ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿ ನೋಂದಣಿಯಾದ ಲೇವಾದೇವಿ, ಗಿರವಿ ಹಾಗೂ ಹಣಕಾಸು ಸಂಸ್ಥೆಗಳು ಪರವಾನಿಗೆಯನ್ನು 2025ರ ಜನವರಿ 31ರೊಳಗಾಗಿ ನಿಗದಿತ ಶುಲ್ಕ ಪಾವತಿಸಿ ನವೀಕರಣಗೊಳಿಸಿಕೊಳ್ಳುವಂತೆ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀಮತಿ ಎಸ್.ಕೆ.ಭಾಗ್ಯಶ್ರೀ ಅವರು ತಿಳಿಸಿದ್ದಾರೆ.
2025ರ ಮಾರ್ಚ್ 31ಕ್ಕೆ ಮುಕ್ತಾಯಗೊಳ್ಳುತ್ತಿರುವ ಎಲ್ಲಾ ಹಣಕಾಸು ಸಂಸ್ಥೆಗಳು ಪರವಾನಿಗೆ ನವೀಕರಿಸಿಕೊಳ್ಳಬೇಕು. ನಿಗದಿತ ಅವಧಿಯಲ್ಲಿ ನವೀಕರಿಸದೇ ಇದ್ದಲ್ಲಿ ನಂತರ ಬಂದ ಅರ್ಜಿಗಳಿಗೆ ಕಾಯ್ದೆ 6(4) ರಲ್ಲಿ ನಿರ್ದಿಷ್ಟಪಡಿಸಲಾದ ದರದ ದುಪ್ಪಟ್ಟು ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ ಹಾಗೂ ಕಾಯ್ದೆ ಕಲಂ 7ಎ(2)ರ ಪ್ರಕಾರ ವ್ಯವಹಾರದಲ್ಲಿ ತೊಡಗಿಸಿ ಮೊತ್ತಕ್ಕೆ ಅನುಗುಣವಾಗಿ ಭದ್ರತಾ ಠೇವಣಿಯನ್ನು ಪಾವತಿಸಿ ಸಹಕಾರ ಸಂಘಗಳ ಸಹಾಯಕ ನಿಬಂಧಕರು ವಿಜಯಪುರ-ಇಂಡಿ ಇವರ ಮೂಲಕ ನವೀಕರಣಕ್ಕೆ ಪ್ರಸ್ತಾವನೆ ಸಲ್ಲಿಸಬೇಕಾಗಿರುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
