Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ಅಂಬೇಡ್ಕರ್ ವಿಚಾರಗಳನ್ನು ಅರ್ಥೈಸಿಕೊಳ್ಳಿ :ವಿರತೀಶಾನಂದ ಶ್ರೀ
(ರಾಜ್ಯ ) ಜಿಲ್ಲೆ

ಡಾ.ಅಂಬೇಡ್ಕರ್ ವಿಚಾರಗಳನ್ನು ಅರ್ಥೈಸಿಕೊಳ್ಳಿ :ವಿರತೀಶಾನಂದ ಶ್ರೀ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ವಿಚಾರಗಳನ್ನು ಅರ್ಥೈಸಿಕೊಂಡು ಅವರ ದಾರಿಯಲ್ಲಿ ಸಾಗುವುದೇ ನಾವು ಅವರಿಗೆ ನೀಡುವ ನಿಜವಾದ ಗೌರವ ಎಂದು ಮನಗೂಳಿ ವಿರಕ್ತಮಠದ ವಿರತೀಶಾನಂದ ಸ್ವಾಮೀಜಿ ಹೇಳಿದರು.
ಬುದ್ಧವಿಹಾರ ನಿರ್ಮಾಣ ಸಮಿತಿ, ಮಾನವ ಬಂಧುತ್ವ ವೇದಿಕೆ ಹಾಗೂ ದಲಿತ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಇಂದು ನಗರದ ಸಾರಿಪುತ್ರ ಬೋಧಿಧಮ್ಮ ಬುದ್ಧವಿಹಾರದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ೬೮ನೆಯ ಮಹಾಪರಿನಿರ್ವಾಣದ ನಿಮಿತ್ಯವಾಗಿ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಭಗವಾನ ಬುದ್ಧ, ಬಸವಣ್ಣ ಮತ್ತು ಡಾ. ಅಂಬೇಡ್ಕರ್ ಇವರಾರೂ ಅವತಾರಿಪುರುಷರಲ್ಲ. ಅವರೆಲ್ಲ ತಮ್ಮ ವೈಯಕ್ತಿಕ ಶ್ರಮ ಮತ್ತು ಸಾಧನೆಯಿಂದ ವಿಶ್ವಮಾನವರಾಗಿ ಬೆಳೆದು ನಿಂತವರು. ಅವರನ್ನು ದೇವರು ಮಾಡಿ ಆರಾಧಿಸುವ ಬದಲಾಗಿ ಅವರನ್ನು ಅನುಸರಿಸಬೇಕು ಎಂದು ಹೇಳಿದರು.
ಭಾರತದ ಎಲ್ಲಾ ಜಾತಿ ಜನಾಂಗದವರಿಗೆ ಸಮಾನ ಅವಕಾಶಗಳನ್ನು ಕಲ್ಪಿಸಿದ್ದಾರೆ. ಆದರೆ ವೈದಿಕವಾದಿಗಳು ಈ ಸಂವಿಧಾನ ಬೇಡವೆಂದು ಹೇಳುತ್ತಿದ್ದಾರೆ. ಮೊದಲಿನಿಂದಲೂ ಸಂವಿಧಾನವನ್ನು ವಿರೋಧಿಸುತ್ತ ಬಂದಿರುವ ವೈದಿಕರು ಸಂವಿಧಾನವನ್ನು ಬದಲಾಯಿಸಲು ಹೊರಟಿದ್ದಾರೆ. ಸಮಾನತೆಯನ್ನು ಬಯಸುವ ಎಲ್ಲ ವರ್ಗದವರು ಸಂವಿಧಾನವನ್ನು ರಕ್ಷಿಸಿಕೊಳ್ಳಲು ಮುಂದಾಗಬೇಕು ಎಂದು ಹೇಳಿದರು.
ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಫಾದರ್ ಟಿಯೊಲ್ ಮಾತನಾಡಿ, ಪ್ರಶ್ನೆಗಳನ್ನು ಕೇಳಬೇಕು ಮತ್ತು ಅದಕ್ಕೆ ಉತ್ತರವನ್ನು ಶೋಧಿಸುವ ಕೆಲಸವಿಂದು ನಡೆಯಬೇಕಿದೆ. ಸಂವಿಧಾನವನ್ನು ಸದ್ಬಳಕೆ ಮಾಡಿಕೊಂಡು ಶೋಷಿತ ಸಮುದಾಯಗಳನ್ನು ಮುಂಚೂಣಿಗೆ ತರಲು ಪ್ರಯತ್ನಿಸಬೇಕು. ನಮ್ಮ ಎಲ್ಲ ಸಮಸ್ಯೆಗಳಿಗೆ ಸಂವಿಧಾನದಲ್ಲಿ ಪರಿಹಾರಗಳಿವೆ ಎಂದು ಹೇಳಿದರು.
