Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಿಗಮಗಳಿಗೆ ಅನುದಾನಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ನಿಗಮಗಳಿಗೆ ಅನುದಾನಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಮೊಳಗಿದ “ನಿಗಮಗಳಿಗೆ ಅನುದಾನ ಬಿಡುಗಡೆ ಮಾಡಿ ಇಲ್ಲವೇ ನಿಗಮಗಳನ್ನು ಮುಚ್ಚಿಬಿಡಿ” ಘೋಷಣೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ‘ನಿಗಮಗಳಿಗೆ ಅನುದಾನ ಬಿಡುಗಡೆ ಮಾಡಿ’, ‘ಇಲ್ಲವೇ ನಿಗಮಗಳನ್ನು ಮುಚ್ಚಿಬಿಡಿ’, ಎಂಬ ಘೋಷಣೆ ಮೂಲಕ ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಉದ್ದೇಶಿಸಿ ಇಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವಿಜಯಪುರ ಜಿಲ್ಲಾಧ್ಯಕ್ಷ ಸಿದ್ದು ಬುಳ್ಳಾ ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮಾತನಾಡುವ ಮೂಲಕ, ಹಿಂದುಳಿದ ವರ್ಗಗಳು ತಾವು ಪಡೆಯುತ್ತಿದ್ದ ಆರ್ಥಿಕ ನೆರವಿನಿಂದ ವಂಚಿತವಾಗುತ್ತಿವೆ. ಅರಿವು ಯೋಜನೆಗಳ ಮೂಲಕ ವಿದ್ಯಾರ್ಥಿಗಳಿಗೆ ಸಿಗುವಂತ ಆರ್ಥಿಕ ನೆರವು ಕೂಡಾ ಸಿಗುತ್ತಿಲ್ಲ. ಸಣ್ಣ ಹಿಡುವಳಿದಾರರಿಗೆ ಸಿಗುವಂತಹ ಗಂಗಾ ಕಲ್ಯಾಣ ಯೋಜನೆ ಸಂಪೂರ್ಣ ನಿಂತುಹೋಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಅಹಿಂದ ಹೇಳಿದಂಥವರು ಹಿಂದುಳಿದ ವರ್ಗಗಳಿಗೆ ವಂಚನೆ ಮಾಡಿ ಆಡಳಿತ ನಡೆಸುತ್ತಿದ್ದಾರೆ. ಹಿಂದುಳಿದ ವರ್ಗಗಳ ಪರವಾಗಿರುವಂಥವರು ಎಂದು ಹೇಳಿಕೊಂಡವರು ಸಂಪೂರ್ಣವಾಗಿ ಅವರು ಹೇಳಿದ್ದ ಮಾತನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಟೀಕಿಸಿದರು. ಹಿಂದುಳಿದ ವರ್ಗಗಳ ಧ್ವನಿಯಾಗಿ, ಭಾರತೀಯ ಜನತಾ ಪಾರ್ಟಿಯ ಸಿದ್ಧಾಂತದ ಅನುಸಾರವಾಗಿ ಜನರ ಧ್ವನಿಯಾಗಿ ಹೋರಾಟ ಮಾಡುವ ನಿರ್ಣಯ ಅಂಗೀಕರಿಸಿದ್ದೇವೆ. ಇಡೀ ರಾಜ್ಯಾದ್ಯಂತ ಹಿಂದುಳಿದ ವರ್ಗದ ಆರ್ಥಿಕ, ಔದ್ಯೋಗಿಕ, ಅವರ ಕೃಷಿ ಚಟುವಟಿಕೆಗೆ ಸಂಬಂಧಪಟ್ಟಂತಹ ಮತ್ತು ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಅನುದಾನವನ್ನು ಈ ಸರಕಾರ ಸ್ಥಗಿತ ಮಾಡಿದೆ ಎಂದು ಆಕ್ಷೇಪಿಸಿದರು. ಈ ಸರಕಾರವು ಹಿಂದುಳಿದವರಿಗೆ ಯಥೇಚ್ಛವಾಗಿ ಅನುದಾನವನ್ನು ಬಿಡುಗಡೆ ಮಾಡುವ ಮೂಲಕ ಅರ್ಜಿಗಳನ್ನು ಕರೆದು ಹಿಂದುಳಿದ ವರ್ಗಗಳ ಸಮುದಾಯಗಳಿಗೆ ಕಲ್ಯಾಣ ಕಾರ್ಯಕ್ಕೆ ಅವಕಾಶ ಮಾಡಿಕೊಡದೆ ಇದ್ದರೆ ಮುಂದಿನ ದಿನದಲ್ಲಿ ಹಿಂದುಳಿದ ವರ್ಗದ ಪರವಾಗಿ ಬೃಹತ್ ಹೋರಾಟ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು.
