Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಪೌಷ್ಠಿಕತೆಯ ಮಕ್ಕಳಿಗೆ ಸೂಕ್ತ ಚಿಕಿತ್ಸೆಗೆ ಕ್ರಮ ವಹಿಸಿ
(ರಾಜ್ಯ ) ಜಿಲ್ಲೆ

ಅಪೌಷ್ಠಿಕತೆಯ ಮಕ್ಕಳಿಗೆ ಸೂಕ್ತ ಚಿಕಿತ್ಸೆಗೆ ಕ್ರಮ ವಹಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಷ್ಟ್ರೀಯ ಬಾಲ ಸ್ವಾಸ್ಥ್ಯ-ಕಿಶೋರ ಸ್ವಾಸ್ಥ್ಯ-ಪ್ಲೋರೋಸಿಸ್ ತಡೆ-ನಿಯಂತ್ರಣ ಕಾರ್ಯಕ್ರಮ ಯಶಸ್ವಿ ಅನುಷ್ಠಾನಕ್ಕೆ ಸಿಇಓ ರಿಷಿ ಆನಂದ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಂಬಂಧಿಸಿದ ಇಲಾಖೆಗಳು ಸಮನ್ವಯತೆ ಸಾಧಿಸಿಕೊಂಡು ರಾಷ್ಟ್ರೀಯ ಬಾಲ ಸ್ವಾಸ್ಥ್ಯ, ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಹಾಗೂ ರಾಷ್ಟ್ರೀಯ ಪ್ಲೋರೋಸಿಸ್ ತಡೆ ಮತ್ತು ನಿಯಂತ್ರಣ ಕಾರ್ಯಕ್ರಮ ಯಶಸ್ವಿಯಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಸೂಚನೆ ನೀಡಿದರು.
ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಸೇರಿದಂತೆ ರಾಷ್ಟ್ರೀಯ ಬಾಲ ಸ್ವಾಸ್ಥ್ಯ, ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಹಾಗೂ ರಾಷ್ಟ್ರೀಯ ಪ್ಲೋರೋಸಿಸ್ ತಡೆ ಮತ್ತು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕಂಡು ಬಂದಿರುವ ಅಪೌಷ್ಠಿಕ ಮಕ್ಕಳ ಮಾಹಿತಿಯನ್ನು ಕ್ರೋಢೀಕರಿಸಿ ಅಪೌಷ್ಠಿಕತೆ ಹೊಂದಿರುವ ಮಕ್ಕಳಿಗೆ ಅವಶ್ಯವಿರುವ ಸೂಕ್ತ ಚಿಕಿತ್ಸೆಯನ್ನು ಕೊಡಿಸಲು ಕ್ರಮ ವಹಿಸುವಂತೆ ಸೂಚಿಸಿದ ಅವರು, ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯಲ್ಲಿರುವ ವಿವಿಧ ಇಲಾಖೆಯ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಹೇಳಿದರು.
ರಾಷ್ಟ್ರೀಯ ಪ್ಲೋರೋಸಿಸ್ ತಡೆ ಹಾಗೂ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಫ್ಲೋರೈಡ್ ಅಂಶ ಹೆಚ್ಚು ಇರುವ ಗ್ರಾಮಗಳಲ್ಲಿ ಶುದ್ದ ಕುಡಿಯುವ ನೀರಿನ ಘಟಕಗಳ ಪ್ರಸ್ತುತ ಕಾರ್ಯ ನಿರ್ವಹಣಾ ವರದಿ ಸಲ್ಲಿಸಬೇಕು ಹಾಗೂ ಶುದ್ದ ಕುಡಿಯುವ ನೀರಿನ ಘಟಕ ನಿರ್ಮಾಣದ ಅವಶ್ಯಕತೆ ಇರುವ ಗ್ರಾಮಗಳಲ್ಲಿ ಶುದ್ದ ಕುಡಿಯುವ ನೀರಿನ ಘಟಕಗಳನ್ನು ತುರ್ತಾಗಿ ಸ್ಥಾಪಿಸಲು ಕ್ರಿಯಾಯೋಜನೆಯನ್ನು ಸಲ್ಲಿಸುವಂತೆ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿ ಡಾ. ಕೆ.ಡಿ ಗುಂಡಬಾವಡಿ, ವಿವಿಧ ಕಾರ್ಯಕ್ರಮಗಳ ಕುರಿತಾದ ಪ್ರಗತಿಯನ್ನು ಹಾಗೂ ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನಕ್ಕಾಗಿ ವಿವಿಧ ಇಲಾಖೆಗಳ ಜವಾಬ್ದಾರಿಗಳ ಕುರಿತು ಸಭೆಯಲ್ಲಿ ವಿವರಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಸಂಪತ್ ಗುಣಾರಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ. ಕೆ. ಚವ್ಹಾಣ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೋಲಾರ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ ಸೇರಿದಂತೆ ಜಿಲ್ಲಾ ಮಟ್ಟದ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

“ಜಿಲ್ಲೆಯಲ್ಲಿನ ಶಾಲಾ ಮತ್ತು ಅಂಗನವಾಡಿ ಕೇಂದ್ರಗಳಲ್ಲಿನ ಮಕ್ಕಳು ಆರೋಗ್ಯ ತಪಾಸಣೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಜಿಲ್ಲೆಯ ಪ್ರತಿ ಶಾಲೆಗಳಲ್ಲಿ ಆರೋಗ್ಯ ತಪಾಸಣೆಯ ದಾಖಲಾತಿ ವಹಿ ನಿರ್ವಹಿಸಬೇಕು. ವಿವಿಧ ಇಲಾಖೆಗಳಡಿ ಕಾರ್ಯನಿರ್ವಹಿಸುತ್ತಿರುವ ವಸತಿ ನಿಲಯಗಳು ಹಾಗೂ ಶಿಶುಪಾಲನಾ ಕೇಂದ್ರಗಳಲ್ಲಿರುವ ಮಕ್ಕಳ ನಿಯಮಿತವಾಗಿ ಆರೋಗ್ಯ ತಪಾಸಣೆ ಕೈಗೊಳ್ಳಬೇಕು. ಮಕ್ಕಳಲ್ಲಿ ಕಂಡುಬರುವ ಅನೇಮಿಯಾ ಕುರಿತು ಚರ್ಚಿಸಿ, ಪ್ರತಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಅನಿಮಿಯಾ ಕುರಿತು ಮಾಹಿತಿ ನೀಡಿ, ಅದಕ್ಕೆ ಪೂರಕವಾಗಿ ಪ್ರತಿ ಸೋಮವಾರದಂದು ಕಬ್ಬಿಣಾಂಶದ ಮಾತ್ರೆಯನ್ನು ಎಲ್ಲ ಮಕ್ಕಳು ಸೇವನೆ ಮಾಡಲು ಆಯಾ ಶಾಲಾ ದೈಹಿಕ ಶಿಕ್ಷಕರು ಹಾಗೂ ಮುಖ್ಯಗುರುಗಳು ಪ್ರೇರೇಪಿಸಬೇಕು.”

– ರಿಷಿ ಆನಂದ
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ವಿಜಯಪುರ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.