ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವ್ಯವಹಾರ ಅಧ್ಯಯನ ವಿಭಾಗದಲ್ಲಿ ೨೦೨೪-೨೫ನೆಯ ಶೈಕ್ಷಣಿಕ ಸಾಲಿನ ಎಂಬಿಎ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಎಂಬಿಎ ಕೋರ್ಸ್ ಹಂಚಿಕೆಯಾಗಿ ಕೆಲವೇ ಕೆಲವು ಬಾಕಿ ಉಳಿದ ಸೀಟುಗಳಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಇದೇ ಡಿಸೆಂಬರ್ ೩೧ ರವರೆಗೆ ಯುಯುಸಿಎಂಎಸ್ ತಂತ್ರ‍್ರಾಂಶದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಪ್ರಾಧಿಕಾರ ನಿಗದಿಪಡಿಸಿರುವ ಶುಲ್ಕ ಮಾತ್ರ ಪಾವತಿಸಲು ಅವಕಾಶವಿದ್ದು, ಹೆಚ್ಚಿನ ಮಾಹಿತಿಗಾಗಿ www.kswu.ac.in£ÀÄß ಅಥವಾ ಮೊಬೈಲ್ ಸಂಖ್ಯೆ: ೯೮೪೫೯೮೮೪೮೯, ೯೮೪೪೯೦೧೯೯೯ ಸಂಪರ್ಕಿಸಬಹುದು ಎಂದು ಕುಲಸಚಿವ ಶಂಕರಗೌಡ ಸೋಮನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

