ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ೨ಎ ಮೀಸಲಾತಿಗೆ ಸಂಬಂಧಿಸಿದ ಹೋರಾಟದ ವೇಳೆ ನಡೆದ ಲಾಠಿ ಚಾರ್ಜ್ ಗೆ ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೆ ಈ ಭೂಮಿಯ ಮೇಲೆ ಸ್ವತಂತ್ರವಾಗಿ ಬದುಕುವ ಹಾಗೂ ಜೀವಿಸುವ ಹಕ್ಕಿದೆ. ಆದರೆ ನಮ್ಮ ಹಕ್ಕುಗಳು ನಮಗೆ ಸಿಕ್ಕಿಲ್ಲ ಅಂದಾಗ ಹೋರಾಟ ಮಾಡಿ ಪಡೆಯುವುದು ಅವರ ಕರ್ತವ್ಯ ಕೂಡ ಹೌದು. ಆದರೆ ನಮ್ಮ ದೇಶದ ಕಾನೂನು ಪ್ರತಿಯೊಬ್ಬ ವ್ಯಕ್ತಿಗೂ ಪ್ರತಿಯೊಂದು ಸಮಾಜಕ್ಕೂ ಸ್ವತಂತ್ರವಾಗಿ ಬದುಕುವ ಸ್ವಾತಂತ್ರ‍್ಯ ಇರುತ್ತದೆ ಆದರೆ ಈ ಸರಕಾರವು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದಂತಾಗಿದೆ ಅದರಲ್ಲೂ ವಿಶೇಷವಾಗಿ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ ಮಾಡಿರುವುದು ಖಂಡನಿಯ. ಜೊತೆಗೆ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಬಂಧನ ಮಾಡಿರುವುದು ಖಂಡನಾರ್ಹ ಮತ್ತು ಮಹಾ ಅಪರಾಧ ಮಾಡಿದಂತಾಗಿದೆ. ಕೂಡಲೇ ರಾಜ್ಯದ ಪಂಚಮಸಾಲಿ ಸಮಾಜಕ್ಕೆ ಕ್ಷಮೆ ಕೇಳಿ ಅವರಿಗೆ ನ್ಯಾಯ ಕೊಡಬೇಕೆಂದು ಆಗ್ರಪಡಿಸಿದ್ದಾರೆ.

