ಉದಯರಶ್ಮಿ ದಿನಪತ್ರಿಕೆ
ಸಿಂದಗಿ: “ಎಸ್ಟ್ಡಿ ಆನ್ ಟೊಪೋಲಾಜಿಕಲ್ ಇಂಡಸಿಸ್ ಓವರ್ ಗ್ರಾಫ್ಸ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯದಲ್ಲಿ ಜರುಗಿದ ಘಟಿಕೋತ್ಸವದಲ್ಲಿ ಸಿಂದಗಿಯ ಜಿ.ಪಿ.ಪೋರವಾಲ್ ಕಲಾ, ವಾಣಿಜ್ಯ ಹಾಗೂ ವ್ಹಿ.ವ್ಹಿ.ಸಾಲಿಮಠ ವಿಜ್ಞಾನ ಪದವಿ ಮಹಾವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ರಂಜನಾ ಮಹಾದೇವ ಸಂಕಪಾಲ್ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ ಮಾಡಿದೆ.
ರಂಜನಾ ಮಹಾದೇವ ಸಂಕಪಾಲ್ ಅವರು ರಾಣಿಚೆನ್ನಮ್ಮ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ಅಧ್ಯಯನ ವಿಭಾಗದ ವಿಶ್ವನಾಥ ಅವಟಿ ಮಾರ್ಗದರ್ಶನದಲ್ಲಿ ಅವರ ಸಂಶೋಧನೆ ಕೈಗೊಂಡಿದ್ದರು.
ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಆಡಳಿತ ಮಂಡಳಿ ನಿರ್ದೇಶಕರು, ಪ್ರಾಚಾರ್ಯ ಡಿ.ಎಂ.ಪಾಟೀಲ ಸೇರಿದಂತೆ ಮಹಾವಿದ್ಯಾಲಯದ ಸಿಬ್ಬಂದಿ ವರ್ಗದವರು ಅಭಿನಂಧಿಸಿದ್ದಾರೆ.