ಕಾಂಗ್ರೆಸ್ ಸರಕಾರವು ಹಿಂದುಳಿದ ವರ್ಗದ ಸ್ವಾಭಿಮಾನಿ ಬದುಕು, ಸ್ವಾವಲಂಬಿ ಬದುಕನ್ನು ಕಸಿದುಕೊಂಡ ಹಿಂದುಳಿದ ವರ್ಗಗಳ ಪರವಾಗಿ ಮಾತನಾಡಲು ಯಾವ ನೈತಿಕ ಹಕ್ಕೂ ಇಲ್ಲ ಎಂದು ತಿಳಿಸಿದರು.
ದೇವರಾಜ ಅರಸು ನಿಗಮ ಸೇರಿ ಎಲ್ಲ ಸಮುದಾಯದ ನಿಗಮಗಳಿಗೆ ಹಿಂದಿನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಒಂದು ಸಾವಿರ ಕೋಟಿ ಬಿಡುಗಡೆ ಮಾಡಿದ್ದರು. ಈಗಿನ ಸರ್ಕಾರ ನೆಪ ಮಾತ್ರಕ್ಕೆ 150 ಕೋಟಿ ಬಿಡುಗಡೆ ಮಾಡಿದೆ. ಅಂದರೆ ಹಿಂದುಳಿದ ವರ್ಗಗಳ ಎಲ್ಲ ಸಮುದಾಯದ ನಿಗಮಗಳಿಗೆ ಕೊಡುವ ಹಣವು ಪಂಚ ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆಯಾಗಿದೆ ಎಂದು ಅವರು ಆರೋಪಿಸಿದರು.
ಚಿದಾನಂದ ಚಲವಾದಿ, ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಮಂಜುನಾಥ್ ಮೀಸೆ, ಓಬಿಸಿ ಮೋರ್ಚಾ ಕಾರ್ಯಕಾರಿ ಸದಸ್ಯರಾದ ರಾಜಕುಮಾರ್ ಸಗಾಯಿ, ರವಿ ನಾಯ್ಕೋಡಿ, ಜಿಲ್ಲಾ ಉಪಾಧ್ಯಕ್ಷೆ ಶಿಲ್ಪ ಕುದರಗೊಂಡ ಮಾತನಾಡಿದರು.
ನಗರ ಅಧ್ಯಕ್ಷ ಶಂಕರ್ ಹೂಗಾರ್ ಮಹಿಳಾ ಮೋರ್ಚಾ ಅಧ್ಯಕ್ಷೆ ಸಪ್ನ ಕಣ್ಮುಚ್ಚಿನಾಳ್, ಮಲ್ಲಮ್ಮ ಜೋಗುರ್, ಸದಾಶಿವ್ ಬುಟ್ಟಾಳೆ, ಸುಭಾಷ್ ಬಿಸೇ, ಚಿನ್ನು ಚಿನಗುಂಡಿ, ರಾಹುಲ್ ಔರಂಗಬಾದ್, ಹನುಮಂತರಾಯ ಗುಡದಿನ್ನಿ, ವಿನೋದ್, ಓಬಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲು ಸೇಬಗೂಂಡ, ರೋಹಿತ್ ಸಿಂಧೆ, ಆನಂದ ಚೌದ್ರಿ, ಭರತ್ ಕೋಳಿ, ಪಾಪು ಸಿಂಗ್ ರಜಪೂತ್, ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.