ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ
ಕೃಷಿ ಮಹಾವಿದ್ಯಾಲಯದಲ್ಲಿ ಖಾಲಿ ಇರುವ 2 ಗ್ರಂಥಾಲಯ ಸಹಾಯಕರ ಹುದ್ದೆಗೆ ತಾತ್ಕಾಲಿಕವಾಗಿ ಭರ್ತಿಮಾಡಿಕೊಳ್ಳಲು
ಅರ್ಜಿ ಆಹ್ವಾನಿಸಲಾಗಿದೆ.
ಸದರಿ ಹುದ್ದೆಯು 179 ದಿನಗಳವರೆಗೆ ಅಥವಾ ಖಾಯಂ ಗ್ರಂಥಾಲಯ ಸಹಾಯಕರು ನೇಮಕಾತಿಗೊಂಡಲ್ಲಿ ಯಾವುದು ಮೊದಲು ಅಲ್ಲಿಯವರೆಗೆ ಇರುತ್ತದೆ. ಗ್ರಂಥಾಲಯ ವಿಜ್ಞಾನದಲ್ಲಿ ಪದವಿ ಪಡೆದ ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ದಾಖಲಾತಿಗಳೊಂದಿಗೆ ದಿನಾಂಕ: 20-12-2024ರಂದು ಬೆಳಿಗ್ಗೆ 11 ಘಂಟೆಗೆ ಕೃಷಿ ಮಹಾವಿದ್ಯಾಲಯದ ಸಂದರ್ಶನ ಕೊಠಡಿಗೆ ಹಾಜರಾಗಬಹುದು ಎಂದು ವಿಜಯಪುರ ಕೃಷಿ ಮಹಾವಿದ್ಯಾಲಯದ ಪ್ರಕಟಣೆ ತಿಳಿಸಿದೆ.
