Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»Uncategorized»ವಿಜಯಪುರ ಜಿಲ್ಲೆಗೆ 371ಜೆ ಮೀಸಲಾತಿ ಕುರಿತು ಶಾಸಕರು ಧ್ವನಿ ಎತ್ತಲಿ
Uncategorized

ವಿಜಯಪುರ ಜಿಲ್ಲೆಗೆ 371ಜೆ ಮೀಸಲಾತಿ ಕುರಿತು ಶಾಸಕರು ಧ್ವನಿ ಎತ್ತಲಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಸೇರಿದಂತೆ ವಿವಿಧ ರಾಜಕೀಯ ಮುಖಂಡರುಗಳು ವಿಜಯಪುರ ಜಿಲ್ಲೆಯ ಯುವ ಜನರ ಮತ ಪಡೆಯುವಗೋಸ್ಕರ ವಿಜಯಪುರ ಜಿಲ್ಲೆಗೆ ರಾಜಕೀಯ ಹಿತಾಸಕ್ತಿಗಾಗಿ ಈ ಹಿಂದೆ ತಪ್ಪಿ ಹೋಗಿರುವ 371 ಜೆ ಕಲ್ಯಾಣ ಕರ್ನಾಟಕ ಮೀಸಲಾತಿಯನ್ನು ಒದಗಿಸುವುದಾಗಿ ಭರವಸೆ ನೀಡಿದ್ದರು. ಚುನಾವಣೆ ಮುಗಿದ ನಂತರ ಯಾವೊಬ್ಬ ಜನಪ್ರತಿನಿಧಿಗಳು ವಿಜಯಪುರ ಜಿಲ್ಲೆಗೆ ನ್ಯಾಯಯುತವಾಗಿ ಸಿಗಬೇಕಾಗಿರುವ ಶೈಕ್ಷಣಿಕ ಹಾಗೂ ಔದ್ಯೋಗಿಕ ಮೀಸಲಾತಿಯಾಗಿರುವ 371ಜೆ ಬಗ್ಗೆ ಮಾತನಾಡದೇ ಜಿಲ್ಲೆಯ ಯುವ ಜನತೆಗೆ ಜನಪ್ರತಿನಿಧಿಗಳು ಅನ್ಯಾಯ ಎಸಗುತ್ತಿರುವುದು ಖಂಡನೀಯವಾದುದು ಕೂಡಲೇ ಬೆಳಗಾವಿಯಲ್ಲಿ ಜರುಗುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಜಯಪುರ ಜಿಲ್ಲೆಗೆ ನ್ಯಾಯಯುತವಾಗಿ ಸಿಗಬೇಕಾಗಿರುವ 371ಜೆ ಮೀಸಲಾತಿ ಬಗ್ಗೆ ಪಕ್ಷಾತೀತವಾಗಿ ಧ್ವನಿ ಎತ್ತಿ ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಶಿಫಾರಸ್ಸು ಕಳುಹಿಸಲು ಮುಂದಾಗಬೇಕೆಂದು ಕರ್ನಾಟಕ ರಾಜ್ಯ ಪದವೀಧರ ಒಕ್ಕೂಟದ ಅಧ್ಯಕ್ಷ ಲಾಯಪ್ಪ ಇಂಗಳೆ ಹಾಗೂ ಕಾರ್ಯಾಧ್ಯಕ್ಷರಾದ ಕಲ್ಲಪ್ಪ ಶಿವಶರಣ ಅವರು