ಸಿಂದಗಿ: ಪ್ರಜಾಪ್ರಭುತ್ವದ ಆಶಯದಂತೆ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಸ್ವೀಪ್ ಸಮಿತಿ ಅಧ್ಯಕ್ಷ, ತಾಪಂ ಇಓ ಬಾಬು ರಾಠೋಡ ಹೇಳಿದರು.
ಗುರುವಾರ ನಗರದಲ್ಲಿ ತಾಲೂಕಾಡಳಿತ, ತಾಲೂಕು ಸ್ವೀಪ್ ಸಮಿತಿ, ತಾಲೂಕು ಪಂಚಾಯತ್, ಪುರಸಭೆ ಮತ್ತು ಕೃಷಿ ಇಲಾಖೆಯ ಸಹಯೋಗದೊಂದಿಗೆ ಮೇ.೧೦ ರಂದು ಜರುಗುವ ಸಾರ್ವತ್ರಿಕ ವಿಧಾನ ಸಭಾ ಚುನಾವಣೆಯ ನಿಮಿತ್ಯವಾಗಿ ಸಾರ್ವಜನಿಕರಲ್ಲಿ ಮತದಾನದ ಜಾಗೃತಿ ಮೂಡಿಸಲು ಎತ್ತಿನ ಬಂಡಿಯ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮತದಾನ ಹಕ್ಕು ನಮ್ಮೆಲ್ಲರ ಹಕ್ಕು. ಆದ್ದರಿಂದ ಎಲ್ಲರೂ ತಪ್ಪದೇ ಜವಾಬ್ದಾರಿಯಿಂದ ಮತ ಚಲಾಯಿಸಿ ಮತ್ತು ಬಲಿಷ್ಠ ಪ್ರಜಾಪ್ರಭುತ್ವ ನಿರ್ಮಿಸಿ ಎಂದರು.
ಈ ಜಾಥಾ ಕಾರ್ಯಕ್ರಮವು ತಹಸೀಲ್ದಾರ್ ಕಚೇರಿಯಿಂದ ಆರಂಭಗೊAಡು ಬಸವೇಶ್ವರ ವೃತ್ತ, ಅಂಬಿಗರ ಚೌಡಯ್ಯ ವೃತ್ತ, ಡಾ.ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಮಹಾತ್ಮ ಗಾಂಧಿ ವೃತ್ತದವರೆಗೆ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮ ಸಾಗಿಬಂದಿತು.
ಇದೇ ಸಂದರ್ಭದಲ್ಲಿ ಆಲಮೇಲ ತಹಶೀಲ್ದಾರ್ ಸುರೇಶ ಚಾವಲರ, ತಾಲೂಕು ಜಂಟಿ ನಿರ್ದೇಶಕ ಪ್ರಕಾಶ್ ಸಿಂಗೆಗೋಳ, ಸಹಾಯಕ ನಿರ್ದೇಶಕ ನಿತ್ಯಾನಂದ ಯಲಗೋಡ, ಪುರಸಭೆ ಮುಖ್ಯಾಧಿಕಾರಿ ಮೋಹನ ಜಾಧವ, ಜೆಇ ಅಜರ್ ನಾಟೀಕಾರ, ಐಇಸಿ ಸಂಯೋಜಕ ಭೀಮರಾಯ ಚೌಧರಿ ಸೇರಿದಂತೆ ತಾಲೂಕಿನ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Related Posts
Add A Comment