Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಂಚಮಸಾಲಿಗರ ಮೇಲಿನ ಲಾಠಿ ಪ್ರಹಾರ ಖಂಡಿಸಿ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಪಂಚಮಸಾಲಿಗರ ಮೇಲಿನ ಲಾಠಿ ಪ್ರಹಾರ ಖಂಡಿಸಿ ಪ್ರತಿಭಟನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜದ ಪ್ರವರ್ಗ “೨ಅ ಮೀಸಲಾತಿಗೆ” ಆಗ್ರಹಿಸಿ ನಡೆಯುತ್ತಿರುವ ಹೋರಾಟದಲ್ಲಿ ಭಾಗವಹಿಸಿದ್ದ ಪಂಚಮಸಾಲಿ ಸಮಾಜ ಬಾಂಧವರ ಮೇಲೆ ಲಾಠಿ ಪ್ರಹಾರ ನಡೆಸಿದ್ದನ್ನು ಖಂಡಿಸಿ ಲಿಂಗಾಯತ ಪಂಚಮಸಾಲಿ ಸಮಾಜ ಬಾಂಧವರು ಗುರುವಾರ ವಿವಿಧೆಡೆ ಟೈರ್‌ಗೆ ಬೆಂಕಿಹಚ್ಚಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.
ಇಂಡಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಸಮಾಜ ಬಾಂಧವರು ಸಿದ್ದರಾಮಯ್ಯನವರ ಭಾವಚಿತ್ರವನ್ನು ಸುಡುವುದರ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಸಮಾಧಾನಕರವಾಗಿ ನಡೆಯುತ್ತಿದ್ದ ಹೋರಾಟಕ್ಕೆ ಮುಖ್ಯಮಂತ್ರಿಗಳು ಲಾಟಿ ಪ್ರಹಾರ ನಡೆಸಿ ಹೋರಾಟವನ್ನು ಹತ್ತಿಕ್ಕುವ ಕಾರ್ಯ ಮಾಡಿದ್ದಾರೆ, ಗೃಹ ಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳ ಮೇಲೆ ಮತ್ತು ಪೊಲೀಸ್ ಆಯುಕ್ತರ ಮೇಲೆ ಕೂಡಲೇ ಕ್ರಮ ಜರುಗಿಸಬೇಕು ಎಂದು ಸಮಾಜದ ಮುಖಂಡರು ಆಗ್ರಹಿಸಿದರು.
ಬಾಕ್ಸ-
ದಶಕಗಳಿಂದ ಮೀಸಲಾತಿ ಹೋರಾಟ ನಡೆಯುತ್ತಿದೆ. ಯಾವ ಸರಕಾರವೂ ನಮ್ಮ ಹೋರಾಟಕ್ಕೆ ಇಷ್ಟು ಕಡೆಗಣನೆ ಮಾಡಿರಲಿಲ್ಲ. ಈ ಸರಕಾರ ಲಾಠೀ ಪ್ರಹಾರ ನಡೆಸಿ ಹೋರಾಟ ಹತ್ತಿಕ್ಕುವ ಕಾರ್ಯ ಮಾಡಿದ್ದರೂ ಸಹಿತ ಕಾಂಗ್ರೇಸ್ ಪಕ್ಷದಲ್ಲಿನ ಲಿಂಗಾಯತ ಶಾಸಕರು ಸುಮ್ಮನಿರುವುದು ನಮ್ಮ ದುರಾದೃಷ್ಠ. ಸಮಾಜದ ವಿರೋಧಿಯಾದ ಈ ಸರಕಾರಕ್ಕೆ ಹಾಗೂ ಧ್ವನಿ ಮೊಳಗಿಸದ ಶಾಸಕ, ಸಚಿವರಿಗೆ ಮುಂಬರುವ ದಿನಗಳಲ್ಲಿ ಸಮಾಜ ತಕ್ಕ ಪಾಠ ಕಲಿಸಲಿದೆ.
ವಿ.ಹೆಚ್. ಬಿರಾದಾರ, ಪಂಚಮಸಾಲಿ ಸಮಾಜದ ಅಧ್ಯಕ್ಷ ಇಂಡಿ ತಾಲೂಕು.
ಮಾಜಿ ಶಾಸಕ ರವಿಕಾಂತ ಪಾಟೀಲ, ಭೀಮನಗೌಡ ಪಾಟೀಲ, ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ, ಅಯೂಬ ನಾಟೀಕಾರ, ಡಾ. ರಮೇಶ ರಾಠೋಡ, ಬಾಳು ಮುಳಜಿ, ಸೋಮಶೇಖರ ದೇವರ, ಅನೀಲಗೌಡ ಬಿರಾದಾರ, ನಿಂಗನಗೌಡ ಬಿರಾದಾರ ಮಾತನಾಡಿದರು.
