Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಾ.ಅಂಬೇಡ್ಕರ ತ್ಯಾಗ ಮತ್ತು ಸಮಾಜಸೇವೆ ಮರೆಯಲಾಗದು
(ರಾಜ್ಯ ) ಜಿಲ್ಲೆ

ಡಾ.ಅಂಬೇಡ್ಕರ ತ್ಯಾಗ ಮತ್ತು ಸಮಾಜಸೇವೆ ಮರೆಯಲಾಗದು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಡಾ.ಬಿ.ಆರ್.ಅಂಬೇಡ್ಕರ್ ಅವರ ೬೮ನೇ ಮಹಾ ಪರಿನಿರ್ವಾಣ ದಿನಾಚರಣೆಯಲ್ಲಿ ಗುಲಬರ್ಗಾ ವಿ.ವಿಯ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ.ಹೆಚ್.ಟಿ. ಪೋತೆ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಆಧುನಿಕ ಭಾರತದ ನಿರ್ಮಾತೃ ಹಾಗೂ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೆಬ್ ಅಂಬೇಡ್ಕರ ಅವರ ತ್ಯಾಗ ಮತ್ತು ಸಮಾಜ ಸೇವೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಗುಲಬರ್ಗಾ ವಿ.ವಿಯ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ.ಹೆಚ್.ಟಿ. ಪೋತೆ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರ ಮತ್ತು ಪ.ಜಾ/ಪ.ಪಂ ಘಟಕದ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ೬೮ನೇ ಮಹಾ ಪರಿನಿರ್ವಾಣ ದಿನಾಚರಣೆಯ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಡಾ.ಅಂಬೇಡ್ಕರ್ ಅವರ ಆಂದೋಲನಗಳು ಮತ್ತು ದೃಷ್ಟಿಕೋನವು ದೇಶದ ಅಭಿವೃದ್ಧಿಗೆ ಮಹತ್ವಪೂರ್ಣವಾದ ಕೊಡುಗೆ ನೀಡಿವೆ. ಕಾರ್ಮಿಕರ ಹಕ್ಕುಗಳನ್ನು, ಸಮಾನತೆ ಮತ್ತು ನ್ಯಾಯವನ್ನು ಎತ್ತಿಹಿಡಿದ ಅವರು, ಹೆಣ್ಣುಮಕ್ಕಳ ಶಿಕ್ಷಣ ಮತ್ತು ಸಾಮಾಜಿಕ ಸ್ಥಾನಮಾನವನ್ನು ಹೆಚ್ಚಿಸಲು ಹಲವಾರು ಕ್ರಮಗಳನ್ನು ತೆಗೆದುಕೊಂಡರು. ಅಂಬೇಡ್ಕರ್ ಅವರ ಸಾಹಸ ಮತ್ತು ಸಮರ್ಥ ಕಾರ್ಯಗಳು ಸಮಾಜದಲ್ಲಿ ಬದಲಾವಣೆಯನ್ನು ತರಲು ಮತ್ತು ನವೀನ ಭಾರತದ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸಿವೆ ಎಂದರು.
ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಅಂಬೇಡ್ಕರ ಅವರು ಈ ದೇಶಕ್ಕೆ ಮಹಾನ್ ಕೊಡುಗೆ ನೀಡಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಸಂವಿಧಾನದ ಕುರಿತು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ಸಂಘಟಿಸಿ ವಿಜೇತರಿಗೆ ನಗದು ಬಹುಮಾನ ನೀಡಿದರು.
ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ ಮಾತನಾಡಿ, ಅಂಬೇಡ್ಕರ ಅವರ ಜೀವನ ಆದರ್ಶಗಳನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಮಾತನಾಡಿದರು.
ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಸಂಜೀವಕುಮಾರ ಗಿರಿ ಸ್ವಾಗತಿಸಿದರು. ಪ.ಜಾ/ಪ.ಪಂ ಘಟಕದ ನಿರ್ದೇಶಕ ಪ್ರೊ.ಹನುಮಂತಯ್ಯ ಪೂಜಾರಿ ನಿರೂಪಿಸಿದರು ಮತ್ತು ಡಾ.ಬಾಬು ಲಮಾಣಿ ವಂದಿಸಿದರು.

“ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾರತದ ಆರ್ಥಿಕ ಪ್ರಗತಿಗೆ ಮಹತ್ವಪೂರ್ಣ ಕೊಡುಗೆಗಳನ್ನು ನೀಡಿದ ಮಹಾನ್ ವ್ಯಕ್ತಿಯಾಗಿದ್ದಾರೆ. ಅವರು ಆರ್ಥಿಕ ಸಮಾನತೆ ಮತ್ತು ನ್ಯಾಯವನ್ನು ಸ್ಥಾಪಿಸಲು ತತ್ವಗಳನ್ನು ರೂಪಿಸಿ, ದಲಿತರು ಹಾಗೂ ಹಿಂದುಳಿದ ವರ್ಗಗಳ ಆರ್ಥಿಕ ಮತ್ತು ಸಾಮಾಜಿಕ ಹಕ್ಕುಗಳನ್ನು ರಕ್ಷಿಸಲು ಹಲವು ಕ್ರಮಗಳನ್ನು ಜಾರಿಗೆ ತಂದರು.”

– ಪ್ರೊ. ಬಿ.ಕೆ.ತುಳಸಿಮಾಲ
ಕುಲಪತಿ, ಮಹಿಳಾ ವಿವಿ, ವಿಜಯಪುರ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.