ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಸ್ಥಳೀಯ ನೆಲೆ ಪ್ರಕಾಶನದ ಎಂ.ಎಂ.ಪಡಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ನಾಡಿನ ಜಾನಪದ ವಿದ್ವಾಂಸರಿಗೆ ಕೊಡಮಾಡುವ ವಾರ್ಷಿಕ ಪ್ರಶಸ್ತಿ ದೇಸಿ ಸನ್ಮಾನ ಪ್ರಶಸ್ತಿ ಪ್ರದಾನ ಸಮಾರಂಭವು ಪಟ್ಟಣದ ಸಾರಂಗಮಠದ ಸಭಾ ಭವನದಲ್ಲಿ ಡಿ.೧೫ರಂದು ಬೆಳಿಗ್ಗೆ ೧೧ ಗಂಟೆಗೆ ನಡೆಯಲಿದೆ.
ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಸಾನಿಧ್ಯವಹಿಸುವರು. ಫ.ಗು.ಹಳಕಟ್ಟಿ ಸಂಶೋಧನ ಕೇಂದ್ರದ ಕಾರ್ಯದರ್ಶಿ ಡಾ.ಎಂ.ಎಸ್.ಮದಭಾವಿ ಅವರು ಅಧ್ಯಕ್ಷತೆವಹಿಸಲಿದ್ದಾರೆ.
ಜಾನಪದ ವಿದ್ವಾಂಸ ಡಾ.ಸಂಗಮೇಶ ಬಿರಾದಾರ ಅವರಿಗೆ ದೇಸಿ ಸನ್ಮಾನ ಪ್ರಶಸ್ತಿಯನ್ನು ಆಕ್ಲೆಂಡ್‌ನಲ್ಲಿನ ಬಸವ ಸಮಿತಿ ಸಂಸ್ಥಾಪಕ ಡಾ.ಲಿಂಗಣ್ಣ ಕಲಬುರ್ಗಿ ಅವರು ಪ್ರದಾನ ಮಾಡುವರು.
ಡಾ.ಸಂಗಮೇಶ ಬಿರಾದಾರ ಅವರ ಬದುಕು-ಬರಹ ಕೃತಿಯನ್ನು ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ ಬಿಡುಗಡೆಗೊಳಿಸವರು. ವಿಶ್ರಾಂತ ಪ್ರಾಧ್ಯಾಪಕ ಡಾ.ಎಂ.ಬಿ.ಹೂಗಾರ ಲೇಖಕರ ಮಾತುಗಳನ್ನಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

