Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಫೆ.೪ ರಂದು ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ :ಈಶ್ವರಪ್ಪ
(ರಾಜ್ಯ ) ಜಿಲ್ಲೆ

ಫೆ.೪ ರಂದು ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ :ಈಶ್ವರಪ್ಪ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿಯಲ್ಲಿ ಉದ್ಘಾಟನೆ | ೧೦೦೮ ಮಹಾತ್ಮ ಪೂಜ್ಯರ ಪಾದಪೂಜೆ | ಲಕ್ಷಾಂತರ ಜನರು ಭಾಗಿ | ಬ್ರಿಗೇಡ್ ಅಧ್ಯಕ್ಷ ಸೋಮೇಶ್ವರ ಸ್ವಾಮೀಜಿ ಘೋಷಣೆ

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಹಿಂದು ಧರ್ಮದ ರಕ್ಷಣೆ, ಹಿಂದು ಸಮಾಜಕ್ಕೆ ತೊಂದರೆಯಾದರೆ ಅಲ್ಲಿ ಧ್ವನಿ ಎತ್ತುವದು, ಸಮಾಜದ ಹಿಂದುಳಿದ ದಲಿತ ಎಲ್ಲ ಮಕ್ಕಳ ಅಭಿವೃದ್ಧಿ ಸೇರಿದಂತೆ ವಿವಿಧ ಉದ್ಧೇಶಗಳನ್ನು ಮುಂದಿಟ್ಟುಕೊಂಡು ಉತ್ತರ ಕರ್ನಾಟಕದ ಎಲ್ಲ ಮಠಾಧೀಶರು ಸಮಾಲೋಚನೆ ಮಾಡಿದ ಕ್ರಾಂತಿವೀರ ಬ್ರಿಗೇಡ್ ಅಸ್ತಿತ್ವ ಬಂದಿದೆ. ಈ ಬ್ರಿಗೇಡ್ ಅನ್ನು ೨೦೨೫ ನೇ ಫೆಬ್ರುವರಿ ೪ ರಂದು ಕ್ರಾಂತಿಪುರುಷ ವಿಶ್ವಗುರು ಬಸವೇಶ್ವರರ ಜನ್ಮಸ್ಥಳ ಬಸವನಬಾಗೇವಾಡಿಯಲ್ಲಿ ಉದ್ಘಾಟಿಸಲಾಗುವದು ಎಂದು ಕ್ರಾಂತಿವೀರ ಬ್ರಿಗೇಡ್ದ ಅಧ್ಯಕ್ಷ ಮಕಾನಪುರ ಗುರುಪೀಠದ ಸೋಮೇಶ್ವರ ಸ್ವಾಮೀಜಿ ಹೇಳಿದರು.
ಪಟ್ಟಣದ ಮಸಬಿನಾಳ ರಸ್ತೆಯಲ್ಲಿರುವ ಯಲ್ಲಾಲಿಂಗ ಮಠದ ಕಲ್ಯಾಣ ಮಂಟಪದಲ್ಲಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೧೨ ನೇ ಶತಮಾನದಲ್ಲಿ ಬಸವೇಶ್ವರರು ಸಮಾನತೆಯನ್ನು ತರಲು ಕ್ರಾಂತಿ ಮಾಡಿದರು. ಈ ಭಾಗದ ಮಠಾಧೀಶರರು ಹಿಂದು ಸಮಾಜ-ಧರ್ಮದ ರಕ್ಷಣೆಗಾಗಿ ಕ್ರಾಂತಿಪುರುಷನ ನೆಲದಿಂದಲೇ ಕ್ರಾಂತಿವೀರ ಬ್ರಿಗೇಡ್ ಆರಂಭವಾಗಬೇಕೆಂಬ ಆಶಯ ಹೊದಿದ್ದಾರೆ. ಈ ಬ್ರಿಗೇಡ್ ಉದ್ಘಾಟನೆ ದಿನ ಫೆ. ೪ ರಂದು ೧೦೦೮ ಮಹಾತ್ಮ ಪೂಜ್ಯರ ಪಾದಪೂಜೆ ನೆರವೇರಲಿದೆ. ಉದ್ಘಾಟನೆ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನರು ಸೇರುತ್ತಾರೆ. ಈ ಕಾರ್ಯಕ್ರಮದಲ್ಲಿ ಜಾತ್ಯಾತೀತ, ಪಕ್ಷಾತೀತವಾಗಿ ಭಾಗವಹಿಸಬೇಕು. ನಾವು ಯಾವುದೇ ರಾಜಕೀಯ ಮಾಡದೇ ಕೇವಲ ಧರ್ಮದ ರಕ್ಷಣೆ ಮಾಡುವುದೇ ನಮ್ಮ ಉದ್ದೇಶವಾಗಿದೆ. ಸಮಾಜದಲ್ಲಿರುವ ಒಡೆಯರ, ಪೂಜಾರಿ, ದೇವಸ್ಥಾನದ ಅರ್ಚಕರ ಮಕ್ಕಳಿಗೆ ಪೂಜಾ ವಿಧಿ-ವಿಧಾನ ಕಲಿಸಬೇಕೆಂಬ ಉದ್ದೇಶದಿಂದ ಪಾಠಶಾಲೆಯೊಂದನ್ನು ನಮ್ಮ ಬ್ರಿಗೇಡ್ದಿಂದ ಆರಂಭಿಸುವ ಉದ್ದೇಶ ಹೊಂದಲಾಗಿದೆ. ಹಿಂದು ಸಮಾಜದ ಮಠ-ಮಂದಿರಗಳ, ರೈತ ಬಾಂಧವರ ಆಸ್ತಿ ವಕ್ಫ್ ಮಂಡಳಿಗೆ ಹೋದರೆ ಹೋರಾಟ ಮಾಡಲಾಗುವದು. ಆಳಂದ ತಾಲೂಕಿನ ಸಾವಳೇಶ್ವರ ಗ್ರಾಮದ ಬೀರಪ್ಪ ದೇವಸ್ಥಾನದ ಆಸ್ತಿಯಲ್ಲಿ ವಕ್ಫ್ ಬಂದಾಗ ಕೂಡಲೇ ನಾವು ಕೆ.ಎಸ್.ಈಶ್ವರಪ್ಪ ಅವರೊಂದಿಗೆ ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಕನಕದಾಸ ಜಯಂತಿಯೊಳಗೆ ಇದನ್ನು ಸರಿಪಡಿಸಬೇಕೆಂದು ಆಗ್ರಹಿಸಿದಾಗ ಕೂಡಲೇ ೨೦ ನಿಮಿಷದಲ್ಲಿ ಜಿಲ್ಲಾಧಿಕಾರಿಗಳು ಇದನ್ನು ಸರಿಪಡಿಸಿದ್ದರು ಎಂದರು.
ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಮಾತನಾಡಿದರು.
ಸುದ್ದಿಗೋಷ್ಠಿಯಲ್ಲಿ ಕ್ರಾಂತಿವೀರ ಬ್ರಿಗೇಡ್ ಪ್ರಧಾನ ಕಾರ್ಯದರ್ಶಿ ಕೌಲಗುಪ್ಪಿಯ ಅಮರೇಶ್ವರ ಮಹಾರಾಜರು, ವರ್ಚಗಲ್ದ ನಿತ್ಯಾನಂದ ಸ್ವಾಮೀಜಿ, ಗದಗದ ಶಿವಕುಮಾರ ಸ್ವಾಮೀಜಿ, ಜಮಖಂಡಿಯ ಪ್ರಭು ಸ್ವಾಮೀಜಿ, ಭತಗುಣಕಿಯ ಮಹಾರಾಜರು, ಮದಗೂಂಡೇಶ್ವರ ಸ್ವಾಮೀಜಿ, ಬಿಳಿಆನಿ ಸಿದ್ದಮಹಾರಾಜರು, ಕೆಂಚರಾಯ ಮಹಾರಾಜರು, ಲಾಯಪ್ಪ ಪೂಜಾರಿ, ಅಭಿನವ ಸಿದ್ದಾನಂದ ಪೂಜ್ಯರು, ಮಾಳಪ್ಪ ಪೂಜ್ಯರು,ಪರಮಾನಂದ ಪೂಜ್ಯರು, ರಾಜಶೇಖರ ಯರನಾಳ, ಬಸವರಾಜ ಬಾಳಿಕಾಯಿ, ಈರನಗೌಡ ಹಳೆಗೌಡರ, ಗೋವಿಂದ ಕೊಪ್ಪ, ಮಲ್ಲಿಕಾರ್ಜುನ ಒಡೆಯರ, ಶಾಂತಕುಮಾರ ಚಳಕೇರಿ, ಅಂಬರೀಶ ಕಾಮನಕೇರಿ, ಅಶೋಕ ಒಡೆಯರ, ಕಾಶೀನಾಥ ಚನ್ನವೀರ, ಸಿದ್ದಪ್ಪ ಮುದ್ದಣ್ಣನವರ, ಸುನೀಲ ಬಾಗೇವಾಡಿ, ಸಿದ್ರಾಮಪ್ಪ ಹತ್ತಿ, ಶಿಲ್ಪಾ ಕುದರಗೊಂಡ ಸೇರಿದಂತೆ ಇತರರು ಇದ್ದರು.