ಜಂಟಿಯಾಗಿ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ವಿಜಯಪುರ ಜಿಲ್ಲೆಯು ನಂಜುಡಪ್ಪ ವರದಿಯ ಪ್ರಕಾರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ಜಿಲ್ಲೆಯಾಗಿದೆ. ಈ ಹಿಂದೆ 1724 ವರೆಗೆ ಅಖಂಡ ವಿಜಯಪುರ ಜಿಲ್ಲೆ ಹೈದ್ರಾಬಾದ ನಿಜಾಮನ ಆಡಳಿತದಲ್ಲಿತ್ತು ಎಂಬುದು ಸರ್ಕಾರದ ಗೆಜಿಟಿಯರ್‌ನಲ್ಲಿ ದಾಖಲಾಗಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಜಿಲ್ಲೆಯ ಮಗ್ದ ಜನರ ಮೇಲೆ ರಜಾಕರ ಘೋರ ಹಾವಳಿ ನಡೆದಿರುವ ಬಗ್ಗೆ ಐತಿಹಾಸಿಕ ದಾಖಲೆಗಳು ಸಾರಿ ಹೇಳುತ್ತಿವೆ. ಐತಿಹಾಸಿಕವಾಗಿ ವಿಜಯಪುರ ಜಿಲ್ಲೆ ಅನ್ಯಾಯಕ್ಕೊಳಪಟ್ಟಿದೆ. ಮದ್ರಾಸ್ ಪ್ರಾಂತದಲ್ಲಿರುವ ಬಳ್ಳಾರಿ ಜಿಲ್ಲೆಯನ್ನು ಸೇರಿಸಲು ಅಲ್ಲಿನ ಜನಪ್ರತಿನಿಧಿಗಳು ತಮ್ಮ ರಾಜಕೀಯ ಹಿತಾಸಕ್ತಿ ಮರೆತು ಅಂದಿನ ಸರ್ಕಾರದ ಮೇಲೆ ಒತ್ತಡ ತಂದು ಮೀಸಲಾತಿ ಲಾಭವನ್ನು ಅಲ್ಲಿನ ಯುವ ಜನತೆಗೆ ಒದಗಿಸಿ ಯಶಸ್ವಿಯಾದರು.
ನ್ಯಾಯಯುತವಾಗಿ ವಿಜಯಪುರ ಜಿಲ್ಲೆಗೆ ಸಿಗಬೇಕಾಗಿದ್ದ ಮೀಸಲಾತಿಯ ಬಗ್ಗೆ ಕರ್ನಾಟಕ 5ನೇ ವಿಧಾನ ಸಭೆಯ ಮುದ್ದೇಬಿಹಾಳದ ಶಾಸಕರಾಗಿದ್ದ ದಿವಂಗತ ಎಂ.ಎಂ. ಸಜ್ಜನ ಅವರು ಅಂದಿನ ಕೇಂದ್ರ ಮತ್ತು ರಾಜ್ಯ ಸರ್ಕಾರ ಮತ್ತು ವಿಜಯಪುರ ಮತ್ತು ಬಾಗಲಕೋಟ ಎಲ್ಲ ಜನಪ್ರತಿನಿಧಿಗಳಿಗೆ ಪತ್ರ ಬರೆದು ಒತ್ತಾಯಿಸಿದ್ದರೂ ಕೂಡಾ ಅಂದು ಅಧಿಕಾರದಲ್ಲಿದ್ದ ಜಿಲ್ಲೆಯ ಯಾವೊಬ್ಬ ಜನಪ್ರತಿನಿಧಿಯು ಜಿಲ್ಲೆಗೆ ಸಿಗಬೇಕಾಗಿದ್ದ ವಿಶೇಷ ಸ್ಥಾನ ಮಾನದ ಬಗ್ಗೆ ಮಾತನಾಡದೆ ತಮಗೆ ಅಧಿಕಾರ ನೀಡಿದ ಜನರಿಗೆ, ಮತದಾರರಿಗೆ ಐತಿಹಾಸಿಕ ದ್ರೋಹ ಬಗೆದರು.
