ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ 2024-25ನೇ ಸಾಲಿನ ವಿಜಯಪುರ ಜಿಲ್ಲಾ ಮಟ್ಟದ ವಿಕಲಚೇತನರ ಕ್ರೀಡಾಕೂಟ ಡಿ.17ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 10-30ಕ್ಕೆ ಕ್ರೀಡಾಕೂಟವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ. ಬಿ. ಪಾಟೀಲ ಅವರು ಉದ್ಘಾಟಿಸಲಿದ್ದಾರೆ. ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್ ಪಾಟೀಲ, ಕರ್ನಾಟಕ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ ಹಾಗೂ ವಿಧಾನ ಪರಿಷತ್ತಿನ ಶಾಸಕರಾದ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟಜೆರ್ಂಟ್ ನಿಯಮಿತದ ಅಧ್ಯಕ್ಷರು ಹಾಗೂ ಶಾಸಕರಾದ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ, ಶ್ರೀಮತಿ ಸುಧಾ ಮೂರ್ತಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ವಿಠ್ಠಲ ಕಟಕಧೊಂಡ ರಾಜುಗೌಡ ಪಾಟೀಲ, ಅಶೋಕ ಮನಗೂಳಿ, ಕೇಶವ ಪ್ರಸಾದ ಎಸ್., ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಕಾಂತಾ ನಾಯ್ಕ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ಮಹಾನಗರ ಪಾಲಿಕೆಯ ಮೇಯರ್ ಮಹೇಜಬಿನ ಹೊರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕನ್ನಾನ್ ಮುಶ್ರೀಫ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.
ಕ್ರೀಡಾಕೂಟದಲ್ಲಿ 100 ಮೀ.ಓಟ, ಗುಂಡು ಎಸೆತ, ಬಕೇಟನಲ್ಲಿ ರಿಂಗ್ ಹಾಕುವುದು, ಥ್ರೋಬಾಲ್ ಎಸೆತ, 50 ಮೀ. ಅಂಧರ ಕೆನ ನಡಿಗೆ, ಮ್ಯೂಜಿಕಲ್ ಚೇರ್, ಉದ್ದಜಿಗಿತ ವಿವಿಧ ಕ್ರೀಡೆಗಳು ಜರುಗಲಿವೆ.
