Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಟ್ಟುನಿಟ್ಟಾಗಿ ರಸ್ತೆ ನಿಯಮಗಳ ಪಾಲನೆಗೆ ಅರಿವು ಮೂಡಿಸಿ
(ರಾಜ್ಯ ) ಜಿಲ್ಲೆ

ಕಟ್ಟುನಿಟ್ಟಾಗಿ ರಸ್ತೆ ನಿಯಮಗಳ ಪಾಲನೆಗೆ ಅರಿವು ಮೂಡಿಸಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಖಡಕ್ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ವಿಧಾನಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳು ಕಡ್ಡಾಯವಾಗಿ ರಸ್ತೆ ನಿಯಮಗಳ ಪಾಲನೆ ಮಾಡುವಂತೆ ಸೂಕ್ತ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಪಘಾತ ತಡೆಯುವ ಹಾಗೂ ಸುಗಮ ಸಂಚಾರ ವ್ಯವಸ್ಥೆಯನ್ನು ಕಾಪಾಡಿಕೊಳ್ಳುವಲ್ಲಿ ಜಾಗೃತಿ ಮೂಡಿಸಬೇಕು.
ಅನಗತ್ಯವಾದ ರೋಡ್ ಬ್ರೆಕ್ ಗಳನ್ನು ತೆಗೆಯಬೇಕು. ರಸ್ತೆ ತಿರುವುಗಳಲ್ಲಿ ಅಗತ್ಯ ಮಾಹಿತಿ ಹಾಗೂ ಸೂಚನಾ ಫಲಕ ಅಳವಡಿಸಬೇಕು. ಪದೇ-ಪದೇ ಅಪಘಾತಗಳು ಸಂಭವಿಸುವ ಪ್ರದೇಶ-ಸ್ಥಳಗಳಲ್ಲಿ ಎಚ್ಚರಿಕೆ ಮಾಹಿತಿ ವಿವರದ ಫಲಕ ಹಾಕಬೇಕು. ಮತ್ತು ಅಲ್ಲಿ ಅಪಘಾತಗಳು ಸಂಭವಿಸದಂತ ಪರಿಹಾರೋಪಾಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.
ನಗರದಲ್ಲಿ ಇಟಗಿ ಪೆಟ್ರೋಲ್ ಪಂಪ್‌ದಿಂದ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದವರಗೆ ಸುಗಮ ಸಂಚಾರಕ್ಕಾಗಿ ಅಗತ್ಯ ಕಾರ್ಯ ಕೈಗೊಂಡು ಅನೂಕೂಲ ಕಲ್ಪಿಸಬೇಕು. ನಗರದಲ್ಲಿ ಸಂಚಾರದ ದಟ್ಟನೆ ಉಂಟಾಗದಂತೆ ನೋಡಿಕೊಳ್ಳಬೇಕು ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರ್ವಿಸ್ ರಸ್ತೆಗಳನ್ನು ಸಮರ್ಪಕವಾಗಿ ನಿಯಮಾನುಸಾರವಾಗಿ ನಿರ್ಮಿಸಬೇಕು. ರಸ್ತೆಯ ಮಧ್ಯದಲ್ಲಿ ಡ್ರೆöÊನೆಜ್‌ಗಳಿದ್ದರೆ ಮಾಹಿತಿ ಫಲಕದ ಜೊತೆಗೆ ರಸ್ತೆ ನಿರ್ವಹಣೆ ಮಾಡಬೇಕು. ಹೊಸದಾಗಿ ನಿರ್ಮಾಣವಾಗಿರುವ ಸಿಸಿ ರಸ್ತೆಗಳಲ್ಲಿ ಸಂಚಾರಕ್ಕೆ ತೊಂದರೆಯಾಗುವ ವಸ್ತುಗಳು ತೆರವುಗೊಳಿಸಬೇಕು ಎಂದು ಸೂಚಿಸಿದರು.
ಈಗಾಗಲೇ ಕಬ್ಬಿನ ಕಟಾವು ನಡೆಯುತ್ತಿರುವದರಿಂದ ಕಬ್ಬು ಸಾಗಿಸುವ ವಾಹನಗಳು ಹಾಗೂ ತೊಗರಿ ರಾಶಿ ಮಶಿನ್ ಗಳಿಗೆ ರೇಡಿಯಂ ಸ್ಟಿಕರ್ ಅಂಟಿಸಬೇಕು. ರಸ್ತೆಯಲ್ಲಿ ತುರ್ತು ವೈದ್ಯಕೀಯ ಚಿಕಿತ್ಸೆ ಹಾಗೂ ಆಸ್ಪತ್ರೆಗಳ ಸಹಾಯವಾಣಿ ಫಲಕ ಅಳವಡಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡಿ, ಇಂಡಿ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ, ಮಹಾನಗರ ಪಾಲಿಕೆ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ, ಪೀಟರ್ ಅಲೆಕ್ಸಾಂಡರ್, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.