“ಅನೇಕ ಮಠಾಧೀಶರರು ಸಮಾಲೋಚನೆ ಮಾಡಿ ಕ್ರಾಂತಿವೀರ ಬ್ರಿಗೇಡ್ಗೆ ಮಾರ್ಗದರ್ಶಿ ಮಂಡಳಿ ರಚಿತವಾಗಿದೆ. ಶೀಘ್ರದಲ್ಲಿಯೇ ಇದರ ಕಮೀಟಿ ರಚನೆಯಾಗಲಿದೆ. ಫೆ.೪ ರಂದು ನಡೆಯುವ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ ಕಾರ್ಯಕ್ರಮ ರಾಜ್ಯದ ಇತಿಹಾಸ ಪುಟದಲ್ಲಿಯೇ ಅದ್ಭುತವಾಗಿ ನಡೆಯಲಿದೆ. ಹಿಂದು ಧರ್ಮ, ಹಿಂದುತ್ವ ವಿಷಯ ಬಂದಾಗ ಯಾರಿಗೂ ನಾನು ಸೊಪ್ಪು ಹಾಕುವದಿಲ್ಲ. ಕ್ರಾಂತಿವೀರ ಬ್ರಿಗೇಡ್ವು ಹಿಂದು ಧರ್ಮ, ಹಿಂದುತ್ವ ರಕ್ಷಣೆಗಾಗಿ ಕಾರ್ಯನಿರ್ವಹಿಸಲಿದೆ. ಇದರಲ್ಲಿ ಎಲ್ಲರೂ ಭಾಗವಹಿಸಬಹುದು.”

– ಕೆ.ಎಸ್.ಈಶ್ವರಪ್ಪ
ಮಾಜಿ ಉಪ ಮುಖ್ಯಮಂತ್ರಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.