Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪರಿಸರ ಕಾಳಜಿ ಮೆರೆಯುತ್ತಿರುವ ಮುಖ್ಯಗುರು ವೈ.ಎನ್.ಅಮರಿ

ಮಕ್ಕಳಿಗೆ ಅವಶ್ಯಕ.. ಬಾಹ್ಯ ಮತ್ತು ಆಂತರಿಕ ಪ್ರವಾಸ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 17, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»Uncategorized»ವಕ್ಫ್ ವಿವಾದ: ಚರ್ಚೆಗೆ ಅವಕಾಶ ನೀಡದ ಸ್ಪೀಕರ್
Uncategorized

ವಕ್ಫ್ ವಿವಾದ: ಚರ್ಚೆಗೆ ಅವಕಾಶ ನೀಡದ ಸ್ಪೀಕರ್

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಧಾನಸಭೆಯಿಂದ ಬಿಜೆಪಿ ಶಾಸಕರ ಸಭಾತ್ಯಾಗ | ಸ್ಪೀಕರ್ ಪಕ್ಷಪಾತಿ ಎಂಬ ಆರೋಪ | ಪಕ್ಷದ ನಿರ್ಧಾರ ಗೌರವಿಸದ ಶಾಸಕರು

ಬೆಳಗಾವಿ: ವಕ್ಪ್ ಆಸ್ತಿ ವಿವಾದ ಕುರಿತ ಚರ್ಚೆಗೆ ಸ್ಪೀಕರ್ ಯುಟಿ ಖಾದರ್ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ಶಾಸಕರು ಶುಕ್ರವಾರ ವಿಧಾನಸಭೆಯಿಂದ ಸಭಾತ್ಯಾಗ ನಡೆಸಿದರು.
ಬಿಜೆಪಿ ಶಾಸಕ ಎನ್. ಮುನಿರತ್ನ ವಿರುದ್ಧದ ಹನಿಟ್ರಾಪ್ ಹಾಗೂ ಎದುರಾಳಿಗಳಿಗೆ ಹೆಚ್ ಐವಿ ಸೋಂಕು ತಗುಲುವ ಇಂಜೆಕ್ಷನ್ ಆರೋಪ ಕುರಿತು ಸದನದಲ್ಲಿ ಚರ್ಚೆಗೆ ಕಾಂಗ್ರೆಸ್ ಶಾಸಕರು ಪಟ್ಟು ಹಿಡಿದಾಗ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದ ಬಿಜೆಪಿ ಶಾಸಕರು ಸಭೆಯಿಂದ ನಿರ್ಗಮಿಸಿದರು.
ಸಭಾತ್ಯಾಗದ ನಂತರ ಆರ್.ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿ, ಸ್ಪೀಕರ್ ಒಂದು ಕಡೆಯವರಂತೆ ವರ್ತಿಸುತ್ತಿದ್ದಾರೆ. ವಿಧಾನಸಭೆಯಲ್ಲಿ ವಕ್ಪ್ ವಿಚಾರ ಕುರಿತ ಚರ್ಚೆಗೆ ಸೋಮವಾರವೇ ಅವರ ಬಳಿ ಮನವಿ ಮಾಡಿದ್ದೆ. ಸಾಮಾನ್ಯವಾಗಿ ಪ್ರಶ್ನೋತ್ತರ ಅವಧಿ ನಂತರ ಚರ್ಚೆಗೆ ಸಮಯವನ್ನು ನೀಡಲಾಗುತ್ತದೆ. ಉದ್ದೇಶಪೂರ್ವಕವಾಗಿ ರಾಜ್ಯ ಸರ್ಕಾರ ಚರ್ಚೆಗೆ ಅವಕಾಶ ಮಾಡಿಕೊಡುತ್ತಿಲ್ಲ ಎಂದು ಆರೋಪಿಸಿದರು
ಈ ಸಂಬಂಧ ಮನವಿ ಮಾಡಿ ನಾಲ್ಕು ದಿನ ಕಳೆಯಿತು. ವಕ್ಫ್ ವಿವಾದ, ಬಾಣಂತಿಯರು, ನವಶಿಶುಗಳ ಮರಣ, ರೂ. 700 ಕೋಟಿ ಅಬಕಾರಿ ಹಗರಣ, ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರ ಕುರಿತು ಪ್ರಶ್ನೆಗೆ ಬಯಸಿದ್ದೇವು. ಪ್ರಮುಖವಾದ ಬೇಡಿಕೆಗಳನ್ನು ಎತ್ತಿದಾಗ ಸದನವನ್ನು ಮುಂದೂಡಲಾಯಿತು ಎಂದು ಅವರು ಹೇಳಿದರು.
ಕೇಂದ್ರದಿಂದ ಅನುದಾನ ಬಿಡುಗಡೆಯಾಗಿಲ್ಲ ಎಂದು ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಶಾಸಕರು ಕೂಡಾ ಆಕ್ರೋಶ ವ್ಯಕ್ತಪಡಿಸಿದರು.
ಮತ್ತೊಂದೆಡೆ ಸ್ಪೀಕರ್ ಮಾತುಗಳನ್ನು ಕಾಂಗ್ರೆಸ್ ಸದಸ್ಯರು ಗೌರವಿಸುತ್ತಿಲ್ಲ. ಸ್ಪೀಕರ್ ಕೂಡಾ ಒಂದು ಕಡೆಯವರಂತೆ ವರ್ತಿಸುತ್ತಿದ್ದು, ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ಅಧಿವೇಶನದಲ್ಲಿ ಏನು ಸಂದೇಶ ರವಾನಿಸುತ್ತಿದ್ದಾರೆ ಎಂದು ಪ್ರಶ್ನಿಸಿದ ಅಶೋಕ್, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿಧಾನಸಭೆಯಲ್ಲಿ ಚರ್ಚೆಗೆ ಅವಕಾಶ ನೀಡದೆ ಪ್ರತಿಪಕ್ಷಗಳ ಸಂವಿಧಾನಿಕ ಹಕ್ಕನ್ನು ಕಸಿದುಕೊಳ್ಳುತ್ತಿದೆ ಎಂದು ಆರೋಪಿಸಿದರು.