ಕನ್ನಡ ಅಭಿವೃದ್ಧಿ ಪ್ರಾದಿಕಾರದ ಸದಸ್ಯೆ ಶ್ರೀಮತಿ ದಾಕ್ಷಾಯಿಣಿ ಹುಡೇದ ಅವರು ಮಾತನಾಡಿ, ಈ ದೇಶಕ್ಕೆ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ನೀಡಿದ ಕೊಡುಗೆಯನ್ನು ಯಾರೂ ಮರೆಯುಂತಿಲ್ಲ. ಅವರು ಶೋಷಿತ ವರ್ಗಗಳು ವಿಶೇಷವಾಗಿ ಕಾರ್ಮಿಕರು ಮತ್ತು ಮಹಿಳೆಯರ ಮಾನವೀಯ ಹಕ್ಕುಗಳನ್ನು ಕೊಡಿಸುವುದಕ್ಕಾಗಿ ತಮ್ಮ ಜೀವನದ ಕೊನೆಯ ಕ್ಷಣದ ವರೆಗೂ ಹೋರಾಡಿದರು. ಮಹಿಳೆಯರ ಸ್ಥಾನಮಾನಕ್ಕಾಗಿ ಸಂಸತ್ತಿನಲ್ಲಿ ಅವರು ತಂದ ಹಿಂದೂ ಕೋಡ್ ಬಿಲ್ ಬಿದ್ದುಹೋದಾಗ ತಮ್ಮ ಮಂತ್ರಿಪದವಿಗೆ ರಾಜೀನಾಮೆ ನೀಡಿದರು. ಮಹಿಳೆರ ಹಕ್ಕುಗಳಿಗಾಗಿ ಅಧಿಕಾರ ತ್ಯಾಗಮಾಡಿದ ಏಕೈಕ ನಾಯಕರು ಅಂಬೇಡ್ಕರ್ ಎಂದು ಹೇಳಿದರು.
ಮಾನವಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ಪ್ರಭುಗೌಡ ಪಾಟೀಲ, ಮೌಲಾನಾ ಅಬ್ದುಲಹನೀಫ್ ಮೊಕಾಶಿ ಮಾತನಾಡಿದರು. ಬುದ್ಧವಿಹಾರ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ರಾಜಶೇಖರ ಯಡಹಳ್ಳಿ ಅಧ್ಯಕ್ಷತೆ ವಹಿಸಿದ್ದರು. ಭಂತೆ ಬೋಧಿಕೀರ್ತಿ ಸಾನಿಧ್ಯ ವಹಿಸಿದ್ದರು.
ಮೇ ಸಾಹಿತ್ಯ ಬಳಗದ ಕಲಾತಂಡದ ಸಹೋದರಿಯರ ಕ್ರಾಂತಿಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಚೆನ್ನು ಕಟ್ಟಿಮನಿ ಸ್ವಾಗತಿಸಿದರು. ಅನಿಲ ಹೊಸಮನಿ ಪ್ರಾಸ್ತಾವಿಕ ಮಾತನಾಡಿದರು. ಸಂಜು ಕಂಬಾಗಿ ವಂದಿಸಿದರು. ಪ್ರತಾಪ ಚಿಕ್ಕಲಕಿ ನಿರೂಪಿಸಿದರು.
ಮಹಾನಗರಪಾಲಿಕೆ ಸದಸ್ಯೆ ಆರತಿ ಶಹಾಪುರ, ಬಸವ ಚಿಂತಕ ಡಾ. ಜೆ.ಎಸ್. ಪಾಟೀಲ, ಬುದ್ಧವಿಹಾರ ನಿರ್ಮಾಣ ಸಮಿತಿಯ ಪ್ರಧಾನ ಕಾರ್ಯದರ್ಶಿ ನಾಗರಾಜ ಲಂಬು, ಉಪಾಧ್ಯಕ್ಷ ಸಾಬು ಚಲವಾದಿ, ನಿರ್ದೇಶಕರಾದ ರಾಜು ತೊರವಿ, ದಶವಂತ ಗುನ್ನಾಪುರ, ಅಪ್ಪು ನಾಗಠಾಣ, ಪೀರಪ್ಪ ನಡುವಿನಮನಿ, ಭೀಮಶಿ ಹಿಪ್ಪರಗಿ, ಬಿ.ಎಸ್. ಬ್ಯಾಳಿ, ಕೆ.ಎಂ. ಶಿವಶರಣ, ಚಿದಾನಂದ ನಿಂಬಾಳ, ರಮೇಶ ಕವಲಗಿ, ಉಮೇಶ ಹೆಂಡೆಗಾರ, ಬಸವಚಿತ ಹಗುಣದಾಳ, ಆರ್.ಎಚ್. ಬನಸೋಡೆ, ಸದಾಶಿವ ಗುನ್ನಾಪುರ, ದಸ್ತಗಿರ ಉಕ್ಕಲಿ, ಎಂ.ಜಿ. ಆನಂದ, ವೈ.ಎಚ್.ಲಂಬು, ಸಿ.ಆರ್. ತೊರವಿ, ಎನ್.ಎಸ್. ಶಿವನಾಕರ, ಚಿದಾನಂದ ಹೊನವಾಡಕರ, ರಮೇಶ ಯಡಹಳ್ಳಿ, ಬಸವರಾಜ ಹೋಳ್ಕರ, ಕೆ.ಎಂ. ಕೂಡಲಗಿ, ವಿದ್ಯಾವತಿ ಅಂಕಲಗಿ, ಮಹಾದೇವಿ ಗೋಕಾಕ, ಭಾರತಿ ಹೊಸಮನಿ ಸೇರಿದಂತೆ ಬುದ್ಧ, ಬಸವ, ಅಂಬೇಡ್ಕರ್ ಅನುಯಾಯಿಗಳು, ದಲಿತ ಮುಖಂಡರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.