ವಿಜಯಪುರ: ಅನಧಿಕೃತವಾಗಿ ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಅಪರಾಧವಾಗಿದ್ದು, ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸಿ, ಸಂಬಂಧಿಸಿದ ಅಧಿಕಾರಿಗಳು ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.
ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪಿಸಿಪಿಎನ್‌ಡಿಟಿ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಮಾಡುವುದು ಕಾಯ್ದೆಯನ್ವಯ ಅಪರಾಧವಾಗಿದ್ದು, ಒಂದು ವೇಳೆ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು ಅಂತಹವರ ಮೇಲೆ ಕಾಯ್ದೆಯನ್ವಯ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.
ಅಧಿಕಾರಿಗಳು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಕ್ಯಾನಿಂಗ್ ಕೇಂದ್ರಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅನಿರೀಕ್ಷಿತವಾಗಿ ಭೇಟಿ ನೀಡುವ ಮೂಲಕ ಕೇಂದ್ರಗಳಲ್ಲಿ ಕಾಯ್ದೆಯನ್ವಯ ನಿಯಮಗಳನ್ನು ಪಾಲಿಸಲಾಗುತ್ತಿವೆಯೇ, ಇಲ್ಲ ಎಂಬುದನ್ನು ಹಾಗೂ ಸ್ಕ್ಯಾನಿಂಗ್ ಕೇಂದ್ರಗಳು ಕಡ್ಡಾಯವಾಗಿ ನೊಂದಣಿಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಗೋಚರಿಸುವ ಹಾಗೆ ಮಾಹಿತಿ ಫಲಕಗಳು, ನಿಗದಿತ ನಮೂನೆಗಳ ನಿರ್ವಹಣೆ ಸೇರಿದಂತೆ ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶನ ನೀಡುವಂತೆ ಸೂಚನೆ ನೀಡಿದ ಅವರು, ಅನಧಿಕೃತವಾಗಿ ಸ್ಕ್ಯಾನಿಂಗ್ ಮಾಡುವವರ ಮೇಲೆ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಕ್ಯಾನಿಂಗ್ ಕೇಂದ್ರಗಳ ನವೀಕರಣಕ್ಕಾಗಿ ಹಾಗೂ ಹೊಸದಾಗಿ ಕೇಂದ್ರಗಳ ಸ್ಥಾಪನೆಗೆ ಬಂದಿರುವ ಅರ್ಜಿಗಳನ್ನು, ದಾಖಲೆಗಳನ್ನು ಪರಿಶೀಲನೆ ನಡೆಸಬೇಕು. ಈ ಕುರಿತು ರಚಿಸಲಾದ ಸಮಿತಿ ಸದಸ್ಯರ ಪರಿಶೀಲನಾ ಮಾಹಿತಿ ದೃಢೀಕರಣ ಸಹಿತ ವರದಿ ಸಲ್ಲಿಸಬೇಕು. ವರದಿ ಆಧರಿಸಿ ಕ್ರಮ ವಹಿಸಿ, ತಪಾಸಣಾ ವರದಿ ಪುರ್ಣ ಪ್ರಮಾಣದಲ್ಲಿ ದೊರಕಬೇಕು. ನಿರಾಪೇಕ್ಷಣಾ ಪತ್ರ ನೀಡುವಾಗ ಅಗತ್ಯ ದಾಖಲೆಗಳನ್ನು ಪರಿಶೀಲನೆ ನಡೆಸಿ, ಜಿಲ್ಲಾ ಮಟ್ಟದ ಸಮಿತಿಗೆ ಸಲ್ಲಿಸಬೇಕು. ಈ ಅರ್ಜಿಗಳ ಕುರಿತು ಸಭೆಯಲ್ಲಿ ಕೂಲಂಕೂಷವಾಗಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್ ಗುಣಾರಿ, ಜಿಲ್ಲಾ ಶಸ್ತ್ರಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ವರಿ ಗೊಲಗೇರಿ, ಪಿಸಿಪಿಎನ್‌ಡಿಟಿಯ ತಪಾಸಣಾ ಹಾಗೂ ಮೇಲ್ವಿಚಾರಣಾ ಸಮಿತಿ ಸದಸ್ಯರಾದ ಟಿ.ಪಿ.ನಾಯ್ಡು, ಡಾ.ಶೈಲಜಾ ಬಿದರಿ, ಡಾ.ರವಿಕುಮಾರ ನಾಗನೂರ, ಪೀಟರ್ ಅಲೆಕ್ಸಾಂಡರ್, ಎಸ್.ಜಿ.ರೂಡಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

“ಪಿಸಿಪಿಎನ್‌ಡಿಸಿ ಕಾಯ್ದೆಯ ಕುರಿತು ಜಿಲ್ಲೆಯಾದ್ಯಂತೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಿಗೆ ಕಾಯ್ದೆಯ ಕುರಿತು ತಿಳುವಳಿಕೆ ಮೂಡಿಸಬೇಕು. ಕಾಯ್ದೆಯ ನಿಯಮಗಳ ಕುರಿತು ಕರಪತ್ರಗಳನ್ನು ಮುದ್ರಿಸಿ ಜನನಿಬಿಡ ಪ್ರದೇಶಗಳಾದ ಬಸ್‌ನಿಲ್ದಾಣ, ರೈಲು ನಿಲ್ದಾಣ ಒಳಗೊಂಡಂತೆ ವಿವಿಧ ಸ್ಥಳಗಳಲ್ಲಿ ಪ್ರಚುರಪಡಿಸುವ ಮೂಲಕ ಜನರಲ್ಲಿ ಈ ಕುರಿತು ಜಾಗೃತಿ ಮೂಡಿಸಬೇಕು. ಲಿಂಗಾನುಪಾತದ ಸಮಾನತೆ ಕಾಪಾಡಲು ಜಾಗೃತಿ ಅಭಿಯಾನ ಕೈಗೊಳ್ಳಬೇಕು. ರೇಡಿಯೋ ಜಿಂಗಲ್ಸ್ ಮೂಲಕ ಪ್ರಚುರಪಡಿಸಬೇಕು. ಜನನಿಬಿಡ ಪ್ರದೇಶಗಳಲ್ಲಿ ವಿಡಿಯೋ ಪ್ರದರ್ಶನ ಮೂಲಕ ಜಾಗೃತಿ ಮೂಡಿಸಬೇಕು.”

– ಟಿ.ಭೂಬಾಲನ್
ಜಿಲ್ಲಾಧಿಕಾರಿ, ವಿಜಯಪುರ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.