Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೆಚ್ಚು ಕೌಶಲ್ಯಗಳನ್ನು ಹೊಂದಿದ್ದರೆ ಮಾದ್ಯಮ ಕ್ಷೇತ್ರದಲ್ಲಿ ಅವಕಾಶ ಲಭ್ಯ
(ರಾಜ್ಯ ) ಜಿಲ್ಲೆ

ಹೆಚ್ಚು ಕೌಶಲ್ಯಗಳನ್ನು ಹೊಂದಿದ್ದರೆ ಮಾದ್ಯಮ ಕ್ಷೇತ್ರದಲ್ಲಿ ಅವಕಾಶ ಲಭ್ಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಹಿಳಾ ವಿವಿಯಲ್ಲಿ ಓರಿಯೆಂಟೇಶನ್ ಕಾರ್ಯಕ್ರಮ ಉದ್ಘಾಟಿಸಿದ ಪತ್ರಕರ್ತ ಪರಶುರಾಮ ಬಾಸಗಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿದ್ದು ಈ ಅವಕಾಶಗಳನ್ನು ಪಡೆದುಕೊಳ್ಳಬೇಕಾದರೆ ಹೆಚ್ಚು ಹೆಚ್ಚು ಕೌಶಲ್ಯಗಳನ್ನು ಕರಗತ ಮಾಡಿಕೊಳ್ಳಬೇಕು ಎಂದು ಪತ್ರಕರ್ತ ಪರಶುರಾಮ ಬಾಸಗಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಓರಿಯೆಂಟೇಶನ್ ಕಾರ್ಯಕ್ರಮ ತ ಉದ್ಘಾಟಿಸಿ ಮಾತನಾಡಿದ ಅವರು, ಉತ್ತಮ ಬರವಣಿಗೆಯ ಕೌಶಲ್ಯ, ವಿಮರ್ಶಾತ್ಮಕ ಚಿಂತನೆ, ತಂತ್ರಜ್ಞಾನ ಜ್ಞಾನ, ಮತ್ತು ಸ್ಪಷ್ಟ ಸಂವಹನವು ಮಾಧ್ಯಮ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ ಎಂದರು.
ಮಾಧ್ಯಮ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಕೌಶಲ್ಯಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ. ಕೇವಲ ಅಧ್ಯಯನ ಮಾತ್ರವಲ್ಲ, ಉತ್ತಮ ಬರವಣಿಗೆಯ ಕೌಶಲ್ಯ, ವಿಚಾರಧಾರೆಗಳು, ಹಾಗೂ ವಿಭಿನ್ನ ಭಾಷೆಗಳ ಪ್ರಭುತ್ವವು ಮುಖ್ಯ. ವಿಶ್ಲೇಷಣೆ, ತೀಕ್ಷ್ಣ ನೋಟ, ಮತ್ತು ನಿರಂತರವಾಗಿ ಕಲಿಯುವ ಹಂಬಲ ನಿಮ್ಮ ಯಶಸ್ಸಿಗೆ ದಾರಿ ತೋರುತ್ತವೆ. ಹೊಸ ವಿಚಾರಗಳನ್ನು ಅನ್ವೇಷಿಸಲು ಮತ್ತು ನಿಮ್ಮ ಕೌಶಲ್ಯಗಳನ್ನು ತೀಕ್ಷ್ಣಗೊಳಿಸಲು ನಿರಂತರ ಪ್ರಯತ್ನ ಮಾಡಬೇಕು ಎಂದರು.
ಇದೇ ಸಂದರ್ಭದಲ್ಲಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಸಂದೀಪ್ ನಾಯಕ್ ಮಾತನಾಡಿ ಪತ್ರಿಕೋದ್ಯಮ ವೃತ್ತಿಯಲ್ಲಿ ಯಶಸ್ಸು ಪಡೆಯಬೇಕಾದರೆ ನಿರಂತರ ಪ್ರಯತ್ನ ಮತ್ತು ಕಾರ್ಯ ತತ್ಪರತೆ ಮುಖ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಮಾತನಾಡಿದರು.
ಇದೇ ಸಂದರ್ಭದಲ್ಲಿ ವಿಭಾಗದ ಹಳೆಯ ವಿದ್ಯಾರ್ಥಿನಿಯರಾದ ಶ್ರುತಿ ಬೆಳ್ಳುಂಡಗಿ, ಮಲ್ಲಮ್ಮಾ ಪುಜಾರಿ, ಲಕ್ಷ್ಮಿ ಎಸ್, ದೀಪಿಕಾ ಖತ್ರಿ, ದೀಕ್ಷಾ ಮುಚ್ಚಂಡಿ, ಮತ್ತು ಖುದಿಜಾ ಖಾನ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ತಮ್ಮ ಅನುಭವಗಳನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು, ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂಶೋಧನಾ ವಿದ್ಯಾರ್ಥಿನಿ ಸುಷ್ಮಾ ಪವಾರ ಸ್ವಾಗತಿಸಿದರು. ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ತಹಮೀನ ಕೋಲಾರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂಶೋಧನಾ ವಿದ್ಯಾರ್ಥಿನಿ ಫಿಲೋಮಿನಾ ನಿರೂಪಿಸಿದರು, ಪವಿತ್ರಾ ಕಂಬಾರ ವಂದಿಸಿದರು.

“ಪತ್ರಿಕೋದ್ಯಮದ ಪಾತ್ರವು ಅತ್ಯಂತ ಮಹತ್ವದ್ದಾಗಿದೆ, ಅದು ಸಮಾಜದ ಕಣ್ಣಾಗಿರುವಂತೆ ಕಾರ್ಯನಿರ್ವಹಿಸುತ್ತದೆ. ಕೇವಲ ಪಠ್ಯಾಧಾರಿತ ಅಧ್ಯಯನ ಮಾತ್ರ ಸಾಕಾಗದೇ, ವೃತ್ತಿಪರ ಕೌಶಲ್ಯಗಳನ್ನು ಕಲಿತು ಅನುಭವದಿಂದ ನಿಮ್ಮ ಕಾರ್ಯತತ್ತ್ವವನ್ನು ಸುಧಾರಿಸುವುದು ಮುಖ್ಯ. ಕೌಶಲ್ಯಗಳನ್ನು ಅರಿತು ಸರಿಯಾದ ರೀತಿಯಲ್ಲಿ ಅಭ್ಯಾಸ ಮಾಡಿದರೆ, ಉದ್ಯೋಗ ಅವಕಾಶಗಳು ಸ್ವತಃ ನಿಮ್ಮತ್ತ ಚಲಿಸುತ್ತವೆ. ಪಠ್ಯವನ್ನು ಓದುವುದರ ಜೊತೆಗೆ ವಿಮರ್ಶಾತ್ಮಕ ಚಿಂತನೆ ಹಾಗೂ ಸದೃಢ ಕೌಶಲ್ಯಗಳಿಂದ ನಿಮ್ಮ ವೃತ್ತಿ ಜೀವನದಲ್ಲಿ ಯಶಸ್ಸು ಸಾಧಿಸಬಹುದು.”

– ಪ್ರೊ.ಓಂಕಾರ ಕಾಕಡೆ
ಮುಖ್ಯಸ್ಥರು, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
ಮಹಿಳಾ ವಿವಿ, ವಿಜಯಪುರ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.