ಪಕ್ಷದ ನಿರ್ಧಾರಕ್ಕೆ ಕ್ಯಾರೆ ಎನ್ನದ ಶಾಸಕರು

ಬೆಳಗಾವಿ: ವಿಧಾನಸಭೆಯಲ್ಲಿಂದು ಪ್ರತಿಪಕ್ಷ ಬಿಜೆಪಿಯ ಎಲ್ಲಾ ಸದಸ್ಯರು ಸಭಾತ್ಯಾಗ ನಡೆಸಿದಾಗ ಬಿಜೆಪಿಯ ಶಾಸಕರಾದ ಎಸ್. ಟಿ. ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರು ಪಕ್ಷದ ನಿರ್ಧಾರಕ್ಕೆ ಕ್ಯಾರೆ ಎನ್ನದೇ ಸದನದಲ್ಲಿಯೇ ಕುಳಿತರು.
ಆಡಳಿತಾರೂಢ ಪಕ್ಷದ ನಡೆ ವಿರುದ್ಧ ಆಕ್ರೋಶಗೊಂಡ ಅಶೋಕ್ ಮತ್ತಿತರ ಬಿಜೆಪಿ ಶಾಸಕರು ಸಭಾತ್ಯಾಗ ಮಾಡುತ್ತಿದ್ದರೂ ಕ್ಯಾರೇ ಎನ್ನದ ಸೋಮಶೇಖರ್ ತಮ್ಮ ಆಸನದಲ್ಲಿಯೇ ಕುಳಿತರು. ಬಳಿಕ ಶಿವರಾಮ್ ಹೆಬ್ಬಾರ್ ಕೂಡಾ ಸೋಮಶೇಖರ್ ಅವರ ಜೊತೆಗೂಡಿದರು.
ಕೆಲವು ದಿನಗಳಿಂದ ಈ ಇಬ್ಬರು ಶಾಸಕರು ಬಿಜೆಪಿಯಿಂದ ಅಂತರ ಕಾಯ್ದುಕೊಂಡು, ಬಂಡಾಯ ಶಾಸಕರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚಿಗೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸೋಮಶೇಖರ್ ಹಾಗೂ ಹೆಬ್ಬಾರ್ ವಿರುದ್ಧ ಕ್ರಮಕ್ಕೆ ನಿರ್ಧರಿಸಲಾಗಿದೆ ಎನ್ನಲಾಗಿದೆ.

