Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರಕಾರಿ ಕಾರ್ಯಾಲಯಗಳಲ್ಲಿ ಸ್ವಚ್ಛತೆ ಕಾಪಾಡಿ :ಅಥಣಿ
(ರಾಜ್ಯ ) ಜಿಲ್ಲೆ

ಸರಕಾರಿ ಕಾರ್ಯಾಲಯಗಳಲ್ಲಿ ಸ್ವಚ್ಛತೆ ಕಾಪಾಡಿ :ಅಥಣಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅರಕೇರಿ ಗ್ರಾಮ ಪಂಚಾಯತಿಗೆ ಮುಖ್ಯ ಲೆಕ್ಕಾಧಿಕಾರಿಗಳು ಭೇಟಿ, ಪರಿಶೀಲನೆ

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: ತಾಲೂಕಿನ ಅರಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಪ್ರೌಢಶಾಲೆ, ಗ್ರಾಮ ಪಂಚಾಯತಿ ಕಾರ್ಯಾಲಯ, ಗ್ರಂಥಾಲಯ, ವಸತಿ ನಿಲಯಗಳಿಗೆ ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿಗಳು ಹಾಗೂ ತಿಕೋಟಾ ತಾಲೂಕು ಪಂಚಾಯತಿಯ ಆಡಳಿತಾಧಿಕಾರಿಗಳಾದ ಶ್ರೀ ರಾಮಣ್ಣ ಅಥಣಿ ರವರು ಅನೀರಿಕ್ಷಿತ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲನೆ ಮಾಡಿ, ಶಾಲೆಯಲ್ಲಿ ಮತ್ತು ವಿವಿಧ ಸರಕಾರಿ ಕಾರ್ಯಾಲಯಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆರಂಭದಲ್ಲಿ ಸರಕಾರಿ ಪ್ರೌಢಶಾಲೆಗೆ ಭೇಟಿ ನೀಡಿ, ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದ ಅವರು ಶಾಲೆಯಲ್ಲಿ ಗುಣಮಟ್ಟದ ಗ್ರಂಥಾಲಯ ಸಿದ್ಧಪಡಿಸಲುಶಿಕ್ಷಕರಿಗೆ ತಿಳಿಸಿದರು. ಅದಕ್ಕೆ ಬೇಕಾಗುವ ಸಾಮಗ್ರಿಗಳ ಪಟ್ಟಿ ತಯಾರಿಸಿ ತಾಲೂಕು ಪಂಚಾಯತಿಗೆ ಸಲ್ಲಿಸಲು ಸೂಚಿಸಿ, ಅಗತ್ಯ ಸಾಮಗ್ರೀಗಳನ್ನು ತಾಲೂಕು ಪಂಚಾಯತಿಯ ಅನುದಾನದಲ್ಲಿ ನೀಡುವ ಭರವಸೆ ನೀಡಿದರು. ನಂತರ ಅಡುಗೆ ಕೋಣೆ, ಉಗ್ರಾಣ ಕೋಣೆ, ಐಟಿ ಕೋಣೆ ಸೇರಿದಂತೆ ವಿವಿಧ ಕೊಠಡಿಗಳನ್ನು ವೀಕ್ಷಣೆ ಮಾಡಿ, ಶಾಲಾ ಮಕ್ಕಳೊಂದಿಗೆ ಚರ್ಚೆ ನಡೆಸಿ, ಶಾಲೆಯಲ್ಲಿರುವ ಸಮಸ್ಯೆಗಳ ಕುರಿತು ಮಕ್ಕಳಿಂದ ಮಾಹಿತಿ ಪಡೆದುಕೊಂಡರು. ನಂತರ ಶಾಲೆಯಲ್ಲಿ ಹೆಚ್ಚಿಗೆ ಸಸಿಗಳನ್ನು ನಾಟಿ ಮಾಡಲು ಹಾಗೂ ಕೋಣೆಗಳಿಗೆ ಸುಂದರವಾಗಿ ಮಕ್ಕಳಿಗೆ ಆಕರ್ಷೀಣೀಯವಾಗುವ ಹಾಗೇ ಚಿತ್ರಗಳನ್ನು ಬಿಡಿಸಲು ಶಿಕ್ಷಕರಿಗೆ ತಿಳಿಸಿದರು.
ನಂತರ ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಭೇಟಿ ನೀಡಿ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿ, ಗ್ರಾಮದಲ್ಲಿ ಸ್ವಚ್ಛತೆ, ನೈರ್ಮಲ್ಯ ಕಾಪಾಡುವಂತೆ ಜೊತೆಗೆ ಯಾವದೇ ಸ್ಥಳದಲ್ಲಿ ತ್ಯಾಜ್ಯ ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಲು ತಿಳಿಸಿದರು.
ನಂತರ ಸರಕಾರಿ ಕಸ್ತೂರ ಬಾ ಬಾಲಕಿಯರ ವಸತಿ ಶಾಲೆಗೆ ಭೇಟಿ ನೀಡಿ ಬಿಸಿಯೂಟದಲ್ಲಿ ಹಾಗೂ ಅಡುಗೆ ಕೋಣೆಯಲ್ಲಿ ಅತ್ಯಂತ ಹೆಚ್ಚೀನ ಸ್ವಚ್ಛತೆ ಕಾಪಾಡಲು ಶಿಕ್ಷಕರಿಗೆ ಹಾಗೂ ಅಡುಗೆ ಸಹಾಯಕರಿಗೆ ಸೂಚನೆ ನೀಡಿದರು.
ನಂತರ ಶಾಲೆಯ ಸಂಪೂರ್ಣ ಆವರಣವನ್ನು ಸ್ವಚ್ಛತೆಯಿಂದ ಕಾಪಾಡುವದರ ಜೊತೆಗೆ ಎಲ್ಲಿಯೂ ನೀರು ನೀಲದಂತೆ ವ್ಯವಸ್ಥೆ ಮಾಡಲು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿಯ ಸಹಾಯಕ ಲೆಕ್ಕಾಧಿಕಾರಿಗಳಾದ ಅನ್ವರಹುಸೇನ ನಧಾಪ, ತಾಲೂಕು ಐಇಸಿ ಸಂಯೋಜಕ ಕಲ್ಲಪ್ಪ ನಂದರಗಿ, ಕಾರ್ಯದರ್ಶಿ ಜಿ.ಎಸ್.ಕುಂಬಾರ, ತಾಲೂಕು ಪಂಚಾಯತಿಯ ವಿಜಯ ಯರಗಟ್ಟಿ, ಶ್ರೀಮಂತ ಕಟ್ಟಿ, ಸಂತೋಷ ಸೇರಿದಂತೆ ಗ್ರಾಮ ಪಂಚಾಯತಿಯ ಸಿಬ್ಬಂದಿ ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ

ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!

ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ

ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸೆ.೬ರಂದು ಮಾಂಗಲ್ಯ ಭವನದಲ್ಲಿ ಗುರುಸ್ಮರಣೆ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬರಗಾಲ ಘೋಷಣೆಗೆ ಆಗ್ರಹಿಸಿ ಯಡ್ರಾಮಿ ಬಂದ್!
    In (ರಾಜ್ಯ ) ಜಿಲ್ಲೆ
  • ಕೃಷ್ಣ-ವಾದಿರಾಜ ಮಠದಲ್ಲಿ ಧಾನ್ಯ ಪೂಜೆ
    In (ರಾಜ್ಯ ) ಜಿಲ್ಲೆ
  • ಸಾಧನೆಗೆ ಬಿಂದುವಿನಷ್ಟಿರುವ ಬಡತನ ಅಡ್ಡಿಯಾಗದಿರಲಿ :ಡಾ.ಜ್ಯೋತಿ
    In (ರಾಜ್ಯ ) ಜಿಲ್ಲೆ
  • ಸೆ.6 ರಂದು ಮಹಿಳೆಯರಿಗಾಗಿ ಪ್ರೋಮೋ ರನ್
    In (ರಾಜ್ಯ ) ಜಿಲ್ಲೆ
  • ಶ್ರೀ ಬಿ.ಎಂ.ಪಾಟೀಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ
    In (ರಾಜ್ಯ ) ಜಿಲ್ಲೆ
  • ಹಿರೇಮನಿ ದಂಪತಿ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ
    In (ರಾಜ್ಯ ) ಜಿಲ್ಲೆ
  • ತಾಲೂಕಾಡಳಿತದ ವೈಫಲ್ಯ ಖಂಡಿಸಿ ಡಿಎಸ್ಸೆಸ್ ಅರೆಬೆತ್ತಲೆ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ರೈತಮೋರ್ಚಾ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಸಂಗೊಳ್ಳಿ ರಾಯಣ್ಣ ಕನ್ನಡ ನಾಡಿನ ಕಟ್ಟಾಳು :ಶಾಸಕ ಪಾಟೀಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.