ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಗಾಂಧಿ ಅಧ್ಯಯನ ಕೇಂದ್ರ ಮತ್ತು ಆಗಸ್ಟ್ ಕ್ರಾಂತಿ ಟ್ರಸ್ಟ್ ಸಹಯೋಗದಲ್ಲಿ ‘ಮಹಾತ್ಮಾ ಗಾಂಧಿ ಮತ್ತು ಭಾರತೀಯ ಮಹಿಳೆ’ ಎಂಬ ದತ್ತಿ ಉಪನ್ಯಾಸ ಕಾರ್ಯಕ್ರಮ ಇದೇ ದಿ.೧೩ ರಂದು ಮಧ್ಯಾಹ್ನ ೧೨.೦೦ ಗಂಟೆಗೆ ವಿವಿಯ ಡಾ.ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ಜರುಗಲಿದೆ.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಬೆಳಗಾವಿಯ ಜಿ.ಎಸ್.ಎಸ್ ಕಾಲೇಜಿನ ಸೇವಾನಿವೃತ್ತ ಪ್ರಾಂಶುಪಾಲ ಆನಂದ ಕೃಷ್ಣಾ ಮೆಣಸೆ ಭಾಗವಹಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ ತುಳಸಿಮಾಲ ವಹಿಸಲಿದ್ದಾರೆ. ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ, ನಗರದ ಆಗಸ್ಟ್ ಕ್ರಾಂತಿ ಟ್ರಸ್ಟ್ ಸದಸ್ಯೆ ರೇವತಿ ಕಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ನಗರದ ಗಾಂಧಿ ಭವನ ನಿರ್ವಹಣಾ ಸಮಿತಿ ಸದಸ್ಯ ಹಾಗೂ ಖಾದಿ ಗ್ರಾಮೋದ್ಯೋಗ ಅಧ್ಯಕ್ಷ ಬಾಪುಗೌಡ ಪಾಟೀಲ್, ಬೆಂಗಳೂರಿನ ಗಾಂಧಿವಾದಿ ಅಪ್ಪಾಸಾಹೇಬ ಯರನಾಳ ಉಪಸ್ಥಿತರಿರಲಿದ್ದಾರೆ ಎಂದು ಗಾಂಧಿ ಅಧ್ಯಯನ ಕೇಂದ್ರದ ಸಂಯೋಜಕ ಡಾ. ಅಮರನಾಥ ಪ್ರಜಾಪತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