“ಸ್ಪೀಕರ್ ಖಾದರ್ ಅವರಿಗೆ ಸಚಿವ ಸ್ಥಾನ ನೀಡದ ಹಿನ್ನೆಲೆಯಲ್ಲಿ ಸದನದಲ್ಲಿ ಕೋಪ ತೋರಿಸುತ್ತಿದ್ದಾರೆ. ಯೋಜಿತ ರೀತಿಯಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿಯೊಂದಿಗೆ ಜಗಳಕ್ಕೆ ನಿಲ್ಲುತ್ತಿದ್ದಾರೆ. ಹೀಗಾಗಿ ಬಿಜೆಪಿ ಶಾಸಕರ ಸದನದಿಂದ ಹೊರ ನಡೆದರು.”

– ಆರ್. ಅಶೋಕ್
ವಿದಾನಸಭೆ ವಿಪಕ್ಷ ನಾಯಕರು

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪರಿಸರ ಕಾಳಜಿ ಮೆರೆಯುತ್ತಿರುವ ಮುಖ್ಯಗುರು ವೈ.ಎನ್.ಅಮರಿ

ಮಕ್ಕಳಿಗೆ ಅವಶ್ಯಕ.. ಬಾಹ್ಯ ಮತ್ತು ಆಂತರಿಕ ಪ್ರವಾಸ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 17, 2026

ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪರಿಸರ ಕಾಳಜಿ ಮೆರೆಯುತ್ತಿರುವ ಮುಖ್ಯಗುರು ವೈ.ಎನ್.ಅಮರಿ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಅವಶ್ಯಕ.. ಬಾಹ್ಯ ಮತ್ತು ಆಂತರಿಕ ಪ್ರವಾಸ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 17, 2026
    In ದಿನಪತ್ರಿಕೆ
  • ಹಲಸಂಗಿ ಗೆಳೆಯರ ಪ್ರತಿಷ್ಠಾನದ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಎಸ್ಐಆರ್: ಅವಧಿಗೆ ಮುನ್ನವೇ ಶೇ.೧೦೦ರಷ್ಟು ಸಾಧನೆ
    In (ರಾಜ್ಯ ) ಜಿಲ್ಲೆ
  • ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು, ಬರದ ಮುನ್ಸೂಚನೆ
    In (ರಾಜ್ಯ ) ಜಿಲ್ಲೆ
  • ಜು.೧೮-೧೯ ಕ್ಕೆ ಅಂಬಾ ಭವಾನಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮನೆ ಮನೆ ಗಣತಿ & ಡಿಜಿಟಲೀಕರಣ ಕಾರ್ಯಕ್ಕೆ ವೇಗ
    In (ರಾಜ್ಯ ) ಜಿಲ್ಲೆ
  • ೨,೫೨,೫೭೦ ಮತದಾರರ ಗಣತಿ ನಮೂನೆ ವಿತರಣೆ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಬುರುಡೆ ಬಿಡುವ ಸರ್ಕಾರ :ಭೂಸನೂರ ವಾಗ್ದಾಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.