ಗಾಂಧಿ ಚಿಂತನೆಗಳು ಮತ್ತು ಪ್ರಸ್ತುತ ಭಾರತ ಕುರಿತು ವಿದ್ಯಾರ್ಥಿಗಳೊಂದಿಗೆ ಚರ್ಚೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಡಾ.ಫ.ಗು.ಹಳಕಟ್ಟಿ ಸ್ನಾತಕೋತ್ತರ ಕೇಂದ್ರ ವಚನಸಂಗಮ ತೊರವಿ, ವಿಜಯಪುರ ಇವರ ಸಂಯುಕ್ತಾಯಶ್ರದಲ್ಲಿ ಗಾಂಧೀಜಿಯವರ ಬೆಳಗಾವಿ ಭೇಟಿಯ ಶತಮಾನೋತ್ಸವ ವರ್ಷಾಚರಣೆ ಅಂಗವಾಗಿ ಗಾಂಧಿ ವಿಚಾರಧಾರೆಗಳ ಕುರಿತು ಡಿ.13 ರಂದು ಸ್ನಾತಕೋತ್ತರ ಕೇಂದ್ರದ ಸಭಾಂಗಣದಲ್ಲಿ ವಿದ್ಯಾರ್ಥಿಗಳೊಂದಿಗೆ ಗುಂಪು ಚರ್ಚೆ ಹಮ್ಮಿಕೊಳ್ಳಲಾಗಿದೆ.
ಅಂದು ಮಧ್ಯಾಹ್ನ 3 ಗಂಟೆಯುವ ಕಾರ್ಯಕ್ರಮಕ್ಕೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನಿರ್ದೇಶಕರಾದ ಪ್ರೊ: ಎಸ್.ಎಂ.ಗಂಗಾಧರಯ್ಯ ಅಧ್ಯಕ್ಷತೆ ವಹಿಸಲಿದಾರೆ. ಗಾಂಧಿವಾದಿಗಳಾದ ಆನಂದ ಕೃಷ್ಣಾ ಮೆಣಸೆ ಸಂಪನ್ಮೂಲ ವ್ಯಕ್ತಿಗಳಾಗಿ ಹಾಗೂ ಸಿಂಡಿಕೇಟ್ ಸದಸ್ಯರಾದ ರಫೀಕ್ ಭಂಡಾರಿ, ಗಾಂಧಿವಾಧಿ ಅಪ್ಪಾಸಾಹೇಬ ಯರನಾಳ ಅವರು ಮುಖ್ಯ ಅಥಿತಿಗಳಾಗಿ ಭಾಗವಹಿಸಲಿದ್ದಾರೆ.
