Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಧಾನಸಭೆಯಲ್ಲಿ ಎಸ್‌ಎಂ ಕೃಷ್ಣಗೆ ಶ್ರದ್ಧಾಂಜಲಿ
(ರಾಜ್ಯ ) ಜಿಲ್ಲೆ

ವಿಧಾನಸಭೆಯಲ್ಲಿ ಎಸ್‌ಎಂ ಕೃಷ್ಣಗೆ ಶ್ರದ್ಧಾಂಜಲಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಜ್ಜನ ರಾಜಕಾರಣಿ’ ಎಂದು ಪಕ್ಷಾತೀತವಾಗಿ ಶ್ಲಾಘಿಸಿದ ನಾಯಕರು

ಬೆಳಗಾವಿ: ಕರ್ನಾಟಕ ವಿಧಾನಸಭೆ ಮಂಗಳವಾರ ನಿಧನರಾದ ಮಾಜಿ ಮುಖ್ಯಮಂತ್ರಿ ಮತ್ತು ವಿದೇಶಾಂಗ ಸಚಿವ ಎಸ್‌ಎಂ ಕೃಷ್ಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದು, ಅಗಲಿದ ನಾಯಕ “ಸಜ್ಜನ ರಾಜಕಾರಣಿ”, ಬೆಂಗಳೂರನ್ನು ಐಟಿ ಹಬ್ ಮಾಡುವಲ್ಲಿ ಅವರ ಕೊಡುಗೆ ಅಪಾರ ಎಂದು ಎಂದು ನಾಯಕರು ಶ್ಲಾಘಿಸಿದರು.
ಕೃಷ್ಣ ಅವರ ಡ್ರೆಸ್ಸಿಂಗ್ ಸೆನ್ಸ್, ಭಾಷೆಯ ಮೇಲಿನ ಹಿಡಿತ, ಟೆನಿಸ್ ಆಟದ ಮೇಲಿನ ಪ್ರೀತಿ ಬಗ್ಗೆಯೂ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಮಂಗಳವಾರ ಬೆಳಗಿನ ಜಾವ ತಮ್ಮ ನಿವಾಸದಲ್ಲಿ ನಿಧನರಾದ 92 ವರ್ಷ ಹಿರಿಯ ರಾಜಕಾರಣಿ ಎಸ್ ಎಂ ಕೃಷ್ಣ ಅವರು ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು
ಸದನ ಆರಂಭವಾಗುದ್ದಂತೆ, ಸ್ಪೀಕರ್ ಯು ಟಿ ಖಾದರ್ ಅವರು ಸಂತಾಪ ಸೂಚಿಸಿ ಕೃಷ್ಣ ಅವರನ್ನು ಧೀಮಂತ ವ್ಯಕ್ತಿ ಎಂದು ಬಣ್ಣಿಸಿದರು.
ಕೃಷ್ಣ ಅವರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ, ವಿಧಾನಸಭೆ, ವಿಧಾನ ಪರಿಷತ್ತು, ಲೋಕಸಭೆ ಮತ್ತು ರಾಜ್ಯಸಭೆ – ಎಲ್ಲಾ ನಾಲ್ಕು ಸದನಗಳ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ ಮತ್ತು ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಸಕಾರಾತ್ಮಕ ಚಿಂತನೆಯಲ್ಲಿ ತೊಡಗಿಸಿಕೊಂಡಿದ್ದರು ಎಂದರು.
“ಕೃಷ್ಣ ಅವರಿಗೆ ಯಾರ ಮೇಲೂ ದ್ವೇಷ ಇರಲಿಲ್ಲ ಮತ್ತು ಅವರು ನಿರ್ವಹಿಸಿದ ಕಚೇರಿಗೆ ಯಾವಾಗಲೂ ಘನತೆಯನ್ನು ತರುತ್ತಿದ್ದರು. ಅವರ ಜೀವನ ಯುವ ರಾಜಕಾರಣಿಗಳಿಗೆ ಒಂದು ಸಂದೇಶವಾಗಿದೆ. ನಮಗೆ ಉತ್ತಮ ರಾಜಕಾರಣಿಗಳು ಸಿಗಬಹುದು, ಆದರೆ ಅವರಂತಹ ಅತ್ಯುತ್ತಮ ರಾಜಕಾರಣಿ ಸಿಗುವುದು ಕಷ್ಟ” ಎಂದು ಸ್ಪೀಕರ್ ಹೇಳಿದರು.
ಕೃಷ್ಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೃಷ್ಣ ಅವರು ಸಜ್ಜನ ರಾಜಕಾರಣಿ ಮತ್ತು ದೂರದೃಷ್ಟಿಯುಳ್ಳವರು ಎಂದು ಹೇಳಿದರು.
ಅಗಲಿದ ನಾಯಕನ ಸುದೀರ್ಘ ರಾಜಕೀಯ ಪಯಣವನ್ನು ಉಲ್ಲೇಖಿಸಿದ ಸಿಎಂ, ಕಾಲೇಜು ದಿನಗಳಲ್ಲಿ ಬಿಎಸ್ಸಿ ಓದುತ್ತಿದ್ದಾಗ ನಾನು ಕೃಷ್ಣ ಅವರ ಅಭಿಮಾನಿಯಾಗಿದ್ದೆ ಮತ್ತು 1968ರ ಲೋಕಸಭೆ ಉಪಚುನಾವಣೆಯಲ್ಲಿ ಪ್ರಜಾ ಸೋಷಿಯಲಿಸ್ಟ್ ಪಕ್ಷದಿಂದ ಸ್ಪರ್ಧಿಸಿದ್ದಾಗ ಅವರನ್ನು ಬೆಂಬಲಿಸಿದ್ದೆ. ಕೃಷ್ಣ ಅವರು ತಮ್ಮನ್ನು ಮನಃಪೂರ್ವಕವಾಗಿ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡಿದ್ದನ್ನು ಸ್ಮರಿಸಿದ ಸಿದ್ದರಾಮಯ್ಯ, ಅವರು ಉತ್ತಮ ವಾಗ್ಮಿ ಮತ್ತು ಉತ್ತಮ ಸಂಸದೀಯ ಪಟು. ಅವರು ಎಂದಿಗೂ ಯಾವುದೇ ಸೇಡಿನ ರಾಜಕೀಯದಲ್ಲಿ ತೊಡಗಿಲ್ಲ. ಅವರು ಅಪರೂಪದ ವ್ಯಕ್ತಿತ್ವದ ರಾಜಕಾರಣಿ ಎಂದು ಸಿಎಂ ಸ್ಮರಿಸಿದರು.

