ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಇದೇ ಡಿ.೬ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗೆ ಓರಿಯಂಟೇಶನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಜಯಪುರದ ವಿಜಯವಾಣಿ ದಿನಪತ್ರಿಕೆಯ ಪತ್ರಕರ್ತ ಪರಶುರಾಮ ಬಾಸಗಿ ಭಾಗವಹಿಸಲಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ಶೃತಿ ಬೆಳ್ಳುಂಡಗಿ, ಮಲ್ಲಮ್ಮಾ ಪೂಜಾರ, ಲಕ್ಷ್ಮೀ ಎಸ್, ದೀಪಿಕಾ ಖರ್ತಿ, ದೀಕ್ಷಾ ಮುಚ್ಚಂಡಿ ಮತ್ತು ಖುದಿಜಾ ಖಾನ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ವಹಿಸಲಿದ್ದಾರೆ. ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ತಹಮೀನಾ ಕೋಲಾರ ಮತ್ತು ಸಂದೀಪ ನಾಯಕ, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು, ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿನಿಯರು ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

