Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಶ್ರಮ ವಹಿಸಿ :ನ್ಯಾಮಗೌಡ
(ರಾಜ್ಯ ) ಜಿಲ್ಲೆ

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಶ್ರಮ ವಹಿಸಿ :ನ್ಯಾಮಗೌಡ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಿಕ್ಕಪಡಸಲಗಿ: ಪ್ರಸ್ತುತ 2024-25 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ತಯಾರಿಗೆ ಮಕ್ಕಳು ಈಗಿಂದಲೇ ಮಾನಸಿಕವಾಗಿ ಸಿದ್ದತೆಗೊಳ್ಳಬೇಕು. ಆ ದಿಸೆಯಲ್ಲಿ ಎಲ್ಲ ಎಸ್ಸೆಸ್ಸೆಲ್ಸಿ ಮಕ್ಕಳನ್ನು ಪರೀಕ್ಷಾ ಮುಖ್ಯ ವಾಹಿನಿಗೆ ತರಲು ಶಿಕ್ಷಕರು ಪ್ರಯತ್ನಿಸಬೇಕಲ್ಲದೇ ಫಲಿತಾಂಶ ಸುಧಾರಣೆಗೆ ನಿರಂತರ ಶ್ರಮ ವಹಿಸಬೇಕು ಎಂದು ಬಾಗಲಕೋಟೆ ಶಾಲಾ ಶಿಕ್ಷಣ ಇಲಾಖೆ ಉಪನಿದೇ೯ಶಕರ ಕಚೇರಿಯ ವಿಜ್ಞಾನ ವಿಷಯ ಪರಿವೀಕ್ಷಕ ಎಂ.ಎಸ್.ನ್ಯಾಮಗೌಡ ಸಲಹೆಯಿತ್ತರು.
ಜಮಖಂಡಿ ತಾಲ್ಲೂಕಿನ ಚಿಕ್ಕಪಡಸಲಗಿ ಗ್ರಾಮದಲ್ಲಿ ಗದುಗಿನ ತೋಂಟದಾರ್ಯ ವಿದ್ಯಾಪೀಠ ಸಂಸ್ಥೆಯ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಗೆ ಅನಿರೀಕ್ಷಿತ ಭೇಟಿ ನೀಡಿ ಮಕ್ಕಳ ಶೈಕ್ಷಣಿಕ ಗುಣಮಟ್ಟ ಪರಿಶೀಲಿಸಿ ಅವರು ಮಾತನಾಡಿದರು.
ಎಸ್ಸೆಸ್ಸೆಲ್ಸಿ ಮಕ್ಕಳ ಜೊತೆಗೆ ಪರೀಕ್ಷಾ ಪೂರ್ವ ತಯಾರಿ ಹಾಗೂ ಪಠ್ಯ ವಿಷಯ ಕುರಿತು ಸಂವಾದ ನಡೆಸಿದ ಅವರು, ಪರೀಕ್ಷೆಗೆ ಸಿದ್ದರಾಗಲು ಈಗಿನಿಂದಲೇ ಸಕಲ ಓದಾಭ್ಯಾಸದ ತಯಾರಿ ಮಾಡಿಕೊಳ್ಳಬೇಕು. ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲು ಸನ್ನದ್ಧರಾಗಬೇಕು ಎಂದು ಮಕ್ಕಳಿಗೆ ಸಲಹೆ ನೀಡಿದರು.
ಮಕ್ಕಳ ಕಲಿಕಾ ಹಾಗೂ ಫಲಿತಾಂಶ ಪ್ರಗತಿಗೆ ಶಿಕ್ಷಕರು ಒತ್ತು ನೀಡಬೇಕು. ಈ ಬಾರಿ ಗ್ರೇಡ್‌ ಅಂಕಗಳಿಲ್ಲ.ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆಗಳಾಗಿವೆ. ಕಟ್ಟುನಿಟ್ಟಾಗಿ ಪರೀಕ್ಷೆಗಳು ಜರುಗಲಿವೆ. ಇದನ್ನು ಮಕ್ಕಳು ಹಾಗೂ ಶಿಕ್ಷಕರು ಸೂಕ್ಷ್ಮತೆಯಿಂದ ಗಮನಿಸಿ ತಮ್ಮ ಜವಾಬ್ದಾರಿಗಳನ್ನು ನಿಭಾಯಿಸಲು ಮುಂದಾಗಬೇಕು ಎಂದರು.
ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ಕ್ರಿಯಾಯೋಜನೆ ರೂಪಿಸಿ ಅನುಷ್ಠಾನಕ್ಕೆ ತರಲು ಕಡ್ಡಾಯವಾಗಿ ಯತ್ನಿಸಿ. ಪರೀಕ್ಷಾ ಫಲಿತಾಂಶವೇ ನಮಗೆಲ್ಲ ಮುಖ್ಯ ಮಾನದಂಡ. ಇದನ್ನು ಮನಗಂಡು ಅಚ್ಚುಕಟ್ಟಾಗಿ ಸಮನ್ವಯತೆಯಿಂದ ಕಾಯಕ ಗೈದು ಪರೀಕ್ಷೆಯಲ್ಲಿ ಮಕ್ಕಳು ಉತ್ತಮ ಸಾಧನೆ ಮಾಡಲು ಪ್ರೇರೇಪಿಸಿ ಎಂದು ಶಿಕ್ಷಕರಿಗೆ ಸಲಹೆ ನೀಡಿದರು.
ನಿತ್ಯ ಬೆಳಿಗಿನ ಜಾವ ಎಸ್ಸೆಸ್ಸೆಲ್ಸಿ ಮಕ್ಕಳ ಪೋಷಕರಿಗೆ ಪೋನ ಕರೆ ಮಾಡಲಾಗುತ್ತಿದೆ. ಮಕ್ಕಳನ್ನು ಎಬ್ಬಿಸಿ ಅಭ್ಯಾಸದಲ್ಲಿ ನಿರತರಾಗುವಂತೆ ಮುತುವರ್ಜಿ ವಹಿಸಬೇಕೆಂದು ಕೋರಲಾಗುತ್ತಿದೆ. ತಮ್ಮ ಶಿಕ್ಷಕರ ಕರೆಗೆ ಸ್ಪಂದಿಸಿ ಮಕ್ಕಳನ್ನು ಎಬ್ಬಿಸಿ ಅಭ್ಯಾಸ ಪ್ರಕ್ರಿಯೆಯಲ್ಲಿ ಪಾಲಕರು ಸಹಕಾರ ನೀಡುತ್ತಿದ್ದಾರೆ.ಶಾಲೆಯಲ್ಲಿ ಗುಂಪು ಅಭ್ಯಾಸ, ರಸಪ್ರಶ್ನೆ, ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಪಾಠ ಪ್ರವಚನ ನಡೆಸಲಾಗುತ್ತಿದೆ.ಮಕ್ಕಳ ಅಭ್ಯುದಯಕ್ಕೆ ಇಲ್ಲಿ ಕಾಳಜಿ ವಹಿಸಲಾಗಿದೆ.ಫಲಿತಾಂಶ ವೃದ್ಧಿಗೆ ಶ್ರಮಿಸಲಾಗುತ್ತಿದೆ ಎಂದು ಪ್ರಭಾರ ಮುಖ್ಯೋಪಾಧ್ಯಾಯ ಬಸವರಾಜ ಜಾಲೋಜಿ ಈ ವೇಳೆ ವಿಷಯ ಪರಿವೀಕ್ಷಕರಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ವಿಷಯ ಪರಿವೀಕ್ಷಕ ಎಂ.ಎಸ್.ನ್ಯಾಮಗೌಡ ಅವರನ್ನು ಶಾಲೆ, ಸಂಸ್ಥೆಯ ಪರವಾಗಿ ಮುಖ್ಯ ಶಿಕ್ಷಕ ಬಸವರಾಜ ಜಾಲೋಜಿ ಹಾಗೂ ಸಿಬ್ಬಂದಿಗಳು ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು.
ವಿಶ್ರಾಂತ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕ ಬಸವರಾಜ ಅನಂತಪೂರ, ಗುಲಾಬಚಂದ ಜಾಧವ, ಈರಪ್ಪ ದೇಸಾಯಿ, ಲೋಹಿತ ಮಿಜಿ೯, ಶ್ರೀಶೈಲ ಹುಣಶಿಕಟ್ಟಿ, ಸಹನಾ ಕಲ್ಯಾಣಿ (ಹತ್ತಳ್ಳಿ), ಪ್ರಮೀಳಾ ತೇಲಸಂಗ ಇತರರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.