ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ಅವರು ಡಿ.19 ಹಾಗೂ 20ರಂದು ವಿಜಯಪುರ ಜಿಲ್ಲೆಗೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಡಿ.19 ರಂದು ಜಿಲ್ಲೆಗೆ ಆಗಮಿಸಿ, ಜಿಲ್ಲಾ ಮಟ್ಟದ ಮಕ್ಕಳ ಅಹವಾಲು ಮತ್ತು ಸಂವಾದ ಕಾರ್ಯಕ್ರಮ, ನರ್ಸಿಂಗ್ ವಿದ್ಯಾರ್ಥಿಗಳಿಗೆ ಆಯೋಜಿಸಿರುವ ಮಕ್ಕಳಿಗಿರುವ ಕಾನೂನುಗಳ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಡಿ.20 ರಂದು ಇಂಡಿ ತಾಲೂಕಿನ ಅಥರ್ಗಾದಲ್ಲಿ ಪಿಯುಸಿ ಮಕ್ಕಳಿಗೆ ಆಯೋಜಿಸಲಾದ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