ತದನಂತರ ಸ್ಥಳಕ್ಕೆ ಆಗಮಿಸಿದ್ದ ತಹಸೀಲ್ದಾರ ಬಿ.ಎಸ್. ಕಡಕಭಾವಿ ಅವರಿಗೆ ರಾಜ್ಯಪಾಲರಿಗೆ ಬರೆದ ಆರೋಪ ಪತ್ರವನ್ನು ನೀಡಲಾಯಿತು.
ಪತ್ರ ಸ್ವೀಕರಿಸಿದ ತಹಸೀಲ್ದಾರರು ರಾಜ್ಯಪಾಲರಿಗೆ ಈ ಪತ್ರವನ್ನು ಕಳುಹಿಸಿ ಕೊಡಲಾಗುವುದು ಎಂದು ತಿಳಿಸಿದರು.
ಗುರುವಾರರಂದೇ ತಾಲೂಕಿನ ಅಗರಖೇಡ, ಲಚ್ಯಾಣ, ಸಾತಲಗಾಂವ ಗ್ರಾಮಗಳಲದಲಿಯೂ ಸಹ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಶ್ರೀಕಾಂತ ದೇವರ, ಪಾಪು ಕಿತ್ತಲಿ, ಶಿವಾನಂದ ಚಾಳೀಕಾರ, ರವಿಗೌಡ ಪಾಟೀಲ, ಭೀಮರಾಯ ಬಿರಾದಾರ, ಪ್ರಶಾಂತ ಲಾಳಸಂಗಿ, ಸುನೀಲಗೌಡ ಬಿರಾದಾರ, ಅಶೋಕ ಅಕಲಾದಿ, ದಯಾನಂದ ಪಾಟೀಲ, ಅನೀಲಪ್ರಸಾದ ಏಳಗಿ, ಪ್ರಭು ಹೊಸಮನಿ, ಅರವಿಂದ ಪಾಟೀಲ, ಮಹಾದೇವ ಗುಡ್ಡೊಡಗಿ, ಭೀಮರಾಯ ಮದರಖಂಡಿ, ವೀರೇಂದ್ರ ಪಾಟೀಲ, ಗಂಗಾಧರ ಪಾಟೀಲ, ಎಸ್.ಆರ್. ಬಿರಾದಾರ, ಡಿ.ಜಿ. ಜೋತಗೊಂಡ, ಬಿ.ಬಿ. ಬಿರಾದಾರ, ಭೀಮನಗೌಡ ಪಾಟೀಲ, ಶಿವಾನಂದ ದೇವರ, ಸಂತೋಶ ಪಾಟೀಲ, ಪ್ರವೀಣ ಸಲಗರ, ಸಂಜು ನಾಯ್ಕೋಡಿ, ಜೀತಪ್ಪ ಕಲ್ಯಾಣಿ, ದುಂಡಪ್ಪ ಹ್ಯಾಳದ, ಶಿವಾನಂದ ಬೋಳಗೊಂಡ, ಸೋಮನಾಥ ಶಿವೂರ, ಭೀಮರಾಯ ಪಡಶೆಟ್ಟಿ, ಅಶೋಕಗೌಡ ಬಿರಾದಾರ, ಶ್ರೀಶೈಲಗೌಡ ಬಿರಾದಾರ, ಪ್ರಶಾಂತ ಬಿರಾದಾರ, ಶಿವಾನಂದ ಕಾಮಗೊಂಡ, ಪ್ರತೀಕ ಬಿರಾದಾರ, ಸಂಗಣ್ಣ ಹೊಸೂರ, ಶಿವಾನಂದ ಬಿರಾದಾರ, ನೀಲಕಂಠ ಬಿರಾದಾರ, ಸಾಹೇಬಗೌಡ ಪಾಟೀಲ, ದಾದಾಗೌಡ ಪಾಟೀಲ, ಮಲ್ಲು ಚಾಕುಂಡಿ, ಭೀಮ ಪ್ರಚಂಡಿ, ಅಂಬಣ್ಣ ಕವಟಗಿ ಸೇರಿದಂತೆ ಐದು ನೂರಕ್ಕೂ ಹೆಚ್ಚು ಸಮಾಜ ಬಾಂಧವರು ಭಾಗವಹಿಸಿದ್ದರು.

BIJAPUR NEWS public public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.