ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕಾರು ಮತ್ತು ಕಬ್ಬು ಕಟಾವು ಮಷೀನ್ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಿಳೇಬಾವಿ ಕ್ರಾಸ್ ಬಲಿ ನಡೆದಿದೆ.
ಮೃತರನ್ನು ವಿಜಯಪುರ ತಾಲೂಕಿನ ಅಲಿಯಾಬಾದ್ ನಿವಾಸಿಗಳೆಂದು ಗುರುತಿಸಲಾಗಿದ್ದು, ಈರ್ವರು ಮಹಿಳೆಯರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ.
ಮೃತರು ಹುಣಸಗಿಯಿಂದ ತಾಳಿಕೋಟೆಗೆ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಮೃತರನ್ನು ನಿಂಗಪ್ಪ ಪಾಟೀಲ (೫೫), ಶಾಂತಪ್ಪ ಪಾಟೀಲ (೪೫), ಭೀಮಶಿ ಸಂಕನಾಳ (೬೫), ಶಶಿಕಲಾ (೫೦), ದಿಲೀಪ ಪಾಟೀಲ (೪೫) ಎಂದು ಗುರುತಿಸಲಾಗಿದೆ.
ಕಾರು ಮತ್ತು ಕಬ್ಬು ಕಟಾವು ಮಷೀನ್ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮದುವೆಗೆ ಹುಡುಗಿ ನೋಡಲು ಹೋಗಿ ವಾಪಸು ಬರುತ್ತಿದ್ದಾಗ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ತಾಳಿಕೋಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳಕ್ಕೆ ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿದ್ದಾರೆ.