” ಬೆಂಗಳೂರು ನಗರ ಸಂಸ್ಥಾಪಕ ಕೆಂಪೇಗೌಡರನ್ನು ಹೇಗೆ ಮರೆಯಲು ಸಾಧ್ಯವಿಲ್ಲವೋ ಹಾಗೆ ಕೃಷ್ಣರನ್ನು ಮರೆಯಲು ಸಾಧ್ಯವಿಲ್ಲ. ಅವರು(ಕೃಷ್ಣ) ಬೆಂಗಳೂರಿಗೆ ಘನತೆ ಮತ್ತು ಹೆಮ್ಮೆಯನ್ನು ತಂದು ಕೊಟ್ಟರು. ಅವರು ಒಬ್ಬ ನಿಷ್ಕಳಂಕ ರಾಜಕಾರಣಿಯಾಗಿದ್ದು, ಭಾಷೆಯ ಮೇಲೆ ಹಿಡಿತ ಹೊಂದಿದ್ದರು. ಬೆಂಗಳೂರಿಗೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಮೆಟ್ರೋ ರೈಲು ತಂದುಕೊಟ್ಟ ಕೀರ್ತಿ ಕೃಷ್ಣಾ ಅವರಿಗೆ ಸಲ್ಲುತ್ತದೆ”.

– ಆರ್.ಅಶೋಕ್
ಪ್ರತಿಪಕ್ಷದ ನಾಯಕರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.