ಹಲವು ವರ್ಷಗಳಿಂದ ಕರ್ನಾಟಕ ರಾಜ್ಯ ಪದವೀಧರ ಒಕ್ಕೂಟದಿಂದ ದಾಖಲೆ ಸಮೇತವಾಗಿ ಜನರಿಗೆ ಮನವರಿಕೆ ಮಾಡುವ ಕೆಲಸ ಪ್ರಾರಂಭಿಸಿದ ನಂತರ ಪ್ರಾದೇಶಿಕ ಪಕ್ಷವಾದ ಕರ್ನಾಟಕ ರಾಷ್ಟç ಸಮಿತಿ ಮತ್ತು ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಕೆಂಗನಾಳ, ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಪ್ರೊ. ರಾಜು ಆಲಗೂರ ಅವರು ತಮ್ಮ ಪ್ರಣಾಳಿಕೆಯಲ್ಲಿ ಜಿಲ್ಲೆಗೆ 371 ಜೆ ಮೀಸಲಾತಿ ನೀಡುವುದಾಗಿ ಭರವಸೆ ನೀಡಿದ್ದರು. ಜೊತೆಗೆ ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡರು ವಿಜಯಪುರ ನಗರದ ಶಾಸಕರಾದ ಬಸನಗೌಡ ಆರ್ ಪಾಟೀಲ ಯತ್ನಾಳ ಅವರು ಮಾಧ್ಯಮ ಹೇಳಿಕೆ ನೀಡಿ ಜಿಲ್ಲೆಗೆ ನ್ಯಾಯಯುತಗಿ ಸಿಗಬೇಕಾದ ಮೀಸಲಾತಿ ಬಗ್ಗೆ ಯಾವುದೇ ಹೋರಾಟಕ್ಕೂ ಸಿದ್ಧ ಎಂದು ಹೇಳಿದ್ದರು. ಚುನಾವಣೆ ಮುಗಿದ ನಂತರ ಯಾರೊಬ್ಬರು ಕೂಡಾ ಮೀಸಲಾತಿ ಬಗ್ಗೆ ಮಾತನಾಡದೆ ಇರುವುದು ದುರಂತದ ವಿಷಯ. ಕೂಡಲೇ ಲೋಕಸಭೆ ಚುನಾವಣೆಯಲ್ಲಿ ತಾ ಮುಂದು ನಾ ಮುಂದು ಎಂದು ಹೇಳಿಕೆ ನೀಡಿ ಪ್ರತಿಷ್ಠೆ ಮೆರೆದು ಜಿಲ್ಲೆಯ ಜನತೆಗೆ ಭರವಸೆ ನೀಡಿರುವ ಎಲ್ಲ ಪಕ್ಷದ ಮುಖಂಡರು ಚಳಿಗಾಲದ ಅಧಿವೇಶನದಲ್ಲಿ ಪಕ್ಷ ಬೇದ ಮರೆತು ವಿಜಯಪುರ ಬಾಗಲಕೋಟ ಅವಳಿ ಜಿಲ್ಲೆಯನ್ನು ಪ್ರತಿನಿಧಿಸುವ ಸಚಿವರು, ಶಾಸಕರು ಹಾಗೂ ವಿಧಾನ ಪರಿಷತ್ತಿನ ಸದಸ್ಯರುಗಳು ವಿದ್ಯಾರ್ಥಿಗಳ ಶೈಕ್ಷಣಿಕ, ಔದ್ಯೋಗಿಕ ಹಿತ ದೃಷ್ಟಿಯಿಂದ ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ 371 ಜೆ ಮೀಸಲಾತಿ ಕುರಿತು ಧ್ವನಿ ಎತ್ತಬೇಕು. ಜಿಲ್ಲೆಯನ್ನು ಮೀಸಲಾತಿಯಿಂದ ಬಿಟ್ಟು ಹೋದ ಪ್ರದೇಶವೆಂದು ಪರಿಗಣಿಸಿ ಜಿಲ್ಲೆಗೆ ನ್ಯಾಯಯುತವಾಗಿ ಕಲ್ಯಾಣ ಕರ್ನಾಟಕ ಮೀಸಲಾತಿ ಒದಗಿಸಲು ಮುಂದಾಗಬೇಕೆಂದು ಆಗ್ರಹಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಸ್.ಎಮ್.ಮಣೂರ ಪಬ್ಲಿಕ್ ಸ್ಕೂಲ್ ನಲ್ಲಿ ಗುಣಾತ್ಮಕ ಶಿಕ್ಷಣ
    In (ರಾಜ್ಯ ) ಜಿಲ್ಲೆ
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.