ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳಿ ನಿಯಮಿತ ಬೆಂಗಳೂರು ಮತ್ತು ಪಶುಪಾಲನಾ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆ ವಿಜಯಪುರ ವತಿಯಿಂದ 2024-25ನೇ ಸಾಲಿನಲ್ಲಿ 5 ವಾರದ ಕೋಳಿ ಮರಿಗಳನ್ನು ಉತ್ಪಾದಿಸಿ ಗ್ರಾಮೀಣ ಪರಿಶಿಷ್ಟ ಜಾರಿ, ಪರಿಶಿಷ್ಟ ಪಂಗಡ, ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ ತಲಾ 50 ಕೋಳಿಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಆಸಕ್ತ ರೈತ ಮಹಿಳೆಯರು ದಿನಾಂಕ : 25-12-2024ರೊಳಗೆ ಆಯಾ ತಾಲೂಕಾ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ) ಪಶುಪಾಲನಾ ಇಲಾಖೆಗೆ ಅರ್ಜಿಗಳನ್ನು ಸಲ್ಲಿಸಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಆಯಾ ತಾಲೂಕಾ ಪಶು ಆಸ್ಪತ್ರೆ ಕಚೇರಿಗಳನ್ನು ಸಂಪರ್ಕಿಸಬಹುದಾಗಿಎ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
