ವಿಶ್ವ ವಿಕಲಚೇತನರ ದಿನ & ಮಾನವ ಹಕ್ಕುಗಳ ದಿನ ನಿಮಿತ್ತ ಹಮ್ಮಿಕೊಂಡ ಕಾನೂನು ಅರಿವು ನೆರವು ಕಾರ್ಯಕ್ರಮ
ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ವಿಕಲಚೇತನರು ವಿಶೇಷ ಚೇತನರಾಗಿದ್ದು, ತಮ್ಮ ವಿಕಲತೆ ಕುರಿತು ಕೀಳರಿಮೆ ಭಾವನೆ ಹೊಂದದೆ ಎಂದಿಗೂ ಎದೆಗುಂದದೆ, ಜೀವನದಲ್ಲಿ ಮುನ್ನಡೆಯಬೇಕು ಎಂದು ಸಿಂದಗಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಹರೀಶ ಜಾದವ್ ಹೇಳಿದರು.
ಪಟ್ಟಣದ ತಾಲೂಕು ಪಂಚಾಯತ್ ಸಭಾಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ಮಕೀಲರ ಸಂಘ, ತಾಲೂಕು ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಶಿಶು ಅಭಿವೃದ್ಧಿ ಯೋಜನಾ ಇಲಾಖೆಯ ಸಹಯೋಗದಲ್ಲಿ ಜರುಗಿದ ವಿಶ್ವ ವಿಕಲಚೇತನರ ದಿನ ಹಾಗೂ ಮಾನವ ಹಕ್ಕುಗಳ ದಿನಾಚರಣೆಯ ನಿಮಿತ್ತ ಹಮ್ಮಿಕೊಂಡ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿಕಲಚೇತನರಾದ ಸ್ಟೀಫನ್ ಹಾಕಿನ್ಸ್, ಪುಟ್ಟರಾಜ ಗವಾಯಿಗಳು ಸೇರಿದಂತೆ ಹಲವಾರು ಗಣ್ಯರು ಸಾಧಕರು ಸಾಧನೆಯನ್ನು ನೆನೆದು ತಾವು ಸಾಧನೆ ಮಾಡಿ ಮುಖ್ಯವಾಹಿನಿಗೆ ಬರಬೇಕು. ಭಗವಂತ ಎಲ್ಲರಿಗೂ ಒಂದೊAದು ಶಕ್ತಿ ಕೊಟ್ಟಿರುತ್ತಾನೆ. ಅದೇ ರೀತಿಯ ವಿಕಲಾಂಗವಾಗಿದ್ದರೂ ಅದಕ್ಕೆ ಪೂರಕವಾಗಿ ಮತ್ತೊಂದು ವಿಶೇಷ ಶಕ್ತಿ ಕೊಟ್ಟಿರುತ್ತಾನೆ ಎಂದರು.
ಈ ವೇಳೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಸ್.ಎನ್.ಹಿರೇಮಠ ಮಾತನಾಡಿ, ವಿಶೇಷಚೇತನರು ಸರಕಾರದಿಂದ ದೊರೆಯುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾ.ಪಂ ಇಒ ರಾಮು ಅಗ್ನಿ ವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಎಸ್.ಬಿ.ಪಾಟೀಲ ಗುಂದಗಿ, ಅಪರ ಸರಕಾರಿ ವಕೀಲ ಬಿ.ಜಿ.ನೆಲ್ಲಗಿ, ಎಸಿಡಿಪಿಒ ಎಸ್.ಎನ್.ಕೋರವಾರ, ಮುತ್ತು ಸಾತಿಹಾಳ ಸೇರಿದಂತೆ ವಕೀಲರ ಸಂಘದ ಪದಾಧಿಕಾರಿಗಳು, ಅಂಗನವಾಡಿ ಮೇಲ್ವಿಚಾರಕಿಯರು, ಕಾರ್ಯಕರ್ತೆಯರು, ತಾಲೂಕಿನ ಎಂಆರ್‌ಡಬ್ಲೂö್ಯ ಹಾಗೂ ವಿಆರ್‌ಡಬ್ಲೂö್ಯ ಸದಸ್ಯರು ಹಾಗೂ ವಿಕಲಚೇತನರು ಇದ್ದರು.

